ಬೆಂಗಳೂರು ಬಳಿಯ ಹೊಸೂರಿನಲ್ಲಿ ಭಾರತದ ಅತಿದೊಡ್ಡ ಐಫೋನ್ ಉತ್ಪಾದನಾ ಘಟಕ!

16-11-22 07:13 pm       Source: Vijayakarnataka   ಡಿಜಿಟಲ್ ಟೆಕ್

ಭಾರತದಲ್ಲಿ ಆಪಲ್ ಐಫೋನ್‌ಗಳ ತಯಾರಿಕೆಗಾಗಿ ಟಾಟಾ ಎಲೆಕ್ಟ್ರಾನಿಕ್ಸ್‌ ಸಂಸ್ಥೆಯು ಹೊರಗುತ್ತಿಗೆ ಪಡೆದುಕೊಂಡಿದ್ದು, ಹೊಸೂರಿನಲ್ಲಿ ಘಟಕ ಹೊಂದಿರುವ ಟಾಟಾ ಎಲೆಕ್ಟ್ರಾನಿಕ್ಸ್‌ ಶಿಘ್ರದಲ್ಲೇ ಐಫೋನ್‌ಗಳನ್ನು ತಯಾರಿಲಿದೆ.

ಭಾರತದಲ್ಲಿ ಆಪಲ್ ಐಫೋನ್ ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸುವ ಅತಿದೊಡ್ಡ ಘಟಕವು ಬೆಂಗಳೂರು ನಗರದ ಸಮೀಪವಿರುವ ಹೊಸೂರಿನಲ್ಲಿ ಆರಂಭವಾಗಲಿದೆ ಎಂದು ಟೆಲಿಕಾಂ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ. ಮಂಗಳವಾರದಂದು ನಡೆದ ಜಂಜಾಟಿಯಾ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಅಶ್ವಿನಿ ವೈಷ್ಣವ್ ಅವರು, ಬೆಂಗಳೂರು ಸಮೀಪವಿರುವ ತಮಿಳುನಾಡಿಗೆ ಸೇರಿದ ಹೊಸೂರಿನಲ್ಲಿ ಭಾರತದ ಅತಿದೊಡ್ಡ ಸ್ಥಾವರವನ್ನು ಪ್ರಾರಂಭಿಸಲಾಗುತ್ತಿದೆ. ಈ ಒಂದೇ ಕಾರ್ಖಾನೆಯಲ್ಲಿ 60,000 ಜನರಿಗೆ ಉದ್ಯೋಗ ದೊರೆಯುತ್ತದೆ ಎಂದು ತಿಳಿಸಿದ್ದಾರೆ.

ಭಾರತದಲ್ಲಿ ಆಪಲ್ ಐಫೋನ್‌ಗಳ ತಯಾರಿಕೆಗಾಗಿ ಟಾಟಾ ಎಲೆಕ್ಟ್ರಾನಿಕ್ಸ್‌ ಸಂಸ್ಥೆಯು ಹೊರಗುತ್ತಿಗೆ ಪಡೆದುಕೊಂಡಿದ್ದು, ಹೊಸೂರಿನಲ್ಲಿ ಘಟಕ ಹೊಂದಿರುವ ಟಾಟಾ ಎಲೆಕ್ಟ್ರಾನಿಕ್ಸ್‌ ಶಿಘ್ರದಲ್ಲೇ ಐಫೋನ್‌ಗಳನ್ನು ತಯಾರಿಲಿದೆ. ಈ ಒಂದೇ ಘಟಕದಲ್ಲಿ 60,000 ಜನರಿಗೆ ಉದ್ಯೋಗ ದೊರೆಯುತ್ತದೆ. ಈ 60,000 ಉದ್ಯೋಗಿಗಳಲ್ಲಿ ಮೊದಲ 6,000 ಉದ್ಯೋಗಿಗಳು ರಾಂಚಿ ಮತ್ತು ಹತ್ತಿರದ ಸ್ಥಳಗಳ ಹಜಾರಿಬಾಗ್ ಬುಡಕಟ್ಟು ಸಹೋದರಿಯರು ಇರಲಿದ್ದಾರೆ. ಆದ್ದರಿಂದ, ಹಜಾರಿಬಾಗ್ ಸಹೋದರಿಯರಿಗೆ ಆಪಲ್‌ ಐಫೋನ್ ತಯಾರಿಕೆಯ ತರಬೇತಿ ನೀಡಲಾಗುತ್ತಿದೆ ಎಂದು ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ.

Made in India iPhones: Biggest iPhone manufacturing plant coming up near  Bengaluru; will employee 60,000

ಚೀನಾದಲ್ಲಿನ ಕೋವಿಡ್ ನಿರ್ಬಂಧಗಳು, ರಾಜಕೀಯ ಸಮಸ್ಯೆಗಳು ಮತ್ತು ಆರ್ಥಿಕ ಚಟುವಟಿಕೆ ಕುಸಿತದ ಪರಿಣಾಮಗಳು ಆಪಲ್ ಕಂಪೆನಿಯ ಮೇಲೆ ನೇರ ಪರಿಣಾಮ ಬೀರಿವೆ. ಈ ಆಂತಕಗಳ ನಡುವೆ ಚೀನಾದಲ್ಲಿ ಐಫೋನ್‌ಗಳ ಉತ್ಪಾದನೆ ಮತ್ತು ಪೂರೈಕೆ ಕಷ್ಟ ಸಾಧ್ಯ. ಭವಿಷ್ಯದಲ್ಲೂ ಈ ಸಮಸ್ಯೆಗಳಿಗೆ ಕೊನೆ ಇಲ್ಲ ಎಂದರಿತಿರುವ ಆಪಲ್ ಸಂಸ್ಥೆ ಭಾರತದಲ್ಲಿ ಹೆಚ್ಚು ಐಫೋನ್‌ಗಳನ್ನು ಉತ್ಪಾದಿಸುವ ಹಾಗೂ ರಫ್ತು ಮಾಡುವ ಗುರಿಯನ್ನು ಆಪಲ್ ಹೊಂದಿದೆ. ಇದಕ್ಕಾಗಿ ಟಾಟಾ ಎಲೆಕ್ಟ್ರಾನಿಕ್ಸ್‌ ಸಂಸ್ಥೆಯನ್ನು ಆಯ್ದುಕೊಂಡಿದೆ. ಪ್ರಸ್ತುತ ಭಾರತದಲ್ಲಿ ಫಾಕ್ಸ್‌ಕಾನ್ ಘಟಕದಲ್ಲಿ ಐಫೋನ್‌ಗಳನ್ನು ಉತ್ಪಾದಿಸಲಾಗುತ್ತಿದೆ.

Bengaluru To Get Biggest iPhone Manufacturing Unit In India

ಇತ್ತೀಚಿಗಷ್ಟೆ, ಭಾರತದಲ್ಲಿ ಆಪಲ್ ಹೊಂದಿರುವ ಫಾಕ್ಸ್‌ಕಾನ್‌ನ ಐಫೋನ್ ಉತ್ಪಾದನಾ ಕೇಂದ್ರದಲ್ಲಿ ಐಫೋನ್ 14 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಅಸೆಂಬಲ್ ಮಾಡಲು ಮತ್ತು ವಿಶ್ವದಾದ್ಯಂತ ರಪ್ತು ಮಾಡುವ ಗುರಿಯನ್ನು ಆಪಲ್ ಹೊಂದಿದೆ. ಇದಲ್ಲದೇ, ಚೀನಾ ಮೇಲಿನ ತನ್ನ ಅವಲಂಬನೆಯನ್ನು ತಗ್ಗಿಸುವ ಸಲುವಾಗಿ ಆಪಲ್ ಭಾರತದಲ್ಲಿ ಕೆಲವು ಐಫೋನ್ 14 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಅಸೆಂಬಲ್ ಮಾಡಲಿದೆ ಎಂದು ಜನಪ್ರಿಯ ಉದ್ಯಮ ವಿಶ್ಲೇಷಕ ಮಿಂಗ್-ಚಿ ಕುವೊ ತಮ್ಮ ಟ್ವೀಟ್‌ಗಳಲ್ಲಿ ಉಲ್ಲೇಖಿಸಿದ್ದರು. ಇತ್ತೀಚಿನ ಭೌಗೋಳಿಕ ರಾಜಕೀಯ ವಿಷಯಗಳ ಹಿನ್ನೆಲೆಯಲ್ಲಿ ಆಪಲ್ ಈ ತೀರ್ಮಾನಕ್ಕೆ ಬಂದಿದೆ ಎಂದು ಮಿಂಗ್-ಚಿ ಕುವೊ ಅವರು ಹೇಳಿದ್ದರು.

Biggest Iphone Manufacturing Unit To Come Up Near Bengaluru.