ಬ್ರೇಕಿಂಗ್ ನ್ಯೂಸ್
25-11-22 07:50 pm Source: Vijayakarnataka ಡಿಜಿಟಲ್ ಟೆಕ್
ಭಾರತೀಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್ Lava ದೇಶದಲ್ಲಿಂದು ತನ್ನ ವಿನೂತನ Lava Blaze NXT ಸ್ಮಾರ್ಟ್‌ಫೋನನ್ನು ಬಿಡುಗಡೆಗೊಳಿಸಿದೆ. ಈ ವರ್ಷದ ಆರಂಭದಲ್ಲಿ Lava ಪರಿಚಯಿಸಿದ್ದ Lava Blaze ಸ್ಮಾರ್ಟ್‌ಫೋನಿನ ನವೀಕರಿಸಿದ್ದ ಆವೃತ್ತಿಯ ಸ್ಮಾರ್ಟ್‌ಫೋನ್ ಇದಾಗಿದ್ದು, ವಾಟರ್‌ಡ್ರಾಪ್-ಶೈಲಿಯ ನಾಚ್ ಇರುವ 6.5-ಇಂಚಿನ IPS ಡಿಸ್‌ಪ್ಲೇ, MediaTek Helio G37 SoC ಪ್ರೊಸೆಸರ್ ಹಾಗೂ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ನಂತಹ ವೈಶಿಷ್ಟ್ಯಗಳನ್ನು ಹೊತ್ತು ಅತ್ಯಂತ ಕಡಿಮೆ ಬೆಲೆಯಲ್ಲಿ ದೇಶದಲ್ಲಿ ಮಾರಾಟಕ್ಕೆ ಬರುತ್ತಿದೆ. ಹಾಗಾದರೆ, ನೂತನ Lava Blaze NXT ಸ್ಮಾರ್ಟ್‌ಫೋನ್ ಹೇಗಿದೆ, ಮತ್ತು ಬೆಲೆ ಎಷ್ಟು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.
Lava Blaze NXT ಸ್ಮಾರ್ಟ್‌ಫೋನಿನ ವೈಶಿಷ್ಟ್ಯಗಳು
ಮೊದಲೇ ಹೇಳಿದಂತೆ, ನೂತನ Lava Blaze NXT ಸ್ಮಾರ್ಟ್‌ಫೋನಿನಲ್ಲಿ ವಾಟರ್‌ಡ್ರಾಪ್-ಶೈಲಿಯ ನಾಚ್ ಇರುವ 6.5-ಇಂಚಿನ IPS ಡಿಸ್‌ಪ್ಲೇಯನ್ನು ನೀಡಲಾಗಿದೆ. ಆದರೆ, ಈ ಡಿಸ್‌ಪ್ಲೇ ಹೊಂದಿರುವ ವೈಶಿಷ್ಟ್ಯಗಳು ಯಾವುವು ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ಹುಡ್ ಅಡಿಯಲ್ಲಿ, Lava Blaze NXT ಸ್ಮಾರ್ಟ್‌ಫೋನ್ 4GB RAM ಮತ್ತು 64GB ಆಂತರಿಕ ಮೆಮೊರಿಯೊಂದಿಗೆ ಜೋಡಿಸಲಾಗಿರುವ MediaTek Helio G37 SoC ಪ್ರೊಸೆಸರ್ ಹೊಂದಿದೆ. ಈ Lava Blaze NXT ಸ್ಮಾರ್ಟ್‌ಫೋನಿನಲ್ಲಿ ವರ್ಚುವಲ್ RAM ಆಯ್ಕೆ ಕೂಡ ಇದ್ದು, ಸ್ಮಾರ್ಟ್‌ಫೋನಿನ RAM 3GB ವರೆಗೂ ಸ್ವಯಂಚಾಲಿತವಾಗಿ ಹೆಚ್ಚಾಗುತ್ತದೆ ಎಂದು Lava ಕಂಪೆನಿ ತಿಳಿಸಿದೆ.
ಕ್ಯಾಮೆರಾ ವಿಬಾಗದಲ್ಲಿ, Lava Blaze NXT ಸ್ಮಾರ್ಟ್‌ಫೋನಿನಲ್ಲಿ 13-ಮೆಗಾಪಿಕ್ಸೆಲ್ ಸಾಮರ್ಥ್ಯವಿರುವ AI ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ನೀಡಲಾಗಿದೆ. ಸೆಲ್ಫಿಗಗಳಿಗಾಗಿ, ಮುಂಭಾಗದಲ್ಲಿ 8-ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ. ಬ್ಯಾಟರಿ ವಿಭಾಗದಲ್ಲಿ 5,000mAh ಬ್ಯಾಟರಿಯನ್ನು ಹೊಂದಿರುವ ಈ Lava Blaze NXT ಸ್ಮಾರ್ಟ್‌ಫೋನ್ ಇಡೀ ದಿನದ ಬ್ಯಾಟರಿ ಅವಧಿಯನ್ನು ಒದಗಿಸುತ್ತದೆ ಎಂದು ಕಂಪೆನಿ ಹೇಳಿಕೊಂಡಿದೆ. ಇನ್ನುಳಿದಂತೆ ಪ್ರೀಮಿಯಂ ಗ್ಲಾಸ್ ಬ್ಯಾಕ್ ವಿನ್ಯಾಸದ ಪ್ಯಾನೆಲ್ ಹಿಂಭಾಗದಲ್ಲಿ ಫಿಂಗರ್‌ಪ್ರಿಂಟ್ ಸೆನ್ಸಾರ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್‌ಗಳು ಇರುವುದನ್ನು ನಾವು ನೋಡಬಹುದು.
Lava Blaze NXT ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ದೇಶದಲ್ಲಿ Lava Blaze NXT ಸ್ಮಾರ್ಟ್‌ಫೋನನ್ನು ಏಕೈಕ 4GB RAM + 64GB ಸ್ಟೋರೇಜ್ ಮಾದರಿಯಲ್ಲಿ ಬಿಡುಗಡೆ ಮಾಡಲಾಗಿದ್ದು, ಜನಪ್ರಿಯ ಇ-ಕಾಮರ್ಸ್ ಜಾಲತಾಣ ಅಮೆಜಾನ್‌ನಲ್ಲಿ ಪಟ್ಟಿ ಮಾಡಲಾಗಿದೆ. ಅಮೆಜಾನ್ ತಾಣದಲ್ಲಿ ಕೆಂಪು ಮತ್ತು ಹಸಿರು ಬಣ್ಣಗಳಲ್ಲಿ ಪಟ್ಟಿ ಮಾಡಲಾಗಿರುವ ಈ Lava Blaze NXT ಸ್ಮಾರ್ಟ್‌ಫೋನ್ ಯಾವಾಗ ಮಾರಾಟವಾಗಲಿದೆ ಎಂಬ ಬಗ್ಗೆ ಮಾಹಿತಿ ದೊರೆತಿಲ್ಲ. ಆದರೆ, ಕಂಪೆನಿ ಮೂಲಗಳ ಪ್ರಕಾರ ಇದೇ ಡಿಸೆಂಬರ್ 1 ರಿಂದ ಮಾರಾಟಕ್ಕೆ ಬರಬಹುದು ಎಂದು ಹಲವು ಮಾಧ್ಯಮ ವರದಿಗಳು ಹೇಳಿವೆ.
Lava Blaze Nxt With 5,000mah Battery Launched In India Price, Specifications.
19-04-25 12:24 pm
HK News Desk
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 10:51 am
Mangalore Correspondent
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm