ಬ್ರೇಕಿಂಗ್ ನ್ಯೂಸ್
17-04-23 07:30 pm Source: Vijayakarnataka ಡಿಜಿಟಲ್ ಟೆಕ್
ಭಾರತದ ಮೊಬೈಲ್ ಮಾರುಕಟ್ಟೆಯು ಬಹುನಿರೀಕ್ಷೆಯಿಂದ ಎದುರುನೋಡುತ್ತಿದ್ದ Samsung ಕಂಪೆನಿಯ ಇತ್ತೀಚಿನ Galaxy M14 5G ಸ್ಮಾರ್ಟ್‌ಫೋನ್ ಇಂದು (17, ಏಪ್ರಿಲ್) ಭರ್ಜರಿಯಾಗಿ ಬಿಡುಗಡೆಯಾಗಿದೆ. Samsung ಕಂಪೆನಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರಾದ M-ಸರಣಿಯಲ್ಲಿ Galaxy M13 ಉತ್ತರಾಧಿಕಾರಿಯಾಗಿ ಈ ಹೊಸ Galaxy M14 5G ಸ್ಮಾರ್ಟ್‌ಫೋನ್ ಎಂಟ್ರಿ ನೀಡಿದ್ದು, 6.6-ಇದು ಇಂಚಿನ PLS LCD ಡಿಸ್‌ಪ್ಲೇ, 5nm Exynos 1330 ಚಿಪ್‌ಸೆಟ್, 50-ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಮತ್ತು ಇನ್ನಿತರ ಪ್ರಮುಖ ವೈಶಿಷ್ಟ್ಯಗಳೊಂದಿಗೆ ಅತ್ಯುತ್ತಮ ಬೆಲೆಗಳಲ್ಲಿ ಮಾರುಕಟ್ಟೆಗೆ ಪರಿಚಯಗೊಂಡಿದೆ. ಹಾಗಾದರೆ, ದೇಶದಲ್ಲಿ ಬಿಡುಗಡೆಯಾಗಿರುವ ಹೊಸ Galaxy M14 5G ಸ್ಮಾರ್ಟ್‌ಫೋನ್ ಹೇಗಿದೆ ಮತ್ತು ಬೆಲೆಗಳು ಎಷ್ಟು ಎಂಬುದನ್ನು ನೋಡೋಣ ಬನ್ನಿ.
Samsung Galaxy M14 5G ಸ್ಮಾರ್ಟ್‌ಫೋನ್ ವೈಶಿಷ್ಟ್ಯಗಳು
ನೂತನ Galaxy M14 5G ಸ್ಮಾರ್ಟ್‌ಫೋನ್ HD+ (2408 x 1080 ಪಿಕ್ಸೆಲ್‌ಗಳು) ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ PLS LCD ಡಿಸ್‌ಪ್ಲೇ ಹೊಂದಿದೆ. ಕಾರ್ಯನಿರ್ವಹಣೆ ವಿಭಾಗದಲ್ಲಿ, 6GB RAM ಮತ್ತು 128GB ಸ್ಟೋರೇಜ್‌ನೊಂದಿಗೆ ಜೋಡಿಸಲಾದ Exynos 1330 ಆಕ್ಟಾ-ಕೋರ್ SoC ಪ್ರೊಸೆಸರ್ ಮತ್ತು Mali G68 GPU ಗಳೊಂದಿಗೆ ಜೋಡಿಸಲಾಗಿರುವ ಈ Galaxy M14 5G ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 13 ಆಧಾರಿತ Samsung One UI 5 ನಲ್ಲಿ ಕಾರ್ಯನಿರ್ವಹಿಸಲಿದೆ

ಮೊದಲೇ ಹೇಳಿದಂತೆ, Galaxy M14 5G ಸ್ಮಾರ್ಟ್‌ಫೋನ್ 50-ಮೆಗಾಪಿಕ್ಸೆಲ್ ಸಾಮರ್ಥ್ಯದ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು 2-ಮೆಗಾಪಿಕ್ಸೆಲ್ ಡೆಪ್ತ್ ಮತ್ತು 2-ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ನೊಂದಿಗೆ ಒಳಗೊಂಡಿದೆ. ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ, ಡಿಸ್‌ಪ್ಲೇಯ ಮೇಲ್ಭಾಗದ ಮಧ್ಯದಲ್ಲಿ ವಾಟರ್‌ಡ್ರಾಪ್ ನಾಚ್ ಶೈಲಿಯಲ್ಲಿ 13-ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮರಾ ನೀಡಲಾಗಿದೆ. ಈ ಕ್ಯಾಮೆರಾಗಳು ಇತ್ತೀಚಿನ ಹಲವಾರು ಫೋಟೊಗ್ರಫಿ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ Galaxy M14 5G ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬೃಹತ್ ಬ್ಯಾಟರಿ ಹೊಂದಿದ್ದು, ಇದು 25W ಫಾಸ್ಟ್ ಚಾರ್ಜಿಂಗ್ ಬೆಂಬಲಿಸುವ USB ಟೈಪ್-C ಪೋರ್ಟ್‌ನೊಂದಿಗೆ ಬಂದಿದೆ. ಇನ್ನುಳಿದಂತೆ, ಕರೆಗಳನ್ನು ಮಾಡುವ ವೇಳೆ ಹಿನ್ನೆಲೆ ಶಬ್ದ ರದ್ದುತಿಗೆ ಸಹಾಯ ಮಾಡುವ ವಾಯ್ಸ್ ಫೋಕಸ್ ವೈಶಿಷ್ಟ್ಯ, ಭದ್ರತೆಗಾಗ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೇರಿದಂತೆ 5G, 4G, Wi-Fi, Bluetooth 5.2, NFC ಮತ್ತು GPS ಸಂಪರ್ಕ ಆಯ್ಕೆಗಳ ಬೆಂಬಲವನ್ನು ಹೊಂದಿದೆ.

Samsung Galaxy M14 5G ಸ್ಮಾರ್ಟ್‌ಫೋನ್ ಬೆಲೆ, ಲಭ್ಯತೆ
ದೇಶದಲ್ಲಿ ಹೊಸ Samsung Galaxy M14 5G ಸ್ಮಾರ್ಟ್‌ಫೋನ್ 4GB + 128GB ಮತ್ತು 6GB + 128GB ಎರಡು ಮಾದರಿಗಳಲ್ಲಿ ಕ್ರಮವಾಗಿ 13,490 ರೂ. ಮತ್ತು 14,990 ರೂ. ಬೆಲೆಗಳಲ್ಲಿ ಬಿಡುಗಡೆಯಾಗಿದೆ. ಇನ್ನು ಇದೇ ಏಪ್ರಿಲ್ 21 ರಂದು ಮಧ್ಯಾಹ್ನ 12pm IST ಗಂಟೆಯಿಂದ ಅಧಿಕೃತ Samsung ವೆಬ್‌ಸೈಟ್, Amazon ಮತ್ತು ಆಯ್ದ ಅಂಗಡಿಗಳ ಮೂಲಕ Samsung Galaxy M14 5G ಸ್ಮಾರ್ಟ್‌ಫೋನ್ ಖರೀದಿಗೆ ಲಭ್ಯವಿರುತ್ತದೆ ಎಂದು Samsung ಕಂಪೆನಿ ತಿಳಿಸಿದೆ.
samsung galaxy m14 5g with 6,000mah battery launched in india price, specifications.
11-12-25 12:44 pm
HK News Desk
ಬೆಂಗಳೂರು ದೇವನಹಳ್ಳಿ ಬಳಿ ಭೀಕರ ಅಪಘಾತ ; ಡಿವೈಡರ್ ಹ...
11-12-25 12:14 pm
Transport Minister Ramalinga Reddy: ಆರ್ಟಿಒ...
10-12-25 09:40 pm
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm