ಬ್ರೇಕಿಂಗ್ ನ್ಯೂಸ್
03-06-23 09:47 pm Source: Gizbot ಡಿಜಿಟಲ್ ಟೆಕ್
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಶೀಘ್ರದಲ್ಲೇ ಹೊಸ ರೆಡ್ಮಿ 12 (Redmi 12) ಫೋನ್ ಲಾಂಚ್ ಮಾಡುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್ ರೆಡ್ಮಿ 10 ಮಾದರಿಯ ಉತ್ತರಾಧಿಕಾರಿಯಾಗಿರಲಿದೆ ಎಂದು ವರಿದಯಾಗಿದೆ. ಇನ್ನು ಸ್ಮಾರ್ಟ್‌ಫೋನ್ ಗ್ಲೋಬಲ್ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಹೌದು, ರೆಡ್ಮಿ 12 ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧವಾಗಿದ್ದು, ಆನ್‌ಲೈನ್‌ನಲ್ಲಿ ಫೀಚರ್ಸ್ ಲೀಕ್ ಆಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ರೆಡ್ಮಿ 12 ಫೋನ್ ಫೀಚರ್ಸ್ ನಿರೀಕ್ಷೆ: ರೆಡ್ಮಿ 12 ಸ್ಮಾರ್ಟ್‌ಫೋನ್ 6.79 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ನೊಂದಿಗೆ ಬರುವ ಸಾಧ್ಯತೆಯಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G88 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಹಾಗೆಯೇ 8GB RAM ಮತ್ತು 256GB ಇನ್‌ಬಿಲ್ಟ್ ಸ್ಟೋರೇಜ್ ಹೊಂದಿರಲಿದೆ ಎಂದು ವರದಿಯಾಗಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ ಹಿಂಬದಿಯ ಕ್ಯಾಮೆರಾದಲ್ಲಿ ಫ್ಲ್ಯಾಷ್‌ಲೈಟ್ ಅನ್ನು ಸಹ ಇರಿಸಲಾಗಿದೆ ಎಂದು ಕಂಪೆನಿ ಹೇಳಿದೆ.
ರೆಡ್ಮಿ 12 ಸ್ಮಾರ್ಟ್‌ಫೋನ್ 18W ವೈರ್ಡ್ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ NFC ಮತ್ತು ಬ್ಲೂಟೂತ್ v5.3 ಸಂಪರ್ಕವನ್ನು ಬೆಂಬಲಿಸುತ್ತದೆ ಎಂದು ಹೇಳಲಾಗುತ್ತದೆ. ಜೊತೆಗೆ ಭದ್ರತೆಗಾಗಿ, ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್‌ನೊಂದಿಗೆ ಬರುವ ಸಾಧ್ಯತೆಯಿದೆ.
ರೆಡ್ಮಿ 12 ಬೆಲೆ ನಿರೀಕ್ಷೆ: ಆನ್‌ಲೈನ್‌ನಲ್ಲಿ ಬಹಿರಂಗವಾಗಿರುವ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ ಯುರೋ 209.99 (ಸುಮಾರು 18,600ರೂ) ನಲ್ಲಿ ಪ್ರಾರಂಭವಾಗಲಿದೆ. ಇದು ಕಪ್ಪು, ನೀಲಿ ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಬರಲಿದೆ ಎಂದು ವರದಿಯಾಗಿದೆ.
ಇತ್ತೀಚಿಗೆ ರೆಡ್ಮಿ ಸಂಸ್ಥೆ ಹೊಸದಾಗಿ ರೆಡ್ಮಿ 12C ಮತ್ತು ರೆಡ್ಮಿ ನೋಟ್12 ಫೋನ್‌ಗಳನ್ನು ಪರಿಚಯಿಸಿದೆ. ಇದರಲ್ಲಿ ರೆಡ್ಮಿ 12C ಫೋನ್ 6.71 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು, 1600×720 ಪಿಕ್ಸೆಲ್ ರೆಸಲ್ಯೂಶನ್ ನೀಡಲಿದೆ. ಹಾಗೆಯೇ 60Hz ರಿಫ್ರೆಶ್ ರೇಟ್ ನೀಡಲಿದ್ದು, ಜೊತೆಗೆ 20:9 ಆಕಾರ ಅನುಪಾತ ಹೊಂದಿದೆ. ಸೆಲ್ಫಿ ಉದ್ದೇಶಕ್ಕೆ ವಾಟರ್‌ಡ್ರಾಪ್ ನಾಚ್ ಶೈಲಿ ಪಡೆದುಕೊಂಡಿದೆ. ಇನ್ನು ರೆಡ್ಮಿ ನೋಟ್ 12 ಫೋನ್ 6.67 ಇಂಚಿನ FHD+ ಅಮೋಲೆಡ್ ಡಿಸ್‌ಪ್ಲೇ ಹೊಂದಿದ್ದು, 120Hz ಹೈ ರಿಫ್ರೆಶ್ ರೇಟ್ ನೀಡಲಿದೆ. ಹಾಗೆಯೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿರುವ ಈ ಫೋನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಲೇಯರ್ ನಿಂದ ರಕ್ಷಿಸಲ್ಪಟ್ಟಿದೆ. ಜೊತೆಗೆ ಸೆಲ್ಪೀ ಕ್ಯಾಮೆರಾ ಉದ್ದೇಶಕ್ಕೆ ಪಂಚ್-ಹೋಲ್ ಕಟೌಟ್ ರಚನೆ ಪಡೆದಿದೆ.
ರೆಡ್ಮಿ 12C ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಿದರೆ ಮತ್ತೊಂದು ಫೋನ್ ಸ್ನಾಪ್‌ಡ್ರಾಗನ್ 685 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದರೊಂದಿಗೆ ಎರಡೂ ಫೋನ್‌ಗಳು ಸಹ 6GB RAM ಹಾಗೂ 128GB ಇಂಟರ್‌ಸ್ಟೋರೇಜ್‌ನ ಬೇಸ್ ಮಾಡೆಲ್‌ನಲ್ಲಿ ಕಂಡುಬಂದಿವೆ.
Redmi 12 is expected to launch soon spotted on website ahead of launch.
15-01-25 12:19 pm
HK News Desk
Hassan Accident, Mangalore: ಕ್ಯಾಂಟಿನ್ಗೆ ನುಗ್...
14-01-25 03:36 pm
Lakshmi Hebbalkar Car Accident: ಅಡ್ಡ ಬಂದ ನಾಯಿ...
14-01-25 12:32 pm
Vijayapura News: ಕೌಟುಂಬಿಕ ಕಲಹ ; ಮಕ್ಕಳನ್ನ ಕಾಲು...
13-01-25 10:30 pm
Hassan Mangalore Suicide: ಹುಡ್ಗೀರು ಏನ್ಮಾಡಿದ್ರ...
13-01-25 06:21 pm
14-01-25 07:18 pm
HK News Desk
Mahakumbh 2025: ಮಹಾ ಕುಂಭ ಮೇಳದಲ್ಲಿ ಭಾರತ ದರ್ಶನ...
13-01-25 10:49 pm
ನನ್ನ ಹೆಂಡತಿ ಸುಂದರಿಯಾಗಿದ್ದಾಳೆ, ಅವಳನ್ನು ನೋಡಲು ಇ...
13-01-25 09:58 am
ಪಾಕಿಸ್ತಾನ ಪರಮಾಣು ಇಂಧನ ಆಯೋಗದ 18 ವಿಜ್ಞಾನಿಗಳನ್ನು...
12-01-25 05:07 pm
Hollywood hills, Los Angeles fires: ಲಾಸ್ ಏಂಜ...
09-01-25 12:11 pm
15-01-25 12:09 pm
Mangaluru Correspondent
Mangalore News, Savayava Sante: ಫೆಬ್ರವರಿ ತಿಂಗ...
14-01-25 08:36 pm
\MP Brijesh Chowta, Kadaba, Solar Park: ಕಡಬ ತ...
14-01-25 02:27 pm
BJP protest, Mangalore, cow udders row: ಹಸುವ...
13-01-25 09:08 pm
Kadri Kalamele 2025, Mangalore: ಕದ್ರಿ ಕಲಾಮೇಳಕ...
13-01-25 08:43 pm
14-01-25 10:40 pm
HK News Desk
Mangalore crime, Diesel thieves: ಸುರತ್ಕಲ್ ; ಟ...
14-01-25 04:47 pm
Mangalore, Tannirbhavi beach, crime: ತಣ್ಣೀರುಬ...
13-01-25 03:30 pm
Mangalore, crime, rape: ಬ್ಯಾಂಕ್ ಉದ್ಯೋಗಿ ಯುವತಿ...
11-01-25 10:21 pm
Mumbai Crime, Fruad, Torres Ponzi: ಚೈನ್ ಸ್ಕೀಮ...
10-01-25 11:05 pm