ಬ್ರೇಕಿಂಗ್ ನ್ಯೂಸ್
20-06-23 08:05 pm Source: Gizbot ಡಿಜಿಟಲ್ ಟೆಕ್
ಮೊಬೈಲ್ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನ ಪಡೆದಿರುವ ವಿವೋ ಕಂಪನಿಯು ಈಗಾಗಲೇ ಹಲವು ಭಿನ್ನ ಶ್ರೇಣಿಯ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಆ ಪೈಕಿ ಸಂಸ್ಥೆಯು ಇದೀಗ X ಸರಣಿಯಲ್ಲಿ ನೂತನ ಮತ್ತೊಂದು ಫೋನ್ ಅನ್ನು ಲಾಂಚ್ ಮಾಡಲು ತಯಾರಾಗುತ್ತಿದೆ. ಅದುವೇ ವಿವೋ X100 ಪ್ರೊ+ (Vivo X100 Pro+) ಫೋನ್ ಆಗಿದ್ದು, ಈ ಫೋನ್ 200ಎಂಪಿ ಪೆರಿಸ್ಕೋಪ್ ಟೆಲಿಫೋಟೋ ಕ್ಯಾಮೆರಾ ಹೊಂದಿರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಹೌದು, ವಿವೋ ಕಂಪನಿಯು ನೂತನವಾಗಿ ಸದ್ಯದಲ್ಲೇ ವಿವೋ X100 ಪ್ರೊ+ (Vivo X100 Pro+) ಫೋನ್ ಪರಿಚಯಿಸಲು ಸಜ್ಜಾಗುತ್ತಿದೆ. ಈ ಸ್ಮಾರ್ಟ್‌ಫೋನ್ ಪ್ರೀಮಿಯಂ ಶ್ರೇಣಿಯಲ್ಲಿ ಇರಬಹುದು ಎಂದು ಹೇಳಲಾಗಿದ್ದು, ಸಂಸ್ಥೆಯು ಆರಂಭದಲ್ಲಿ ಚೀನಾದಲ್ಲಿ ಈ ಫೋನ್ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಸಂಸ್ಥೆಯು ಮೊಬೈಲ್ ಬಿಡುಗಡೆ ದಿನಾಂಕ ಬಹಿರಂಗ ಮಾಡಿಲ್ಲ.
ಕೆಲವು ಟಿಪ್‌ಸ್ಟರ್ ಮಾಹಿತಿ ಪ್ರಕಾರ ವಿವೋ X100 ಪ್ರೊ+ ಫೋನ್ ಬಿಡುಗಡೆ ಪ್ರಚಾರದ ಸಿದ್ಧತೆಗಳು ಪ್ರಾರಂಭವಾಗಿದೆ ಎಂದಿದ್ದಾರೆ. ಹಾಗೆಯೇ ವೈಬೋ-ಆಧಾರಿತ ಟಿಪ್‌ಸ್ಟರ್ ಫಿಕ್ಸೆಡ್ ಫೋಕಸ್ ಡಿಜಿಟಲ್ ಅವರು ವಿವೋ X100 ಪ್ರೊ+ ವಿನ್ಯಾಸ ರೆಂಡರ್ ಎಂದು ಶೇರ್ ಮಾಡಿದ್ದಾರೆ. ಮುಂಬರುವ ಸ್ಮಾರ್ಟ್‌ಫೋನ್ ಕಪ್ಪು ಬಣ್ಣದಲ್ಲಿ ಇರುವ ಬಗ್ಗೆ ಹಾಗೂ ಹಿಂಭಾಗದ ವೃತ್ತಾಕಾರ ಕ್ಯಾಮೆರಾ ರಚನೆ ಇರುವ ಬಗ್ಗೆ ಲೀಕ್ ಫೋಟೋದಿಂದ ತಿಳಿಯಬಹುದಾಗಿದೆ.
ನೂತನ ವಿವೋ X100 ಪ್ರೊ+ ಫೋನ್ ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸಲ್ ಪೆರಿಸ್ಕೋಪ್ ಟೆಲಿಫೋಟೋ ಸೆನ್ಸಾರ್ ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಹಾಗೆಯೇ ಮುಂಭಾಗದಲ್ಲಿ ಪಂಚ್ ಹೋಲ್ ಮಾದರಿಯ ಡಿಸ್‌ಪ್ಲೇ ಪ್ಯಾನೆಲ್ ಅನ್ನು ಒಳಗೊಂಡಿರಲಿದೆ. ಇದರೊಂದಿಗೆ ಡಿಸ್‌ಪ್ಲೇ ಸುತ್ತಲೂ ಕನಿಷ್ಠ ಬೆಜೆಲ್ ಹೊಂದಿದ್ದು, ನೋಡಲು ಬೆಜೆಲ್ ಲೆಸ್ ಲುಕ್‌ನಲ್ಲಿ ಕಾಣಿಸುವಂತಿದೆ ಎಂದು ಹೇಳಲಾಗಿದೆ.
ವಿವೋ X100 ಪ್ರೊ+ ಫೋನ್ ಪ್ರಮುಖ ಹೈಲೈಟ್ ಎಂದರೆ ಅದು ಕ್ಯಾಮೆರಾ ಸೆನ್ಸಾರ್ ಆಗಿದ್ದು, ಈ ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಅಂದಹಾಗೆ ಈ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ವಿವೋ X100 ಫೋನ್ ಸರಣಿಯನ್ನು ಅನಾವರಣಗೊಳಿಸುವ ನಿರೀಕ್ಷೆಯಿದೆ. ಆದರೆ ವಿವೋ X100 ಪ್ರೊ+ ಫೋನ್ 2024 ರ ಆರಂಭದಲ್ಲಿ ಬಿಡುಗಡೆ ಆಗಬಹು ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.
ವಿವೋ Y100 5G ಸ್ಮಾರ್ಟ್‌ಫೋನ್ ಫೀಚರ್ಸ್ : ಇತ್ತೀಚಿಗೆ ಬಿಡುಗಡೆ ಆಗಿರುವ ವಿವೋ Y100 5G ಸ್ಮಾರ್ಟ್‌ಫೋನ್ 6.38 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಇದು 90 Hz ರಿಫ್ರೆಶ್ ರೇಟ್ ಮತ್ತು 360 Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ HDR10+ ಪ್ರಮಾಣೀಕರಣವನ್ನು ಹೊಂದಿದ್ದು, 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ.ವಿವೋ Y100 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ವೇಗವನ್ನು ಹೊಂದಿದೆ.
ಇದು ಆಂಡ್ರಾಯ್ಡ್ 13 ಆಧಾರಿತ ಫನ್‌ಟಚ್ OS 13 ನಲ್ಲಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM + 128 GB ಇಂಟರ್ ಸ್ಟೋರೇಜ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ವಿಸ್ತರಿಸಬಹುದಾದ RAM ಫೀಚರ್ಸ್ ಅನ್ನು ಕೂಡ ಒಳಗೊಂಡಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ವಿವೋ Y100 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
Vivo x100 pro tipped to come with a 200mp camera details.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm