ಬ್ರೇಕಿಂಗ್ ನ್ಯೂಸ್
17-10-22 07:54 pm Source: Vijayakarnataka ಡಿಜಿಟಲ್ ಟೆಕ್
ಬಜೆಟ್ ಸ್ಮಾರ್ಟ್‌ಫೋನ್‌ಗಳ ತಯಾರಿಕೆಯ ಜನಪ್ರಿಯ ಮೊಬೈಲ್ ಬ್ರ್ಯಾಂಡ್ Infinix ತನ್ನ ವಿನೂತನ Infinix Note 12 (2023) ಸ್ಮಾರ್ಟ್‌ಫೋನನ್ನು ಜಾಗತಿಕ ಮಾರುಕಟ್ಟೆಗೆ ಪರಿಚಯಿಸಿದೆ. 2023ರ ಮೊಬೈಲ್ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡು ಈ ಹೊಸ ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡಲಾಗಿದ್ದು, 6.7 ಇಂಚಿನ AMOLED ಡಿಸ್‌ಪ್ಲೇ, 50 ಮೆಗಾಪಿಕ್ಸೆಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, MediaTek Helio G99 ಪ್ರೊಸೆಸರ್ ಹಾಗೂ 5,000mAh ಬ್ಯಾಟರಿಯಂತಹ ವೈಶಿಷ್ಟ್ಯಗಳನ್ನು ಹೊತ್ತು ಹೊಸ Infinix Note 12 (2023) ಸ್ಮಾರ್ಟ್‌ಫೋನ್ ಬಿಡುಗಡೆಗೊಂಡಿದೆ. ಹಾಗಾದರೆ, ನೂತನ Infinix Note 12 (2023) ಸ್ಮಾರ್ಟ್‌ಫೋನ್ ಹೇಗಿದೆ ಮತ್ತು ಬೆಲೆ ಎಷ್ಟು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.
Infinix Note 12 (2023) ಸ್ಮಾರ್ಟ್‌ಫೋನಿನ ವೈಶಿಷ್ಟ್ಯಗಳು
ನೂತನ Infinix Note 12 (2023) ಸ್ಮಾರ್ಟ್‌ಫೋನಿನಲ್ಲಿ ಫುಲ್ HD+ (1,080x2,400 ಪಿಕ್ಸೆಲ್‌ಗಳು) ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿರುವ 6.7-ಇಂಚಿನ AMOLED ಡಿಸ್‌ಪ್ಲೇಯನ್ನು ಅಳವಡಿಸಲಾಗಿದೆ. MediaTek Helio G99 SoC ಪ್ರೊಸೆಸರ್‌ನಿಂದ ಕಾರ್ಯನಿರ್ವಸಿಸಲಿರುವ ಈ ಸ್ಮಾರ್ಟ್‌ಫೋನನ್ನು Mali-G57 MP2 GPU, 8GB RAM ಮತ್ತು 256GB ಜೊತೆಗೆ ಜೋಡಿಸಲಾಗಿದ್ದು, ಆಂಡ್ರಾಯ್ಡ್ 12 ಆಧಾರಿತ XOS 10.6 ನಲ್ಲಿ ರನ್ ಆಗಲಿದೆ.
Infinix Note 12 (2023) ಸ್ಮಾರ್ಟ್‌ಫೋನಿನಲ್ಲಿ ಟ್ರಿಪಲ್ ಹಿಂಬದಿಯ ಕ್ಯಾಮೆರಾ ಸೆಟಪ್ ತರಲಾಗಿದ್ದು, ಇದು f/1.6 ಅಪರ್ಚರ್ ಜೊತೆಗೆ 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2-ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಹಾಗೂ ಅನಿರ್ದಿಷ್ಟ AI ಲೆನ್ಸ್ ಹೊಂದಿದೆ. ಈ ಕ್ಯಾಮೆರಾವು ಕಡಿಮೆ-ಬೆಳಕಿನ ಕಾರ್ಯಕ್ಷಮತೆಗಾಗಿ ಸೂಪರ್ ನೈಟ್ ಮೋಡ್ ವೈಶಿಷ್ಟ್ಯವನ್ನು ಬೆಂಬಲಿಸಲಿದೆ. ಇನ್ನು ಸೆಲ್ಫಿಗಳಿಗಾಗಿ ಮುಂಭಾಗದಲ್ಲಿ 16-ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
Infinix Note 12 (2023) ಸ್ಮಾರ್ಟ್‌ಫೋನ್ ಡ್ಯುಯಲ್-ಸಿಮ್ 4G ಸ್ಮಾರ್ಟ್‌ಫೋನ್ ಆಗಿದ್ದು, ಬ್ಲೂಟೂತ್ ಮತ್ತು ಡ್ಯುಯಲ್-ಬ್ಯಾಂಡ್ ವೈ-ಫೈ, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ವೈಶಿಷ್ಟ್ಯಗಳನ್ನು ಹೊಂದಿದೆ. 33W ವೇಗದ ಚಾರ್ಜಿಂಗ್‌ಗೆ ಬೆಂಬಲದೊಂದಿಗೆ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿರುವ ಈ ಸ್ಮಾರ್ಟ್‌ಫೋನಿನಲ್ಲಿ SD ಕಾರ್ಡ್ ಮೂಲಕ 2TB ವರೆಗೆ ಮೆಮೊರಿಯನ್ನು ವಿಸ್ತರಿಸಬಹುದು ಎಂದು ಕಂಪೆನಿ ತಿಳಿಸಿದೆ.
Infinix Note 12 (2023) ಸ್ಮಾರ್ಟ್‌ಫೋನಿನ ಬೆಲೆ ಮತ್ತು ಲಭ್ಯತೆ
ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡಿರುವ Infinix Note 12 (2023) ಸ್ಮಾರ್ಟ್‌ಫೋನಿನ ಏಕೈಕ 8GB RAM + 128GB ಸ್ಟೋರೇಜ್ ಮಾದರಿಗೆ $199 (ಸುಮಾರು ರೂ. 16,500) ಬೆಲೆ ನಿಗಧಿಪಡಿಸಲಾಗಿದೆ. ಈ ಇನ್ಫಿನಿಕ್ಸ್ ಸ್ಮಾರ್ಟ್‌ಫೋನ್ ಆಲ್ಪೈನ್ ವೈಟ್, ಟಸ್ಕನಿ ಬ್ಲೂ ಮತ್ತು ವೋಲ್ಕಾನಿಕ್ ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ಆದರೆ, ಭಾರತದಲ್ಲಿ ಈ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವ ಬಗ್ಗೆ ಕಂಪೆನಿಯಿಂದ ಯಾವುದೇ ಮಾಹಿತಿ ದೊರೆತಿಲ್ಲ.
Infinix Note 12 2023 Smartphone Launched Price, Specifications.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm