ಬ್ರೇಕಿಂಗ್ ನ್ಯೂಸ್
15-10-22 09:21 pm Source: Vijayakarnataka ಡಿಜಿಟಲ್ ಟೆಕ್
ಕಳೆದ ಹಲವು ದಿನಗಳಿಂದ ವದಂತಿಗಳಿಂದಲೇ ಸುದ್ದಿಯಾಗಿರುವ ಬಹುನಿರೀಕ್ಷಿತ Moto E22s ಸ್ಮಾರ್ಟ್‌ಫೋನ್ ಇದೇ ಅಕ್ಟೋಬರ್ 17 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ. Motorola ಕಂಪೆನಿ ಈ ಬಗ್ಗೆ ಅಧಿಕೃತವಾಗಿ ದೃಢಪಡಿಸಿದ್ದು, ತನ್ನ ವೆಬ್‌ಸೈಟ್‌ನಲ್ಲಿ Moto E22s ಸ್ಮಾರ್ಟ್‌ಫೋನಿನ ಬಿಡುಗಡೆ ದಿನಾಂಕ ಹಾಗೂ ವೈಶಿಷ್ಟ್ಯಗಳನ್ನು ಬಹಿರಂಗಪಡಿಸಿದೆ. ಆಗಸ್ಟ್‌ನಲ್ಲಿ ಯುರೋಪಿಯನ್ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಲಾಗಿದ್ದ Moto E22s ಸ್ಮಾರ್ಟ್‌ಫೋನನ್ನು ಭಾರತದಲ್ಲಿಯೂ ಬಿಡುಗಡೆ ಮಾಡುವ ಬಗ್ಗೆ ಹಲವು ಸುದ್ದಿಗಳು ಹರಿದಾಡಿದ್ದವು. ಇದೀಗ ಮೊಟೊ ಕಂಪೆನಿಯೇ ಈ ಬಗ್ಗೆ ಅಧಿಕೃತ ಮಾಹಿತಿ ಒದಗಿಸಿರುವುದರಿಂದ, ಈ ಹೊಸ Moto E22s ಸ್ಮಾರ್ಟ್‌ಫೋನ್ ಹೇಗಿದೆ ಮತ್ತು ಬೆಲೆ ಎಷ್ಟು ಎಂಬ ಸಂಪೂರ್ಣ ಮಾಹಿತಿಯನ್ನು ನೋಡೋಣ ಬನ್ನಿ.
Moto E22s ಸ್ಮಾರ್ಟ್‌ಫೋನಿನ ವೈಶಿಷ್ಟ್ಯಗಳು
ಭಾರತದಲ್ಲಿ ಬಿಡುಗಡೆಯಾಗುತ್ತಿರುವ ಹೊಸ Moto E22s ಸ್ಮಾರ್ಟ್‌ಫೋನಿನಲ್ಲಿ ಹೂಲ್-ಪಂಚ್ ಕಟೌಟ್ ಮಾದರಿಯ 6.5-ಇಂಚಿನ HD+ (720x1,600 ಪಿಕ್ಸೆಲ್‌ಗಳು) IPS LCD ಡಿಸ್‌ಪ್ಲೇಯನ್ನು ಅಳವಡಿಸಲಾಗಿದೆ. 20:9 ಆಕಾರ ಅನುಪಾತದಲ್ಲಿರುವ ಈ ಡಿಸ್‌ಪ್ಲೇಯು 90Hz ರಿಫ್ರೆಶ್ ರೇಟ್ ಮತ್ತು 268ppi ಪಿಕ್ಸೆಲ್ ಡೆನ್ಸಿಟಿ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ Moto E22s ಸ್ಮಾರ್ಟ್‌ಫೋನ್ 4GB RAM ನೊಂದಿಗೆ ಜೋಡಿಸಲಾದ MediaTek Helio G37 SoC ನಿಂದ ಚಾಲಿತವಾಗಿರಲಿದೆ. 64GB ಆಂತರಿಕ ಮೆಮೊರಿ ಹೊಂದಿರುವ ಈ Moto E22s ಸ್ಮಾರ್ಟ್‌ಫೋನಿನಲ್ಲಿ ಮೀಸಲಾದ ಮೈಕ್ರೋ SD ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಮೆಮೊರಿಯನ್ನು ವಿಸ್ತರಿಸುವ ಆಯ್ಕೆ ಇದೆ.
Moto E22s ಸ್ಮಾರ್ಟ್‌ಫೋನಿನಲ್ಲಿ 16-ಮೆಗಾಪಿಕ್ಸೆಲ್ ಮುಖ್ಯ ಸಂವೇದಕ ಮತ್ತು 2-ಮೆಗಾಪಿಕ್ಸೆಲ್ ಡೀಪ್ ಸಂವೇದಕವನ್ನು ಒಳಗೊಂಡಿರುವ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ನೀಡಲಾಗಿದೆ. ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ, ಸ್ಮಾರ್ಟ್‌ಫೋನಿನ ಮುಂಭಾಗದ 8 ಮೆಗಾಪಿಕ್ಸೆಲ್ ಕ್ಯಾಮೆರಾ ಇದೆ.
ಇನ್ನುಳಿದಂತೆ, ಬಯೋಮೆಟ್ರಿಕ್ ಭದ್ರತೆಗಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಫೇಸ್ ಅನ್‌ಲಾಕ್ ಹೊಂದಿರುವ ಈ Moto E22s ಸ್ಮಾರ್ಟ್‌ಫೋನ್ 10W ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿರುವ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ ಎಂದು ಅಧಿಕೃತ Motorola ಇಂಡಿಯಾ ವೆಬ್‌ಸೈಟ್‌ನಲ್ಲಿ ಪಟ್ಟಿಮಾಡಲಾಗಿದೆ.
ಭಾರತದಲ್ಲಿ Moto E22s ಸ್ಮಾರ್ಟ್‌ಫೋನಿನ ಬೆಲೆ (ನಿರೀಕ್ಷಿತ) ಮತ್ತು ಲಭ್ಯತೆ.
ಕಳೆದ ಆಗಸ್ಟ್ ತಿಂಗಳಲ್ಲಿ ಯುರೋಪ್ ಮಾರುಕಟ್ಟೆಯಲ್ಲಿ ಏಕೈಕ 4GB RAM + 64GB ಸ್ಟೋರೇಜ್ ಮಾದರಿಯ Moto E22s ಸ್ಮಾರ್ಟ್‌ಫೋನನ್ನು EUR 159.99 (ಸುಮಾರು ರೂ. 12,700) ಬೆಲೆಯಲ್ಲಿ ಬಿಡುಗಡೆ ಮಾಡಲಾಗಿತ್ತು. ಇದೀಗ ದೇಶದಲ್ಲೂ ಸಹ ಇದೇ ಬೆಲೆಯಲ್ಲಿ Moto E22s ಸ್ಮಾರ್ಟ್‌ಫೋನ್ ಬಿಡುಗಡೆಯಾಗುವ ನಿರೀಕ್ಷೆ ಇದೆ. ಇನ್ನು ಅಕ್ಟೋಬರ್ 17 ರಂದು ಮಧ್ಯಾಹ್ನ 12 ಗಂಟೆ ಫಿಪ್‌ಕಾರ್ಟ್ ಮೂಲಕ Moto E22s ಸ್ಮಾರ್ಟ್‌ಫೋನನ್ನು ಮಾರಾಟ ಮಾಡುವುದಾಗಿ ಮೊಟೊರೊಲಾ ಕಂಪೆನಿ ಖಚಿತಪಡಿಸಿದೆ.
Moto E22s India Launch Date Set For October 17.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm