ಬ್ರೇಕಿಂಗ್ ನ್ಯೂಸ್
12-06-23 07:31 pm Source: Gizbot ಡಿಜಿಟಲ್ ಟೆಕ್
ಮೊಬೈಲ್ ಮಾರುಕಟ್ಟೆಯಲ್ಲಿ ಈಗಾಗಲೇ ಗಮನ ಸೆಳೆದಿರುವ ರಿಯಲ್‌ಮಿ ಸಂಸ್ಥೆಯು ಹಲವು ಜಬರ್ದಸ್ತ್ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಅದರಲ್ಲಿಯೂ GT ಸರಣಿಯ ಫೋನ್‌ಗಳು ಹೆಚ್ಚಿನ ಗಮನ ಸೆಳೆದಿದ್ದು, ಸಂಸ್ಥೆಯು ಆ ಸಾಲಿಗೆ ಈಗ ಹೊಸದಾಗಿ ರಿಯಲ್‌ಮಿ GT ನಿಯೋ 5 ಪ್ರೊ ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲು ಸಕಲ ಸಜ್ಜಾಗಿದೆ.
ಹೌದು, ರಿಯಲ್‌ಮಿ ಕಂಪನಿಯು ರಿಯಲ್‌ಮಿ GT ನಿಯೋ 5 ಪ್ರೊ ಲಾಂಚ್ ಮಾಡಲು ತಯಾರಾಗುತ್ತಿದ್ದು, ಈ ಫೋನಿನ ಲೀಕ್ ಫೀಚರ್ಸ್‌ಗಳು ಮೊಬೈಲ್ ಪ್ರಿಯರಲ್ಲಿ ಸಾಕಷ್ಟು ಕುತೂಹಲ ಮೂಡಿಸಿವೆ. ಅಂದಹಾಗೆ ಈ ಫೋನ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುವುದು ಬಹುತೇಕ ಖಚಿತವಾಗಿದ್ದು, ಅತ್ಯುತ್ತಮ ಡಿಸ್‌ಪ್ಲೇ ರಿಫ್ರೆಶ್ ರೇಟ್ ಒಳಗೊಂಡಿರಲಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ : ರಿಯಲ್‌ಮಿ GT ನಿಯೋ 5 ಪ್ರೊ ಫೋನ್ 6.7 ಇಂಚಿನ 1.5K OLED ಡಿಸ್‌ಪ್ಲೇಯನ್ನು ಹೊಂದಿರಲಿದ್ದು, ಇದು 144Hz ರಿಫ್ರೆಶ್ ರೇಟ್ ನೀಡಲಿದೆ ಎನ್ನಲಾಗಿದೆ. ಹಗಾಎಯೇ ಇದು 2160Hz PWM ಡಿಮಿಂಗ್ ಹೊಂದಿರಲಿದ್ದು, ಕನಿಷ್ಠ ಡಿಸ್‌ಪ್ಲೇ ಅಂಚಿನ ರಚನೆ ಪಡೆದಿರಲಿದೆ.
ಪ್ರೊಸೆಸರ್ ಪವರ್ ಯಾವುದು : ರಿಯಲ್‌ಮಿ GT ನಿಯೋ 5 ಪ್ರೊ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುವುದು ಬಹುತೇಕ ಖಚಿತವಾಗಿದೆ. ಇದರೊಂದಿಗೆ ಇತ್ತೀಚಿನ ಆಂಡ್ರಾಯ್ಡ್ 13 ಓಎಸ್ ಸಫೋರ್ಟ್ ಒಳಗೊಂಡಿರಲಿದೆ. ಈ ಫೋನ್ 16GB RAM ಮತ್ತು 256GB/512GB ಇಂಟರ್ನಲ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗಳನ್ನು ಪಡೆದಿರಲಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ : ರಿಯಲ್‌ಮಿ GT ನಿಯೋ 5 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿರಲಿದೆ ಎನ್ನಲಾಗಿದ್ದು, ಇದರಲ್ಲಿ 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ತಿಳಿದುಬಂದಿದೆ. ಜೊತೆಗೆ ಸೆಲ್ಫಿಗಾಗಿ 16 ಮೆಗಾ ಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ.
ಬ್ಯಾಟರಿ ಬ್ಯಾಕ್‌ಅಪ್ : ರಿಯಲ್‌ಮಿ GT ನಿಯೋ 5 ಪ್ರೊ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರಲಿದ್ದು, ಇದಕ್ಕೆ ಪೂರಕವಾಗಿ 100W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿರಲಿದೆ. ಇದರೊಂದಿಗೆ ಇತ್ತೀಚಿನ ಕೆಲವು ಅಗತ್ಯ ಕನೆಕ್ಟಿವಿಟಿ ಸೌಲಭ್ಯಗಳನ್ನು ಸಹ ಈ ಫೋನ್ ಒಳಗೊಂಡಿರಲಿದೆ ಎಂದು ಹೇಳಲಾಗುತ್ತಿದೆ.
ಹಾಗೆಯೇ ರಿಯಲ್‌ಮಿ ಸಂಸ್ಥೆಯು ರಿಯಲ್‌ಮಿ GT ನಿಯೋ 6 SE ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಜ್ಜಾಗುತ್ತಿದೆ ಎಂದು ಬಹಿರಂಗಪಡಿಸಿದೆ. DCS ಬಹಿರಂಗಪಡಿಸಿದ ವಿವರಗಳ ಪ್ರಕಾರ, ಮುಂಬರುವ ರಿಯಲ್‌ಮಿ GT ನಿಯೋ 6 SE ಫೋನ್ 144Hz ರಿಫ್ರೆಶ್ ರೇಟ್ ಹೊಂದಿರಲಿದ್ದು, 6.74 ಇಂಚಿನ OLED ಡಿಸ್‌ಪ್ಲೇ ಅನ್ನು ಪಡೆದಿರಲಿದೆ. ಹಾಗೆಯೇ ಈ ಫೋನ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಆವೃತ್ತಿಯೊಂದಿಗೆ ಬರಲಿದೆ.
ಇನ್ನು ಈ ರಿಯಲ್‌ಮಿ GT ನಿಯೋ 6 SE ಸ್ಮಾರ್ಟ್‌ಫೋನ್ ರಿಯಲ್‌ಮಿ GT ನಿಯೋ 5 ಪ್ರೊ ಫೋನಿನಂತೆ, ಹಿಂಬದಿಯಲ್ಲಿ 50 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಹೇಳಲಾಗುತ್ತದೆ. ಇದರೊಂದಿಗೆ ರಿಯಲ್‌ಮಿ GT ನಿಯೋ 6 SE ಸ್ಮಾರ್ಟ್‌ಫೋನ್ 100W ವೇಗದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿರಲಿದೆ ಎಂದು ತಿಳಿದು ಬಂದಿದೆ.
realme gt neo 5 pro specifications tipped ahead of launch.
05-02-25 12:29 pm
Bangalore Correspondent
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
Two-wheeler rider fined, Bangalore Traffic: ಎ...
04-02-25 03:09 pm
Cow theft, Mankal Vaidya: ಇನ್ಮುಂದೆ ಗೋಹತ್ಯೆ ನಡ...
04-02-25 12:59 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
04-02-25 07:47 pm
Mangalore Correspondent
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
Kotekar Bank Robbery, Shashi Tevar, update: ಬ...
02-02-25 05:02 pm
Air India Express, Mangalore Delhi flight: ಮಂ...
01-02-25 07:47 pm
03-02-25 05:46 pm
Mangalore Correspondent
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am