ಬ್ರೇಕಿಂಗ್ ನ್ಯೂಸ್
10-12-22 07:29 pm Source: Vijayakarnataka ಡಿಜಿಟಲ್ ಟೆಕ್
Samsung ಕಂಪೆನಿಯ ಅತ್ಯಂತ ಕೈಗೆಟುಕುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾದ ಬಹುನಿರೀಕ್ಷಿತ Samsung Galaxy M04 ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್ ಒಂದನ್ನು ಹುಡುಕುತ್ತಿರುವ ಗ್ರಾಹಕರಿಗಾಗಿ ಕೇವಲ 8,499 ರೂ. ಬೆಲೆಯಲ್ಲಿ ಈ ಹೊಸ Samsung Galaxy M04 ಸ್ಮಾರ್ಟ್‌ಫೋನನ್ನು ಪರಿಚಯಿಸಲಾಗಿದ್ದು, ಈ ಬೆಲೆಯಲ್ಲಿ 5,000mAh ಸಾಮರ್ಥ್ಯದ ಬ್ಯಾಟರಿ, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಮತ್ತು 1TB ವರೆಗೆ ಮೆಮೊರಿ ವಿಸ್ತರಣೆ ಸಾಮರ್ಥ್ಯದಂತಹ ಹಲವು ಪ್ರಮುಖ ವೈಶಿಷ್ಟ್ಯಗಳನ್ನು ಹೊತ್ತು ಬಂದಿದೆ. ಹಾಗಾದರೆ, ನೂತನ Samsung Galaxy M04 ಸ್ಮಾರ್ಟ್‌ಫೋನ್ ಹೇಗಿದೆ ಎಂಬುದನ್ನು ತಿಳಿಯೋಣ ಬನ್ನಿ.
ಹೇಗಿದೆ Samsung Galaxy M04 ಸ್ಮಾರ್ಟ್‌ಫೋನ್?
ಹೊಸ Samsung Galaxy M04 ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯ ಸಾಧನವಾಗಿದ್ದರು ಸಹ ವಾಟರ್ ಡ್ರಾಪ್ ಶೈಲಿಯ ನಾಚ್ ವಿನ್ಯಾಸದಲ್ಲಿ ದೊಡ್ಡದಾದ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. 20:9 ಅನುಪಾತದಲ್ಲಿರುವ ಈ ಡಿಸ್‌ಪ್ಲೇಯು 270 ಪಿಪಿಐ ಪಿಕ್ಸೆಲ್ ಸಾಂದ್ರತೆ ಮತ್ತು 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಪ್ರೊಸೆಸರ್ ವಿಭಾಗದಲ್ಲಿ, 4GB RAM + 128GB ಮೆಮೊರಿ ಜೊತೆಗೆ ಮೀಡಿಯಾಟೆಕ್ ಹಿಲಿಯೋ P35 SoC ಪ್ರೊಸೆಸರ್ ಹೊಂದಿರುವ ಈ ಸ್ಮಾರ್ಟ್‌ಫೋನ್ RAM ಪ್ಲಸ್ ಫೀಚರ್ ಹೊಂದಿದ್ದು, 8GB ವರೆಗೆ RAM ವಿಸ್ತರಿಸಿಕೊಳ್ಳುವ ಸಾಮರ್ಥವನ್ನು ಹೊಂದಿದೆ. ಮೈಕ್ರೊ SD ಕಾರ್ಡ್ ಮೂಲಕ ಈ ಸ್ಮಾರ್ಟ್‌ಫೋನಿನ ಮೆಮೊರಿಯನ್ನು 1TB ವರೆಗೆ ವಿಸ್ತರಿಸಬಹುದಾದ ಆಯ್ಕೆ ಇರುವುದು ಪ್ರಮುಖ ವಿಶೇಷತೆಯಾಗಿದೆ.
ಕ್ಯಾಮೆರಾ ವಿಭಾಗದಲ್ಲಿ, Samsung Galaxy M04 ಸ್ಮಾರ್ಟ್‌ಫೋನ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಸೆಲ್ಫಿಗಳಿಗಾಗಿ, 5 ಮೆಗಾಪಿಕ್ಸೆಲ್ ಕ್ಯಾಮೆರಾ ಅಳವಡಿಸಲಾಗಿದೆ. ಬ್ಯಾಟರಿ ವಿಭಾಗದಲ್ಲಿ, ಶಕ್ತಿಯುತ ಬೃಹತ್ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ Samsung Galaxy M04 ಸ್ಮಾರ್ಟ್‌ಫೋನ್ ಸಜ್ಜುಗೊಂಡಿದೆ. ಸ್ಮಾರ್ಟ್‌ಫೋನಿನ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ವೈಶಿಷ್ಟ್ಯಗಳನ್ನು ನಾವು ನೋಡಬಹುದು. ಇನ್ನು ಈ ಸ್ಮಾರ್ಟ್‌ಫೋನ್‌ಗೆ ಎರಡು ವರ್ಷಗಳವರೆಗೆ OS ನವೀಕರಣಗಳನ್ನು ಒದಗಿಸುವುದಾಗಿ ಸ್ಯಾಮ್‌ಸಂಗ್ ಕಂಪೆನಿ ಭರವಸೆ ನೀಡಿದೆ.
Samsung Galaxy M04 ಸ್ಮಾರ್ಟ್‌ಫೋನ್ ಲಭ್ಯತೆ
ಮೊದಲೇ ಹೇಳಿದಂತೆ, ಭಾರತದಲ್ಲಿ ನೂತನ Samsung Galaxy M04 ಸ್ಮಾರ್ಟ್‌ಫೋನ್ ಬೆಲೆ ಕೇವಲ 8,499 ರೂ.ಗಳಾಗಿವೆ. ಪ್ರಸ್ತುತ 4GB RAM + 64GB ಸ್ಟೋರೇಜ್ ಮಾದರಿಯಲ್ಲಿ ಮಾತ್ರ ಬಿಡುಗಡೆಯಾಗಿರುವ ಈ ಸ್ಮಾರ್ಟ್‌ಫೋನ್ ಇದೇ ಡಿಸೆಂಬರ್ 16 ರಂದು ಅಮೆಜಾನ್ ತಾಣದಲ್ಲಿ ಮೊದಲ ಮಾರಾಟಕ್ಕೆ ಬರುತ್ತಿದೆ. ಗ್ರಾಹಕರು ನೀಲಿ, ಗೋಲ್ಡ್, ಮಿಂಟ್ ಗ್ರೀನ್ ಮತ್ತು ವೈಟ್ ಬಣ್ಣದ ಆಯ್ಕೆಗಳಲ್ಲಿ Samsung Galaxy M04 ಸ್ಮಾರ್ಟ್‌ಫೋನನ್ನು ಖರೀದಿಸಲು ಅವಕಾಶವಿದೆ.
Samsung Galaxy M04 With 5,000mah Battery Launched In India Price, Specifications.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm