ಬ್ರೇಕಿಂಗ್ ನ್ಯೂಸ್
06-09-22 07:35 pm Source: Vijayakarnataka ಡಿಜಿಟಲ್ ಟೆಕ್
ಬಜೆಟ್ ಬೆಲೆಯ ಗೇಮಿಂಗ್ ಸ್ಮಾರ್ಟ್‌ಫೋನ್‌ಗಳ ಹೆಸರಾಂತ ಬ್ರ್ಯಾಂಡ್ Poco ಭಾರತದಲ್ಲಿ ತನ್ನ ಬಹುನಿರೀಕ್ಷಿತ Poco M5 ಸ್ಮಾರ್ಟ್‌ಪೋನನ್ನು ಸೋಮವಾರದಂದು ಬಿಡುಗಡೆಗೊಳಿಸಿದೆ. ಕಳೆದ ಹಲವು ದಿನಗಳಿಂದಲೂ ವದಂತಿಗಳಿಂದಲೇ ಸುದ್ದಿಯಾಗಿದ್ದ Poco M-ಸರಣಿಯ ಈ ಸ್ಮಾರ್ಟ್‌ಫೋನ್ ವಾಟರ್-ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇ ವಿನ್ಯಾಸದಲ್ಲಿ ಆಕ್ಟಾ-ಕೋರ್ MediaTek Helio G99 SoC ಪ್ರೊಸೆಸರ್ ಅನ್ನು ಹೊತ್ತು ಬಂದಿದೆ. ಇವುಗಳ ಜೊತೆಗೆ 50-ಮೆಗಾಪಿಕ್ಸೆಲ್ ಸಾಮರ್ಥ್ಯದ ಟ್ರಿಪಲ್ ಹಿಂಬದಿಯ ಕ್ಯಾಮೆರಾ, 8W ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 5,000mAh ಬ್ಯಾಟರಿ ಸೇರಿದಮತೆ ಹಲವು ವಿಶೇಷ ವೈಶಿಷ್ಟ್ಯಗಳು Poco M5 ಸ್ಮಾರ್ಟ್‌ಪೋನಿನಲ್ಲಿವೆ. ಹಾಗಾದರೆ, ನೂತನ Poco M5 ಸ್ಮಾರ್ಟ್‌ಪೋನ್ ಹೇಗಿದೆ ಮತ್ತು ಬೆಲೆಗಳು ಎಷ್ಟು ಎಂಬುದನ್ನು ತಿಳಿಯೋಣ ಬನ್ನಿ.
Poco M5 ಸ್ಮಾರ್ಟ್‌ಫೋನಿನ ವಿಶೇಷಣಗಳು
ಮೊದಲೇ ಹೇಳಿದಂತೆ, ನೂತನ Poco M5 ಸ್ಮಾರ್ಟ್‌ಫೋನ್ ವಾಟರ್-ಡ್ರಾಪ್ ಶೈಲಿಯ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇದರ ಡಿಸ್‌ಪ್ಲೇಯು 6.58-ಇಂಚಿನ ಪೂರ್ಣ-HD+ IPS LCD (1,080x2,400 ಪಿಕ್ಸೆಲ್‌ಗಳು) ಸಾಮರ್ಥ್ಯವನ್ನು ಹೊಂದಿದ್ದು, 30Hz ನಿಂದ 90Hz ವರೆಗಿನ ವೇರಿಯಬಲ್ ರಿಫ್ರೆಶ್ ರೇಟ್ ಅನ್ನು ಬೆಂಬಲಿಸುತ್ತದೆ. ಇಷ್ಟೇ ಅಲ್ಲದೇ, ಈ ಡಿಸ್‌ಪ್ಲೇಯು 240Hz ಟಚ್ ಸ್ಲಾಪಿಂಗ್ ಮತ್ತು DCI-P3 ಕಲರ್ ಗ್ಯಾಮೆಟ್ ವೈಶಿಷ್ಟ್ಯಗಳ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಸಹ ಹೊಂದಿದೆ. ಹುಡ್ ಅಡಿಯಲ್ಲಿ, Poco M5 ಸ್ಮಾರ್ಟ್‌ಫೋನ್ 6GB LPDDR4X RAM ಜೊತೆಗೆ 6nm MediaTek Helio G99 ಪ್ರೊಸೆಸರ್‌ನಿಂದ ಚಾಲಿತವಾಗಿದೆ. ಟರ್ಬೊ RAM ವೈಶಿಷ್ಟ್ಯವು ಅಂತರ್ಗತ ಸಂಗ್ರಹಣೆಯನ್ನು ಬಳಸಿಕೊಂಡು RAM ಅನ್ನು ವಿಸ್ತರಿಸಿಕೊಳ್ಳಲು ಶಕ್ತವಾಗಿದೆ.
ಫೋಟೋಗಳು ಮತ್ತು ವೀಡಿಯೊಗಳಿಗಾಗಿ, Poco M5 ಸ್ಮಾರ್ಟ್‌ಫೋನ್ ಟ್ರಿಪಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು 50-ಮೆಗಾಪಿಕ್ಸೆಲ್ ಪ್ರಾಥಮಿಕ ಸಂವೇದಕದ ಜೊತೆಗೆ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು 2-ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್‌ಗಳನ್ನು ಒಳಗೊಂಡಿದೆ. ಸೆಲ್ಫಿಗಳಿಗಾಗಿ ಫೋನ್ ಮುಂಭಾಗದಲ್ಲಿ 8-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.Poco M5 ಸ್ಮಾರ್ಟ್‌ಫೋನಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5, GPS/ A-GPS, ಇನ್‌ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ವೈಶಿಷ್ಟ್ಯಗಳಿವೆ. ಇನ್ನು 128GB ವರೆಗೆ UFS 2.2 ಸಂಗ್ರಹಣೆ ಮತ್ತು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಬ್ಯಾಟರಿಯನ್ನು ನಾವು Poco M5 ಸ್ಮಾರ್ಟ್‌ಫೋನಿನಲ್ಲಿ ನೋಡಬಹುದು.
ಭಾರತದಲ್ಲಿ Poco M5 ಬೆಲೆ, ಲಭ್ಯತೆ
ಭಾರತದಲ್ಲಿ Poco M5 ಸ್ಮಾರ್ಟ್‌ಫೋನಿನ ಬೆಲೆಗಳು 12,499 ರೂ.ಗಳಿಂದ ಆರಂಭವಾಗಿವೆ. ಆದರೆ, ಐಸಿಐಸಿಐ ಮತ್ತು ಆಕ್ಸಿಸ್ ಬ್ಯಾಂಕ್ ಕಾರ್ಡ್ ಹೊಂದಿರುವ ಗ್ರಾಹಕರು 1,500 ರೂ. ಫ್ಲಾಟ್ ರಿಯಾಯಿತಿಯೊಂದಿಗೆ 11,000 ಸಾವಿರ ರೂ. ಆರಂಭಿಕ Poco M5 ಸ್ಮಾರ್ಟ್‌ಫೋನನ್ನು ಖರೀದಿಸಬಹುದು ಎಂದು ಕಂಪೆನಿ ತಿಳಿಸಿದೆ. 4GB RAM + 64GB ಸ್ಟೋರೇಜ್ ಮಾದರಿಯ Poco M5 ಸ್ಮಾರ್ಟ್‌ಫೋನ್ 12,499 ರೂ.ಗಳಿಗೆ ಮತ್ತು 6GB RAM + 128GB ಸ್ಟೋರೇಜ್ ಮಾದರಿಯ ಫೋನ್ 14,499 ರೂ.ಗಳ ಬೆಲೆಯಲ್ಲಿ ಇದೇ ಸೆಪ್ಟೆಂಬರ್ 13 ರಿಂದ Flipkart ಮೂಲಕ ಮಾರಾಟವಾಗಲಿವೆ. ಐಸಿ ಬ್ಲೂ, ಪೊಕೊ ಹಳದಿ ಮತ್ತು ಪವರ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರಲಿರುವ Poco M5 ಸ್ಮಾರ್ಟ್‌ಫೋನ್ ಜೊತೆಗೆ ಡಿಸ್ನಿ+ ಹಾಟ್‌ಸ್ಟಾರ್‌ಗೆ ಉಚಿತ 1-ವರ್ಷದ ಚಂದಾದಾರಿಕೆ ಮತ್ತು ಆರು ತಿಂಗಳ ಉಚಿತ ಸ್ಕ್ರೀನ್ ರಕ್ಷಣೆಯ ಭರವಸೆಯನ್ನು ಸಹ ನೀಡಲಾಗಿದೆ.
Poco M5 With 5g, 5,000mah Battery Launched In India Price, Specifications.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm