ಬ್ರೇಕಿಂಗ್ ನ್ಯೂಸ್
01-07-23 07:09 pm Source: Gizbot ಡಿಜಿಟಲ್ ಟೆಕ್
ರಿಯಲ್‌ಮಿ ಮೊಬೈಲ್ ಸಂಸ್ಥೆಯ ರಿಯಲ್‌ಮಿ GT 2 ಸ್ಮಾರ್ಟ್‌ಫೋನ್ ಈಗ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಖುಷಿ ಎನಿಸಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಒಳಗೊಂಡಿರುವ ಈ ಫೋನ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಈಗ ಭರ್ಜರಿ ಡಿಸ್ಕೌಂಟ್ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ.
ಹೌದು, ದೈತ್ಯ ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ರಿಯಲ್‌ಮಿ GT 2 ಸ್ಮಾರ್ಟ್‌ಫೋನ್ 12% ರಷ್ಟು ರಿಯಾಯಿತಿ ಪಡೆದಿದೆ. 8GB RAM + 128GB ಸ್ಟೋರೇಜ್ ವೇರಿಯಂಟ್ 39,999ರೂ. ಬೆಲೆಯನ್ನು ಹೊಂದಿದ್ದು, ಇದೀಗ 34,999ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇತರೆ ಆಯ್ದ ಬ್ಯಾಂಕ್‌ಗಳಿಂದಲೂ ಡಿಸ್ಕೌಂಟ್ ಲಭ್ಯವಾಗಲಿದೆ.
ಅಂದಹಾಗೆ ಈ ಸ್ಮಾರ್ಟ್‌ಫೋನ್ ತ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸಲ್ ಆಗಿದೆ. ಹಾಗೆಯೇ 5,000 mAh ಬ್ಯಾಟರಿ ಬ್ಯಾಕ್‌ಅಪ್ ಸಹ ಒಳಗೊಂಡಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ GT 2 ಫೋನಿನ ಫೀಚರ್ಸ್ : ರಿಯಲ್‌ಮಿ GT 2 ಮೊಬೈಲ್ 6.62 ಇಂಚಿನ ಫುಲ್ ಹೆಚ್‌ಡಿ ಪ್ಲಸ್ E4 AMOLED ಡಿಸ್‌ಪ್ಲೇ ಪಡೆದಿದೆ. ಈ ಡಿಸ್‌ಪ್ಲೇ 120 Hz ರೀಫ್ರೇಶ್ ರೇಟ್ ಹೊಂದಿದ್ದು, 1,300 nits ಬ್ರೈಟ್ನೆಸ್ ಪಡೆದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಸಪೋರ್ಟ್ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಇದು 12 GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಪಡೆದಿದೆ.
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX682 ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಪಡೆದಿದೆ. ಇದರ ಜೊತೆಗೆ 5000 mAh ಬ್ಯಾಟರಿ ಸಾಮರ್ಥ್ಯ ಪಡೆದಿದ್ದು, 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲಿಸಲಿದೆ.
ರಿಯಲ್‌ಮಿ GT 2 ಪ್ರೊ ಫೀಚರ್ಸ್ : ರಿಯಲ್‌ಮಿ GT 2 ಪ್ರೊ ಫೋನ್ 6.7 ಇಂಚಿನ 2K ಫುಲ್ ಹೆಚ್‌ಡಿ+ E4 AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರೀಫ್ರೇಶ್ ರೇಟ್ ಹೊಂದಿದ್ದು, 1,400 nits ಬ್ರೈಟ್ನೆಸ್ ಹೊಂದಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 1 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
ಈ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX682 ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5000mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಸಪೋರ್ಟ್ ಪಡೆದಿದೆ.
Realme GT 2 price drop on Flipkart check offer price and more.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm