ಬಿಡುಗಡೆಗೂ ಮುನ್ನವೇ ಸಖತ್‌ ಸೌಂಡ್‌ ಮಾಡ್ತಿದೆ ಇನ್ಫಿನಿಕ್ಸ್‌ ನೋಟ್‌ 30 5G!

10-06-23 07:44 pm       Source: Gizbot   ಡಿಜಿಟಲ್ ಟೆಕ್

ಇನ್ಫಿನಿಕ್ಸ್‌ ಕಂಪೆನಿ ತನ್ನ ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಇದೀಗ ಹೊಸ ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ.

ಇನ್ಫಿನಿಕ್ಸ್‌ ಕಂಪೆನಿ ತನ್ನ ವಿಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಇದೀಗ ಹೊಸ ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇದೇ ಜೂನ್ 14 ರಂದು ಲಾಂಚ್‌ ಆಗೋದು ಕನ್ಫರ್ಮ್‌ ಆಗಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎನ್ನಲಾಗಿದೆ.

ಹೌದು, ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಜೊತೆಗೆ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

Confirm Infinix Note 30 5G Set to Launch in India on June 14 come with  108-Megapixel Camera - Tech news hindi - Infinix Note 30 5G की लॉन्च डेट  कन्फर्म, 108MP कैमरा

ಇನ್ಫಿನಿಕ್ಸ್‌ ನೋಟ್‌ 30 5G ಫೀಚರ್ಸ್‌ ವಿವರ: ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 240Hz ಟಚ್ ಸ್ಯಾಪ್ಲಿಂಗ್‌ ರೇಟ್‌ ಮತ್ತು 580 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಇನ್ಫಿನಿಕ್ಸ್‌ ನೋಟ್‌ 30 5G ಪ್ರೊಸೆಸರ್‌ ಯಾವುದು: ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಬಿಲ್ಟ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ

Infinix Note 30 5G Price in India verified to Be Under Rs. 15,000 - Learn  with saif

ಇನ್ಫಿನಿಕ್ಸ್‌ ನೋಟ್‌ 30 5G ಕ್ಯಾಮೆರಾ ಸೆಟ್‌ಅಪ್‌: ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಅನಿರ್ದಿಷ್ಟ "AI ಕ್ಯಾಮರಾ" ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಇನ್ಫಿನಿಕ್ಸ್‌ ನೋಟ್‌ 30 5G ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು: ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ 45W ವೈರ್ಡ್ ಚಾರ್ಜಿಂಗ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು ಕೇವಲ 30 ನಿಮಿಷಗಳಲ್ಲಿ 1% ಯಿಂದ 75% ಬ್ಯಾಟರಿ ಚಾರ್ಜ್ ಮಾಡಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ JBL ಸ್ಟಿರಿಯೊ ಸ್ಪೀಕರ್‌ಗಳು, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, 3.55 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದರ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ.

Infinix Note 30 5G | త్వ‌ర‌లో భార‌త్ మార్కెట్లోకి ఇన్‌ఫినిక్స్ నోట్ 30  5జీ.. ముహూర్తం ఖ‌రారు.. ఇవీ స్పెషిఫికేష‌న్లు! | Infinix Note 30 5G With  108-Megapixel Rear Camera Set to ...

ಇನ್ನು ಇತ್ತೀಚಿಗೆ ಇನ್ಫಿನಿಕ್ಸ್‌ ನೋಟ್‌ 30i ಸ್ಮಾರ್ಟ್‌ಫೋನ್‌ ಅನ್ನು ಪರಿಚಯಿಸಿದೆ ಈ ಸ್ಮಾರ್ಟ್‌ಫೋನ್‌ 6.6 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು FHD+ ರೆಸಲ್ಯೂಶನ್, 180Hz ಟಚ್‌ ಸ್ಯಾಪ್ಲಿಂಗ್ ರೇಟ್‌ ಮತ್ತು 60Hz ರಿಫ್ರೆಶ್ ರೇಟ್‌ ಅನ್ನು ನೀಡಲಿದೆ. ಇನ್ಫಿನಿಕ್ಸ್‌ ನೋಟ್‌ 30i ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ.

infinix note 30 5g to launch in india on june 14.