ಬ್ರೇಕಿಂಗ್ ನ್ಯೂಸ್
23-03-23 08:00 pm Source: Vijayakarnataka ಡಿಜಿಟಲ್ ಟೆಕ್
ವಿಶ್ವ ಟೆಕ್ ದೈತ್ಯ ಬ್ರ್ಯಾಂಡ್ Samsung ಮೊಬೈಲ್ ಮಾರುಕಟ್ಟೆಗೆ ಇಂದು ತನ್ನ ನೂತನ Galaxy M54 5G ಸ್ಮಾರ್ಟ್‌ಫೋನನ್ನು ಅನಾವರಣಗೊಳಿಸಿದೆ. Samsung ಕಂಪೆನಿಯ ಬಜೆಟ್ ಸ್ಮಾರ್ಟ್‌ಫೋನ್‌ಗಳ ಸರಣಿ ಎಂದೇ ಹೆಸರಾಗಿರುವ Galaxy M ಸರಣಿಗೆ ಈ Galaxy M54 5G ಸ್ಮಾರ್ಟ್‌ಫೋನ್ ಹೊಸ ಸೇರ್ಪಡೆಯಾಗಿದ್ದು, ಇದು 120Hz ರಿಫ್ರೆಶ್ ರೇಟ್ ಸಾಮರ್ಥ್ಯದ ಫುಲ್ ಹೆಚ್‌ಡಿ+ ಸೂಪರ್ AMOLED ಡಿಸ್‌ಪ್ಲೇ, ಆಕ್ಟಾ-ಕೋರ್ Exynos 1380 ಪ್ರೊಸೆಸರ್ ಮತ್ತು 108 ಮೆಗಾಪಿಕ್ಸೆಲ್ ಲೆನ್ಸ್ ಹೊಂದಿರುವ ಟ್ರಿಪಲ್ ಕ್ಯಾಮೆರಾ ಸೆಟಪ್‌ನಂತಹ ಹಲವಾರು ಪ್ರಮುಖ ವೈಶಿಷ್ಟ್ಯಗಳನ್ನು ಹೊತ್ತು ಬಂದಿದೆ. ಹಾಗಾದರೆ, Samsung ಪರಿಚಯಿಸಿರುವ ನೂತನ Galaxy M54 5G ಸ್ಮಾರ್ಟ್‌ಫೋನ್ ಹೇಗಿದೆ ಮತ್ತು ಇದರ ಬೆಲೆ ಎಷ್ಟಿರಬಹುದು ಎಂಬ ಬಗ್ಗೆ ಪೂರ್ಣ ವಿವರಗಳನ್ನು ನೋಡೋಣ ಬನ್ನಿ.
Galaxy M54 5G ಸ್ಮಾರ್ಟ್‌ಫೋನ್ ಹೇಗಿದೆ?
Samsung ಪರಿಚಯಿಸಿರುವ ನೂತನ Galaxy M54 5G ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಬೆಂಬಲಿಸುವ 6.7 ಇಂಚಿನ ಫುಲ್ ಹೆಚ್‌ಡಿ+ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಕಾರ್ಯನಿರ್ವಹಣೆ ವಿಭಾಗದಲ್ಲಿ, ಬಲಿಷ್ಠವಾದ ಆಕ್ಟಾ-ಕೋರ್ Exynos 1380 ಪ್ರೊಸೆಸರ್ ಹೊಂದಿರುವ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಕಂಪೆನಿ ತಿಳಿಸಿದೆ. ಇನ್ನು ಈ ಸ್ಮಾರ್ಟ್‌ಫೋನಿನ ಪ್ರಮುಖ ಹೈಲೇಟ್ ಆಗಿ 25W ವೇಗದ ಚಾರ್ಜಿಂಗ್ ಬೆಂಬಲಿಸುವ 6000mAh ಸಾಮರ್ಥ್ಯ ಬ್ಯಾಟರಿ ಸೇರಿದಂತೆ, 5G, 4G, Wi-Fi 6, ಬ್ಲೂಟೂತ್ 5.6, NFC ಮತ್ತು GPS ನಂತಹ ಕನೆಕ್ಟಿವಿಟಿ ಆಯ್ಕೆಗಳನ್ನು ನಾವು ನೋಡಬಹುದು.
ಕ್ಯಾಮೆರಾ ವಿಭಾಗದಲ್ಲಿ, ಈ Samsung Galaxy M54 5G ಸ್ಮಾರ್ಟ್‌ಫೋನ್ ಟ್ರಿಪಲ್-ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಜೇಶನ್ (OIS) ಮತ್ತು f/1.8 ಅಪಾರ್ಚರ್ ಲೆನ್ಸ್ ಜೊತೆಗೆ 108 ಮೆಗಾಪಿಕ್ಸೆಲ್ ಪ್ರಾಥಮಿಕ ಲೆನ್ಸ್, 8 ಮೆಗಾಪಿಕ್ಸೆಲ್ ಆಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು 2 ಮೆಗಾಪಿಕ್ಸೆಲ್ನ ಮ್ಯಾಕ್ರೋ ಲೆನ್ಸ್‌ಗಳನ್ನು ಒಳಗೊಂಡಿದೆ. ಈ ರಿಯರ್ ಕ್ಯಾಮೆರಾ 4K ವಿಡಿಯೋ ರೆಕಾರ್ಡ್ ಮಾಡುವ ಸಪೋರ್ಟ್ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ Galaxy M54 5G ಸ್ಮಾರ್ಟ್‌ಫೋನಿನ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.
Galaxy M54 5G ಸ್ಮಾರ್ಟ್‌ಫೋನ್ ಬೆಲೆ ಎಷ್ಟು?
Samsung Galaxy M54 5G ಸ್ಮಾರ್ಟ್‌ಫೋನ್ ಇದೀಗ Samsung ಕಂಪನಿಯ ಅಧಿಕೃತ ವೆಬ್ಸೈಟ್ನಲ್ಲಿ ಮಾತ್ರ ಅನಾವರಣಗೊಂಡಿದ್ದು, ಈ ಸ್ಮಾರ್ಟ್‌ಫೋನಿನ ಬೆಲೆ ಇನ್ನೂ ಬಹಿರಂಗವಾಗಿಲ್ಲ. ಆದರೆ, ಮುಂದಿನ ತಿಂಗಳು ಭಾರತ ಸೇರಿದಂತೆ ಜಾಗತಿಕವಾಗಿ ಬಿಡುಗಡೆಯಾಗಲಿರುವ ಈ ಸ್ಮಾರ್ಟ್‌ಫೋನ್ 30,000 ರೂ. ಆಸುಪಾಸಿನಲ್ಲಿ ಬೆಲೆಗಳನ್ನು ಹೊಂದಿರಬಹುದು ಮತ್ತು 4GB RAM + 64GB ಮತ್ತು 6GB RAM + 128GB ಎರಡು ಸ್ಟೋರೇಜ್ ಆಯ್ಕೆಯೊಂದಿಗೆ ಬಿಡುಗಡೆಯಾಗಬಹುದು ಎಂದು ಹೇಳಲಾಗಿದೆ. ಇದೀಗ Samsung ಅಧಿಕೃತ ಕಂಪನಿಯ ವೆಬ್ಸೈಟ್ನಲ್ಲಿ ಕಾಣಿಸಿಕೊಂಡಿರುವ ಈ ಸ್ಮಾರ್ಟ್‌ಫೋನ್ ಏಕೈಕ ಸಿಲ್ವರ್ ಬಣ್ಣದಲ್ಲಿ ಬರುವ ಬಗ್ಗೆ ಸೂಚನೆ ನೀಡಿದೆ.
samsung galaxy m54 phone launched with 6,000mah battery, 108mp camera, 120hz display.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm