ಬ್ರೇಕಿಂಗ್ ನ್ಯೂಸ್
17-05-23 07:19 pm Source: Gizbot ಡಿಜಿಟಲ್ ಟೆಕ್
ಮೊಬೈಲ್ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಭಾರತದಲ್ಲಿ ತನ್ನ ಭಿನ್ನ ಮಾದರಿಯ ಫೋನ್‌ಗಳ ಮೂಲಕ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಸದ್ಯ ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ F54 5G ಬಿಡುಗಡೆಗೆ ತಯಾರಿ ನಡೆಸಿದ್ದು, ಬಿಡುಗಡೆಗೂ ಮುನ್ನವೇ ಅದರ ಬೆಲೆ ವಿವರಗಳು ಬಹಿರಂಗಗೊಂಡಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ. ಈ ನಡುವೆ ಈ ಸ್ಮಾರ್ಟ್‌ಫೋನ್ ಫೀಚರ್ಸ್‌ಗಳು ಹಾಗೂ ಬೆಲೆ ವಿವರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಎಕ್ಸಿನೋಸ್ 1380 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಫೀಚರ್ಸ್ ಹೇಗಿದೆ? ಇದರ ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಡಿಸ್‌ಪ್ಲೇ ಹೇಗಿರಲಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎಂದು ವರದಿಯಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಎಕ್ಸಿನೋಸ್ 1380 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ OneUI 5 ನಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲಾಗಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 256GB ಇಂಟರ್ ಸ್ಟೋರೇಜ್ ಆಯ್ಕೆಗಳಲ್ಲಿ ಬರಲಿದೆ ಎಂದು ಸೂಚಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಕ್ಯಾಮೆರಾ ಸೆಟ್‌ಅಪ್ ಏನಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿರಬಹುದು ಎಂದು ಹೇಳಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಬ್ಯಾಟರಿ ಮತ್ತು ಇತರೆ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 25W ಚಾರ್ಜಿಂಗ್ ಬೆಂಬಲದೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿರಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿರುವ ಸಾದ್ಯತೆಯಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಬೆಲೆ ಮತ್ತು ಲಭ್ಯತೆ
ಆನ್‌ಲೈನ್‌ನಲ್ಲಿ ಸೋರಿಕೆಯಾದ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ನ 8GB RAM ಮತ್ತು 256GB ಸ್ಟೋರೇಜ್ ಆಯ್ಕೆಗೆ 35,999ರೂ.ಬೆಲೆ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ಇನ್ನು ಇತ್ತೀಚಿಗೆ ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಹೊಸ ಗ್ಯಾಲಕ್ಸಿ A54 5G ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ 6.4 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್ ನೀಡಲಿದೆ. ಇದು ಸ್ಯಾಮ್‌ಸಂಗ್ ಎಕ್ಸಿನೋಸ್ 1380 SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಒನ್ UI 5.1 ರನ್ ಮಾಡಲಿದೆ. ಹಾಗೆಯೇ 8GB ಯ RAM ಹಾಗೂ 256GB ಇಂಟರ್ ಸ್ಟೋರೇಜ್‌ನಲ್ಲಿ ಕಾಣಿಸಿಕೊಂಡಿದ್ದು, ಈ ಸ್ಟೋರೇಜ್ ಅನ್ನು ಹೆಚ್ಚಿಗೆ ಮಾಡಿಕೊಳ್ಳಲು ಎಸ್‌ಡಿ ಕಾರ್ಡ್ ಸ್ಲಾಟ್ ಆಯ್ಕೆ ನೀಡಲಾಗಿದೆ.
samsung galaxy f54 5g pricing details leaked on the web.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm