ಬ್ರೇಕಿಂಗ್ ನ್ಯೂಸ್
13-06-23 07:39 pm Source: Gizbot ಡಿಜಿಟಲ್ ಟೆಕ್
ಟೆಕ್ ವಲಯದ ದೈತ್ಯ ಎಂದೇ ಖ್ಯಾತಿ ಪಡೆದಿರುವ ಶಿಯೋಮಿ ಕಂಪೆನಿ ವಿಭಿನ್ನ ಶ್ರೇಣಿಯ ಡಿವೈಸ್‌ಗಳಿಂದ ಗುರುತಿಸಿಕೊಂಡಿದೆ. ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾತ್ರವಲ್ಲದೆ ನವೀನ ಟೆಕ್ನಾಲಜಿಯ ಪ್ಯಾಡ್‌ಗಳನ್ನು ಕೂಡ ಪರಿಚಯಿಸುತ್ತಾ ಬಂದಿದೆ. ಇದೀಗ ಭಾರತದಲ್ಲಿ ಹೊಸ ಶಿಯೋಮಿ ಪ್ಯಾಡ್ 6 (Xiaomi Pad 6)ಅನ್ನು ಬಿಡುಗಡೆ ಮಾಡಿದೆ.
ಹೌದು, ಶಿಯೋಮಿ ಪ್ಯಾಡ್ 6 ಭಾರತಕ್ಕೆ ಎಂಟ್ರಿ ನೀಡಿದೆ. ಇದು 11 ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಟ್ಯಾಬ್ಲೆಟ್ ಫುಲ್ ಚಾರ್ಜ್‌ನಲ್ಲಿ ಎರಡು ದಿನಗಳ ಬ್ಯಾಟರಿ ಅವಧಿಯನ್ನು ನೀಡಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಟ್ಯಾಬ್ಲೆಟ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಶಿಯೋಮಿ ಪ್ಯಾಡ್ 6 ಫೀಚರ್ಸ್ ಹೇಗಿದೆ?
ಶಿಯೋಮಿ ಪ್ಯಾಡ್ 6 11 ಇಂಚಿನ 2.8K IPS LCD ಸ್ಕ್ರೀನ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 1,800x2,880 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 550 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್, 309ppi ಪಿಕ್ಸೆಲ್ ಸಾಂದ್ರತೆ, ಡಾಲ್ಬಿ ವಿಷನ್ ಬೆಂಬಲ ಮತ್ತು 144Hz ವರೆಗೆ ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಜೊತೆಗೆ 30Hz, 48Hz, 50Hz, 60Hz, 90Hz, 120Hz, ಮತ್ತು 144Hz ಏಳು ರಿಫ್ರೆಶ್ ರೇಟ್‌ಗಳನ್ನು ಹೊಂದಿದೆ.
ಶಿಯೋಮಿ ಪ್ಯಾಡ್ 6 ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ MIUI 14 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಟ್ಯಾಬ್ಲೆಟ್ ಹಿಂಭಾಗದಲ್ಲಿ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 105-ಡಿಗ್ರಿ ಫೀಲ್ಡ್ ಆಫ್ ವ್ಯೂ ನೀಡಲಿದೆ.

ಶಿಯೋಮಿ ಪ್ಯಾಡ್ 6 8,840mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್ ಚಾರ್ಜ್‌ನಲ್ಲಿ ಎರಡು ದಿನಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಜೊತೆಗೆ 33W ವೈರ್ಡ್ ಚಾರ್ಜಿಂಗ್‌ಗೆ ಬೆಂಬಲಿಸಲಿದ್ದು, 100 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು ಎಂದು ಶಿಯೋಮಿ ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 6, ಬ್ಲೂಟೂತ್ 5.3 ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿವೆ. ಇದು ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್ ಮತ್ತು ಹಾಲ್ ಸೆನ್ಸಾರ್‌ನಂತಹ ಸಂವೇದಕಗಳನ್ನು ಒಳಗೊಂಡಿದೆ.
ಭಾರತದಲ್ಲಿ ಶಿಯೋಮಿ ಪ್ಯಾಡ್ 6 ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಶಿಯೋಮಿ ಪ್ಯಾಡ್ 6 ಬೆಲೆ 6GB + 128GB RAM ಸ್ಟೋರೇಜ್ ಆಯ್ಕೆಗೆ 26,999ರೂ.ಆಗಿದೆ. ಆದರೆ 8GB + 256GB ಸ್ಟೋರೇಜ್ ರೂಪಾಂತರದ ಬೆಲೆ 28,999ರೂ.ಆಗಿದೆ. ಇದು ಗ್ರ್ಯಾಫೈಟ್ ಗ್ರೇ ಮತ್ತು ಮಿಸ್ಟ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಸದ್ಯ ಗ್ರಾಹಕರು ಈ ಎರಡು ಸ್ಟೋರೇಜ್ ಆಯ್ಕೆಯ ಟ್ಯಾಬ್ಲೆಟ್ ಅನ್ನು ICICI ಬ್ಯಾಂಕ್ ಕಾರ್ಡ್ ಮೂಲಕ ರಿಯಾಯಿತಿ ದರದಲ್ಲಿ ಅಂದರೆ ಕ್ರಮವಾಗಿ 23,999ರೂ ಮತ್ತು 25,999ರೂ.ಗಳಿಗೆ ಖರೀದಿಸಬಹುದಾಗಿದೆ. ಈ ಟ್ಯಾಬ್ಲೆಟ್ ಭಾರತದಲ್ಲಿ Amazon, Mi.com ಮತ್ತು ಇತರ ಚಿಲ್ಲರೆ ಅಂಗಡಿಗಳ ಮೂಲಕ ಜೂನ್ 21 ರಂದು ಮಾರಾಟವಾಗಲಿದೆ. ಇದರ ಜೊತೆಗೆ ಶಿಯೋಮಿ ಪ್ಯಾಡ್ 6 ಕೀಬೋರ್ಡ್ 4,999ರೂ. ಬೆಲೆಗೆ ದೊರೆಯಲಿದೆ.
xiaomi pad 6 with 144hz lcd display launched in india.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm