ಬ್ರೇಕಿಂಗ್ ನ್ಯೂಸ್
31-08-22 06:59 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಇತ್ತೀಚಿಗಷ್ಟೆ ಬಿಡುಗಡೆಗೊಂಡಿರುವ Redmi K50i 5G ಸ್ಮಾರ್ಟ್‌ಪೋನ್ ಖರೀದಿಗಾಗಿ ಮತ್ತಷ್ಟು ಕೊಡುಗೆಗಳನ್ನು ಪ್ರಕಟಿಸಲಾಗಿದೆ. 25,999 ರೂ. ಆರಂಭಿಕ ಬೆಲೆಯಲ್ಲಿ ಬಿಡುಗಡೆಗೊಂಡಿರುವ Redmi K50i 5G ಫೋನ್ ಖರೀಯ ಮೇಲೆ ಇದೀಗ ಎಲ್ಲಾ ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೇಲೆ ಹೆಚ್ಚುವರಿ ₹1,500 ತ್ವರಿತ ರಿಯಾಯಿತಿಯನ್ನು ಘೋಷಿಸಲಾಗಿದ್ದು, ಇದಲ್ಲದೇ 5,000 ವಿನಿಮಯ ಬೋನಸ್ ಮತ್ತು Mi Exchange ಜೊತೆಗೆ 16,500 ವರೆಗೆ ರಿಯಾಯಿತಿಯನ್ನು ನೀಡುವುದಾಗಿ ಕಂಪೆನಿ ತಿಳಿಸಿದೆ. ಇನ್ನು ಈ ಮೊದಲೇ ಲಭ್ಯವಿರುವ ICICI ಬ್ಯಾಂಕ್ ಕಾರ್ಡ್ EMI ಆಯ್ಕೆಗಳ ಮೇಲೆ 3,000 ರಿಯಾಯಿತಿ ಹಾಗೂ ಆಫ್‌ಲೈನ್ ಗ್ರಾಹಕರು ಬ್ಯಾಂಕ್ ಕೊಡುಗೆಯ ಬದಲಿಗೆ Mi ಸ್ಮಾರ್ಟ್ ಸ್ಪೀಕರ್ ಅನ್ನು ಉಚಿತವಾಗಿ ಪಡೆಯಲಿದ್ದಾರೆ ಎಂದು ಕಂಪೆನಿ ಹೇಳಿದೆ.
ಭಾರತದಲ್ಲಿ Redmi K50i 5G ಬೆಲೆಯು ಆರಂಭಿಕ 6GB RAM + 128GB ಸ್ಟೋರೇಜ್ ಆವೃತ್ತಿಗೆ 25,999 ರೂ.ಗಳಾದರೆ, ಇದರ 8GB RAM + 256GB ಸ್ಟೋರೇಜ್ ಮಾದರಿಯು 28,999 ರೂ.ಗಳಿಗೆ ಬಿಡುಗಡೆಗೊಂಡಿದೆ. ಕ್ವಿಕ್ ಸಿಲ್ವರ್, ಫ್ಯಾಂಟಮ್ ಬ್ಲೂ ಮತ್ತು ಸ್ಟೆಲ್ತ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರಲಿರುವ Redmi K50i 5G ಸ್ಮಾರ್ಟ್‌ಫೋನನ್ನು Amazon, Mi.com, Mi Home ಸ್ಟೋರ್‌ಗಳು, Croma ಮತ್ತು ಇತರ ಚಿಲ್ಲರೆ ಅಂಗಡಿಗಳಲ್ಲಿ ಖರೀದಿಸಬಹುದು. ಈ ಹೊಸ Redmi ಫೋನ್ 144Hz ಡಿಸ್‌ಪ್ಲೇ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, ಆಕ್ಟಾ-ಕೋರ್ MediaTek Dimensity 8100 SoC ಪ್ರೊಸೆಸರ್ ಮತ್ತು 5,080mAh ಸಾಮರ್ಥ್ಯದ ಬ್ಯಾಟರಿ ಯಂತಹ ವೈಶಿಷ್ಟ್ಯಗಳನ್ನು ಹೊತ್ತು ಬಂದಿದ್ದು, ಹೊಸ Redmi K50i 5G ಸ್ಮಾರ್ಟ್‌ಪೋನ್ ಏನೆಲ್ಲಾ ವೈಶಿಷ್ಟ್ಯಗಳನ್ನು ಹೊಂದಿದೆ ಮತ್ತು ಬೆಲೆಗಳು ಎಷ್ಟು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.
Redmi K50i 5G ಸ್ಮಾರ್ಟ್‌ಫೋನಿನ ವೈಶಿಷ್ಟ್ಯಗಳು
ನೂತನ Redmi K50i 5G ಸ್ಮಾರ್ಟ್‌ಫೋನ್ ಳು ಮತ್ತು ನೀರಿನ ಪ್ರತಿರೋಧಕ್ಕಾಗಿ IP53 ರೇಟಿಂಗ್ ನೊಂದಿಗೆ 6.6-ಇಂಚಿನ ಫುಲ್ HD+ (1,080x2,460 ಪಿಕ್ಸೆಲ್‌ಗಳು) LCD ಡಿಸ್‌ಪ್ಲೇಯನ್ನು ಹೊಂದಿದೆ. 20.5:9 ಆಕಾರ ಅನುಪಾತದಲ್ಲಿರುವ ಈ ಡಿಸ್‌ಪ್ಲೇಯು HDR10 ಬೆಂಬಲ, ಡಾಲ್ಬಿ ವಿಷನ್ ಪ್ರಮಾಣೀಕರಣ, 144Hz ಏಳು-ಹಂತದ ರಿಫ್ರೆಶ್ ರೇಟ್ ಮತ್ತು 270Hz ಟಚ್ ಸ್ಯಾಂಪ್ಲಿಂಗ್ ದರವನ್ನು ಹೊಂದಿದೆ ಮತ್ತು 650 ನಿಟ್ಸ್ ಗರಿಷ್ಠ ಹೊಳಪನ್ನು ನೀಡುತ್ತದೆ. ಹುಡ್ ಅಡಿಯಲ್ಲಿ, Redmi K50i 5G ಸ್ಮಾರ್ಟ್‌ಪೋನ್ ಆಕ್ಟಾ-ಕೋರ್ MediaTek Dimensity 8100 SoC ಪ್ರೊಸೆಸರ್ ಅನ್ನು ಹೊಂದಿದ್ದು, ಇದನ್ನು 8GB LPDDR5 RAM ಮತ್ತು 256GB UFS 3.1 ಆನ್‌ಬೋರ್ಡ್ ಸಂಗ್ರಹಣೆಯೊಂದಿಗೆ ಜೋಡಿಸಲಾಗಿದೆ. ಹಾಗೂ ಆಂಡ್ರಾಯ್ಡ್ 12-ಆಧಾರಿತ MIUI 13 ನಲ್ಲಿ ಕಾರ್ಯನಿರ್ವಹಿಸುವ ಈ ಸ್ಮಾರ್ಟ್‌ಫೋನಿನಲ್ಲಿ ಥರ್ಮಲ್ ಮ್ಯಾನೇಜ್ಮೆಂಟ್ಗಾಗಿ ವೇಪರ್ ಕೂಲಿಂಗ್ ಚೇಂಬರ್ ಹೊಂದಿರುವ ಲಿಕ್ವಿಡ್ ಕೂಲಿಂಗ್ 2.0 ತಂತ್ರಜ್ಞಾನವಿದೆ.
ಫೋಟೋಗಳು ಮತ್ತು ವೀಡಿಯೊಗಳಿಗಾಗಿ, Redmi K50i 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನನ್ನು ಹೊಂದಿದೆ. ಇದು 6P ಲೆನ್ಸ್‌ನೊಂದಿಗೆ ಜೋಡಿಸಲಾದ 64-ಮೆಗಾಪಿಕ್ಸೆಲ್ Samsung ISOCELL GW1 ಪ್ರಾಥಮಿಕ ಕ್ಯಾಮೆರಾ, 8-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು 2-ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾಗಳ ಜೊತೆಗೆ LED ಫ್ಲ್ಯಾಶ್ ಅನ್ನು ನಿಡಲಾಗಿದೆ. ಇನ್ನು ಮುಂಭಾಗದಲ್ಲಿ 16-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು f/2.45 ಅಪರ್ಚರ್ ಲೆನ್ಸ್‌ನೊಂದಿಗೆ ಜೋಡಿಸಲಾಗಿದೆ. Redmi K50i 5G ಸ್ಮಾರ್ಟ್‌ಫೋನ್‌ನಲ್ಲಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ವೈಶಿಷ್ಟ್ಯಗಳು ಸೇರಿವೆ. 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,080mAh ಬ್ಯಾಟರಿ ಮತ್ತು Dolby Atmos ಜೊತೆಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಸಹ ಈ ಸ್ಮಾರ್ಟ್‌ಫೋನ್ ಒಳಗೊಂಡಿದೆ.
Redmi K50i 5g India New Deals And Offers.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm