ಬ್ರೇಕಿಂಗ್ ನ್ಯೂಸ್
17-05-23 12:30 pm HK News Desk ಡಿಜಿಟಲ್ ಟೆಕ್
ಮಾರುತಿ ಸುಜುಕಿ ವ್ಯಾಗನ್ಆರ್ ದೇಶದಲ್ಲಿ ಅತಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಮಾರುತಿ ಸುಜುಕಿ ವ್ಯಾಗನ್‍ಆರ್ ಸುಮಾರು ಎರಡು ದಶಕಗಳಿಂದ ಮಾರಾಟದಲ್ಲಿದೆ. ಈ ಮಾರುತಿ ವ್ಯಾಗನ್‍ಆರ್ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ ದೇಶದಲ್ಲಿ ಪ್ರಾರಂಭಿಸಿದಾಗಿನಿಂದಲೂ ಕೂಡ ಉತ್ತಮ ಬೇಡಿಕೆಯಿಂದ ಮಾರಾಟವಾಗುತ್ತಿದ್ದು, ಇದೀಗ ವ್ಯಾಗನ್‍ಆರ್ ಹೊಸ ಮೈಲಿಗಲ್ಲನ್ನು ಸಾಧಿಸಿದೆ.
ಮಾರುತಿ ಸುಜುಕಿ ವ್ಯಾಗನ್‍ಆರ್ 1999 ರಲ್ಲಿ ಬಿಡುಗಡೆಯಾದಗಿನಿಂದ ಇಲ್ಲಿಯವರೆಗೆ 30 ಲಕ್ಷ ಮಾರಾಟವಾಗಿ ಹೊಸ ಮೈಲಿಗಲ್ಲು ಸಾಧಿಸಿದೆ. ವ್ಯಾಗನ್‍ಆರ್ ಮಾದರಿಯು 2015 ರಲ್ಲಿ 15 ಲಕ್ಷ (16 ವರ್ಷಗಳು) ಮಾರಾಟದ ಮೈಲಿಗಲ್ಲನ್ನು ಸಾಧಿಸಿತು. ಇನ್ನು ಮುಂದಿನ 8 ವರ್ಷಗಳು ಅಂದರೆ, 2023 ರಲ್ಲಿ 15 ಲಕ್ಷ ಮಾರಾಟವಾಗಿದೆ. ಹೀಗೆ ಇಲ್ಲಿಯವರೆಗೆ, ಈ ಜನಪ್ರಿಯ ವ್ಯಾಗನ್‍ಆರ್ ಕಾರು 30 ಲಕ್ಷ ಮಾರಾಟವನ್ನು ಕಂಡಿದೆ.
ಈಗ ಮಾರುತಿ ಸುಜುಕಿ ವ್ಯಾಗನ್‍ಆರ್ ಮೂರನೇ ತಲೆಮಾರಿನ ರೂಪದಲ್ಲಿ ಮಾರಾಟ ಮಾಡಲಾಗುತ್ತಿದೆ. ಪ್ರಸ್ತುತ, ಮಾರುತಿ ವ್ಯಾಗನ್ಆರ್ ಕಾರಿನಲ್ಲಿ 1.0 ಲೀಟರ್ ಮತ್ತು 1.2 ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಆಯ್ಕೆಗಳೊಂದಿಗೆ ಬರುತ್ತದೆ. ಎರಡೂ ಮೋಟಾರ್‌ಗಳು ಡ್ಯುಯಲ್‌ಜೆಟ್, ಡ್ಯುಯಲ್ ವಿವಿಟಿ, ಐಎಸ್‌ಎಸ್ (ಐಡಲ್ ಸ್ಟಾರ್ಟ್ ಸ್ಟಾಪ್) ತಂತ್ರಜ್ಞಾನ ಮತ್ತು ಕೂಲ್ಡ್ ಇಜಿಆರ್ (ಎಕ್ಸಾಸ್ಟ್ ಗ್ಯಾಸ್ ರಿಸರ್ಕ್ಯುಲೇಷನ್) ಅನ್ನು ಹೊಂದಿವೆ.
ಎಲ್ಲಾ ತಂತ್ರಜ್ಞಾನಗಳು ಅದರ ಮೈಲೇಜ್ ಅನ್ನು ಹೆಚ್ಚಿಸುತ್ತದೆ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುತ್ತದೆ. ಮಾರುತಿ ಸುಜುಕಿ ವ್ಯಾಗನ್‍ಆರ್ ಕಾರಿನಲ್ಲಿ 1.0 ಲೀಟರ್ ಲೀಟರ್, ಇನ್‌ಲೈನ್ ಮೂರು-ಸಿಲಿಂಡರ್ ಎಂಜಿನ್ 66bhp ಮತ್ತು 89Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ದೊಡ್ಡ 1.2ಲೀಟರ್ ಇನ್‌ಲೈನ್ ನಾಲ್ಕು-ಸಿಲಿಂಡರ್ ಎಂಜಿನ್88bhp ಮತ್ತು 113Nm ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಮಾರುತಿ ಸುಜುಕಿ ವ್ಯಾಗನ್‍ಆರ್ ಕಾರು ಆಂಡ್ರಾಯ್ಡ್ ಆಟೋ ಮತ್ತು Apple CarPlay ಕನೆಕ್ಟಿವಿಯೊಂದಿಗೆ ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಟ್ಯಾಕೋಮೀಟರ್, ವಿಂಗ್ ಮಿರರ್‌ಗಳಲ್ಲಿ ಟರ್ನ್ ಇಂಡಿಕೇಟರ್‌ಗಳು, ಫ್ರಂಟ್ ಫಾಗ್ ಲ್ಯಾಂಪ್‌ಗಳು, 4 ಸ್ಪೀಕರ್‌ಗಳು, ಫ್ರಂಟ್ ಪ್ಯಾಸೆಂಜರ್ ಸೈಡ್ ಸೀಟ್ ಅಂಡರ್ ಟ್ರೇ, ಎಲೆಕ್ಟ್ರಿಕಲ್ ಫೋಲ್ಡಿಂಗ್ ವಿಂಗ್ ಮಿರರ್‌ಗಳು, ರಿಯರ್ ವೈಪರ್, ವಾಷರ್ ಮತ್ತು ಡಿಫೊಗರ್ ಮತ್ತು 14-ಇಂಚಿನ ಅಲಾಯ್ ವ್ಹೀಲ್ ಗಳನ್ನು ಟಾಪ್-ಸ್ಪೆಕ್ ZXi+ ಗಾಗಿ ಕಾಯ್ದಿರಿಸಲಾಗಿದೆ.
ಮಾರುತಿ ಸುಜುಕಿ ವ್ಯಾಗನ್‍ಆರ್ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ, ಡ್ಯುಯಲ್ ಏರ್‌ಬ್ಯಾಗ್‌ಗಳು, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು, EBD ಜೊತೆಗೆ ABS, ಸ್ಪೀಡ್ ಅಲರ್ಟ್‌ಗಳು ಮತ್ತು ಸೀಟ್‌ಬೆಲ್ಟ್ ರಿಮೈಂಡರ್ ಅನ್ನು ಹೊಂದಿದೆ. ಇನ್ನು ಈ ಕಾರಿನಲ್ಲಿ ಮ್ಯಾನ್ಯುವಲ್ AC, ಸೆಂಟ್ರಲ್ ಲಾಕಿಂಗ್, ಡಲ್ ಸ್ಟಾರ್ಟ್/ಸ್ಟಾಪ್ ಮತ್ತು 13-ಇಂಚಿನ ಸ್ಟೀಲ್ ವ್ಹೀಲ್ ಗಳನ್ನು ಹೊಂದಿವೆ
ಪ್ರಸ್ತುತ, ಮಾರುತಿ ವ್ಯಾಗನ್ಆರ್ ಕಾರಿನ ಬೆಲೆಯು ರೂ.5.54 ಲಕ್ಷದಿಂದ ರೂ.7.42 ಲಕ್ಷವಾಗಿದೆ. ಮಾರುತಿ ವ್ಯಾಗನ್ಆರ್ ಕಾರು LXi ಮತ್ತು VXi CNG ರೂಪಾಂತರಗಳನ್ನು ಹೊಂದಿದ್ದು, ಈ ಕಾರಿನ ಬೆಲೆಯು ರೂ.6.45 ಲಕ್ಷ ಮತ್ತು ರೂ.6.89 ಲಕ್ಷವಾಗಿದೆ, ಇನ್ನು ಮಾರುತಿ ವ್ಯಾಗನ್ಆರ್ ಕಾರಿನ AMT ಗೇರ್‌ಬಾಕ್ಸ್ ಮಾದರಿಯು VXi, ZXi ಮತ್ತು ZXi+ ರೂಪಾಂತರಗಳಲ್ಲಿ ಲಭ್ಯವಿದೆ, ಈ ಎಲ್ಲಾ ಬೆಲೆಗಳು ಎಕ್ಸ್ ಶೋರೂಂ ಪ್ರಕಾರವಾಗಿದೆ.
Maruti Suzuki India today announced that the legendary WagonR hatchback has reached the sales milestone of 30,00,000 units since its launch in 1999. The Maruti Suzuki WagonR is currently priced between Rs 5,54,500 and Rs 7,42,500 (ex-showroom) and takes on the Tata Tiago.The first 10,00,000 units in volumes for the WagonR came in 2012, 13 years after its introduction.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm