ಬ್ರೇಕಿಂಗ್ ನ್ಯೂಸ್
24-03-23 07:08 pm Source: Vijayakarnataka ಡಿಜಿಟಲ್ ಟೆಕ್
ಭಾರತದ ಮೊಬೈಲ್ ಮಾರುಕಟ್ಟೆಯು ಬಹುನಿರೀಕ್ಷೆಯಿಂದ ಎದುರುನೋಡುತ್ತಿರುವ OnePlus ಕಂಪೆನಿಯ ಮುಂಬರುವ ಕೈಗೆಟುಕುವ ಬೆಲೆಯ ಸ್ಮಾರ್ಟ್‌ಫೋನ್ 'OnePlus Nord CE 3' ಬಿಡುಗಡೆ ದಿನಾಂಕ ಅಧಿಕೃತವಾಗಿ ಹೊರಬಿದ್ದಿದೆ. OnePlus ಕಂಪೆನಿ ಮುಂದಿನ ಏಪ್ರಿಲ್ 4 ರಂದು ದೇಶದಲ್ಲಿ 'Larger than Life - A OnePlus Nord Launch Event' ಹೆಸರಿನಲ್ಲಿ ಈವೆಂಟ್ ಒಂದನ್ನು ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ OnePlus Nord CE 2 ಸ್ಮಾರ್ಟ್‌ಫೋನಿನ ಉತ್ತರಾಧಿಕಾರಿಯಾಗಿ ನೂತನ 'OnePlus Nord CE 3' ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವ ಬಗ್ಗೆ ಕಂಪೆನಿಯ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳ ಮೂಲಕ ಬಹಿರಂಗಪಡಿಸಲಾಗಿದೆ. ಇದರ ಜೊತೆಗೆ OnePlus Nord Buds 2 ಇಯರ್‌ಬಡ್ ಕೂಡ ಮಾರುಕಟ್ಟೆಗೆ ಪರಿಚಯವಾಗಲಿದೆ ಎಂದು ತಿಳಿಸಲಾಗಿದೆ
ಕಳೆದ ಕೆಲವು ವಾರಗಳಿಂದಲೇ ದೇಶದಲ್ಲಿ 'OnePlus Nord CE 3' ಸ್ಮಾರ್ಟ್‌ಫೋನ್ ಆಗಮನವಾಗಲಿದೆ ಎಂಬ ಬಗ್ಗೆ ಹಲವಾರು ಸುದ್ದಿಗಳು ಹರಿದಾಡಿದ್ದವು. ಮುಂಬರುವ ಈ OnePlus Nord CE 3 ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಸಾಮರ್ಥ್ಯದ 6.72 ಇಂಚಿನ ಅಮೋಲೆಡ್ ಡಿಸ್‌ಪ್ಲೇ, ಸೋನಿ IMX890 ಸೆನ್ಸಾರ್ ಕ್ಯಾಮೆರಾ ಸೆಟಪ್ ಮತ್ತು 67W ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ ಎಂದು ಹೇಳಲಾಗಿತ್ತು. ಇದೀಗ ಅಧಿಕೃತ ಬಿಡುಗಡೆ ದಿನಾಂಕದ ಪ್ರಕಟಣೆಯಿಂದಾಗಿ ಹೊಸ OnePlus Nord CE 3 ಸ್ಮಾರ್ಟ್‌ಫೋನ್ ಕುರಿತಂತೆ ಮಾರುಕಟ್ಟೆಯಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಹಾಗಾದರೆ, ಮುಂಬರುವ 'OnePlus Nord CE 3' ಸ್ಮಾರ್ಟ್‌ಫೋನ್ ಹೇಗಿರಲಿದೆ ಮತ್ತು ಈ ಸ್ಮಾರ್ಟ್‌ಫೋನ್ ಬೆಲೆಗಳು ಎಷ್ಟಿರಬಹುದು ಎಂಬ ಸಂಪೂರ್ಣ ವಿವರಗಳನ್ನು ನೋಡೋಣ ಬನ್ನಿ.
OnePlus ಕಂಪೆನಿ ಪ್ರಕಟಿಸಿರುವಂತೆ ಮುಂಬರುವ OnePlus Nord CE 3' ಸ್ಮಾರ್ಟ್‌ಫೋನ್ ಪರಿಷ್ಕೃತ ವಿನ್ಯಾಸವನ್ನು ಹೊಂದಿದೆ, ಎರಡು-ವೃತ್ತದ ಕ್ಯಾಮೆರಾಗಳನ್ನು ಹೊಂದಿರುವ ಈ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳಿಗೆ ಬಳಸುವ ಕ್ಯಾಮೆರಾ ವಿನ್ಯಾಸವನ್ನು ಹೊಂದಿರುವಂತೆ ಕಾಣುತ್ತಿದೆ. ಇನ್ನು ಇದೀಗ ಉದ್ಯಮ ಮೂಲಗಳಿಂದ ಇದೀಗ ದೊರೆತಿರುವ ಮಾಹಿತಿಯಂತೆ, 'OnePlus Nord CE 3' ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ಸ್ ರೆಸಲ್ಯೂಶನ್ ಸಾಮರ್ಥ್ಯದ 6.72 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇಯು 20Hz ರಿಫ್ರೆಶ್ ರೇಟ್ ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಹಾಗೂ ನಿರೀಕ್ಷಿತ ಇನ್‌ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ ಎಂದು ತಿಳಿಸಲಾಗಿದೆ.
ಇನ್ನು ಕಾರ್ಯನಿರ್ವಹಣೆ ವಿಭಾಗದಲ್ಲಿ, 12GB RAM ಹಾಗೂ 256GB ಸ್ಟೋರೇಜ್‌ನೊಂದಿಗೆ ಸಂಯೋಜಿಸಲಾದ ಸ್ನಾಪ್‌ಡ್ರಾಗನ್ 695 ಚಿಪ್‌ಸೆಟ್‌ನಿಂದ ಚಿಪ್‌ಸೆಟ್ ಹೊಂದಿರಲಿರುವ ಈ OnePlus Nord CE 3' ಸ್ಮಾರ್ಟ್‌ಫೋನ್ ಆಕ್ಸಿಜನ್ OS 13 ಜೊತೆಗೆ Android 13 ನಲ್ಲಿ ಕಾರ್ಯನಿರ್ವಹಿಸಬಹುದು ಎಂದು ಹೇಳಲಾಗಿದೆ. ಕ್ಯಾಮೆರಾ ವಿಭಾಗದಲ್ಲಿ. 108MP ಮೆಗಾಪಿಕ್ಸೆಲ್ ಸಾಮರ್ಥ್ಯದ ಪ್ರಾಥಮಿಕ ಕ್ಯಾಮೆರಾ, 2MP ಡೆಪ್ತ್ ಸೆನ್ಸಾರ್ ಮತ್ತು 2MP ಮ್ಯಾಕ್ರೋ ಸಂವೇದಕಗಳನ್ನು ಈ ಸ್ಮಾರ್ಟ್‌ಫೋನ್ ಒಳಗೊಂಡಿರಬಹುದು. ಜೊತೆಗೆ ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಕ್ಯಾಮೆರಾ, 67W SUPERVOOC ಫಾಸ್ಟ್ ಚಾರ್ಜಿಂಗ್ ಬೆಂಬಲವಿರುವ 5,000mAh ಬ್ಯಾಟರಿ ಮತ್ತು 5ಜಿ ಬೆಂಬಲ ಸೇರಿದಂತೆ ಇತ್ತೀಚಿನ ಎಲ್ಲಾ ಕನೆಕ್ಟಿವಿಟಿ ಆಯ್ಕೆಗಳನ್ನು ಈ ಸ್ಮಾರ್ಟ್‌ಫೋನ್ ಹೊಂದಿರಲಿದೆ ಎಂದು ಹೇಳಲಾಗಿದೆ.
'OnePlus Nord CE 3' ಸ್ಮಾರ್ಟ್‌ಫೋನ್ ಬೆಲೆ ಎಷ್ಟಿರಬಹುದು?
ಭಾರತದಲ್ಲಿ ಕಳೆದ ವರ್ಷ OnePlus Nord CE 2 5G ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ಬೇಸ್ ಮಾಡೆಲ್ 23,999 ರೂ. ಬೆಲೆಯಲ್ಲಿ ಹಾಗೂ 8GB RAM + 128GB ಸ್ಟೋರೇಜ್ ಮಾಡೆಲ್ 24,999 ರೂ. ಬೆಲೆಯಲ್ಲಿ ಬಿಡುಗಡೆಯಾಗಿತ್ತು. ಇದರ ಆಧಾರದಲ್ಲಿ ಹೊಸ OnePlus Nord CE 3' ಸ್ಮಾರ್ಟ್‌ಫೋನ್ 25,000 ರೂ.ಗಳ ಆಸುಪಾಸಿನಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗಿದೆ. ಆದರೆ, ಬೆಲೆ ವಿಷಯದ ಬಗ್ಗೆ OnePlus ಕಂಪೆನಿಯಿಂದ ಯಾವುದೇ ಅಧಿಕೃತ ಮಾಹಿತಿ ಈವರೆಗೂ ಲಭ್ಯವಾಗಿಲ್ಲ.
oneplus nord ce 3 lite 5g launch on april 4 check all details.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
03-04-25 01:04 pm
HK News Staff
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
03-04-25 04:04 pm
Mangalore Correspondent
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
03-04-25 05:01 pm
HK News Desk
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm