ಬ್ರೇಕಿಂಗ್ ನ್ಯೂಸ್
04-07-23 08:00 pm Source: Gizbot ಡಿಜಿಟಲ್ ಟೆಕ್
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಭಾರಿ ನೀರಿಕ್ಷೆ ಹುಟ್ಟುಹಾಕಿದ್ದ ಮೊಟೊರೊಲಾ ರೇಜರ್ 40 ಸರಣಿ ಲಾಂಚ್ ಆಗಿದೆ. ಈ ಸರಣಿಯಲ್ಲಿ ಮೊಟೊರೊಲಾ ರೇಜರ್ 40 ಅಲ್ಟ್ರಾ ಮತ್ತು ಮೊಟೊರೊಲಾ ರೇಜರ್ 40 ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಿವೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ತಮ್ಮ ವಿಭಿನ್ನ ಫೀಚರ್ಸ್‌ಗಳಿಂದ ಸದ್ದು ಮಾಡ್ತಿವೆ.
ಹೌದು, ಮೊಟೊರೊಲಾ ರೇಜರ್ 40 ಅಲ್ಟ್ರಾ ಮತ್ತು ರೇಜರ್ 40 ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಬಿಡುಗಡೆಯಾಗಿದೆ. ಇದರಲ್ಲಿ ರೇಜರ್ 40 ಅಲ್ಟ್ರಾ ಸ್ಮಾರ್ಟ್‌ಫೋನ್ 3.6 ಇಂಚಿನ ಔಟರ್ ಡಿಸ್‌ಪ್ಲೇಯೊಂದಿಗೆ ಬರಲಿದೆ. ಆದರೆ ರೇಜರ್ 40 ಸ್ಮಾರ್ಟ್‌ಫೋನ್ 1.5 ಇಂಚಿನ ಔಟರ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಮೊಟೊರೊಲಾ ರೇಜರ್ 40 ಅಲ್ಟ್ರಾ ಫೀಚರ್ಸ್ ವಿವರ
ಮೊಟೊರೊಲಾ ರೇಜರ್ 40 ಅಲ್ಟ್ರಾ ಸ್ಮಾರ್ಟ್‌ಫೋನ್ 6.9 ಇಂಚಿನ ಫೋಲ್ಡೇಬಲ್ ಪೋಲ್ಇಡಿ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು 165Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, 1,200 ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 3.6-ಇಂಚಿನ pOLED ಔಟರ್ ಡಿಸ್‌ಪ್ಲೇ ಹೊಂದಿದೆ. ಇದು 1,056x1,066 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ.
ಮೊಟೊರೊಲಾ ರೇಜರ್ 40 ಅಲ್ಟ್ರಾ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 30W ವೈರ್ಡ್ ಮತ್ತು 8W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸುವ 3,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಮೊಟೊರೊಲಾ ರೇಜರ್ 40 ಫೀಚರ್ಸ್
ಮೊಟೊರೊಲಾ ರೇಜರ್ 40 ಸ್ಮಾರ್ಟ್‌ಫೋನ್ 6.9 ಇಂಚಿನ pOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು 144Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 1.5 ಇಂಚಿನ ಔಟರ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 7 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 30W ವೇಗದ ಚಾರ್ಜಿಂಗ್ ಬೆಂಬಲಿಸುವ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.
ಭಾರತದಲ್ಲಿ ಮೊಟೊರೊಲಾ ರೇಜರ್ 40 ಸರಣಿ ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಮೊಟೊರಲಾ ರೇಜರ್ 40 ಅಲ್ಟ್ರಾ ಸ್ಮಾರ್ಟ್‌ಫೋನ್ 8GB RAM + 256GB ಸ್ಟೋರೇಜ್ ಆಯ್ಕೆಗೆ 89,999ರೂ.ಬೆಲೆ ಹೊಂದಿದೆ. ಇದು ವಿವಾ ಮೆಜೆಂಟಾ ಮತ್ತು ಇನ್ಫೈನೈಟ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಅನ್ನು ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ ಖರೀದಿಸಿದರೆ 7,000ರೂ ತ್ವರಿತ ರಿಯಾಯಿತಿ ಸಿಗಲಿದೆ. ಇನ್ನು ಮೊಟೊರೊಲಾ ರೇಜರ್ 40 ಸ್ಮಾರ್ಟ್‌ಫೋನ್ ಭಾರತದಲ್ಲಿ 8GB RAM ಮತ್ತು 256GB ಸ್ಟೋರೇಜ್ ಆಯ್ಕೆಗೆ 59,999ರೂ.ಬೆಲೆ ಹೊಂದಿದೆ. ಸೇಜ್ ಗ್ರೀನ್, ಸಮ್ಮರ್ ಲಿಲಾಕ್ ಮತ್ತು ವೆನಿಲ್ಲಾ ಕ್ರೀಮ್ ಬಣ್ಣಗಳಲ್ಲಿ ಲಭ್ಯವಿದೆ. ಸ್ಮಾರ್ಟ್‌ಫೋನ್ ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ 5,000ರೂ. ತ್ವರಿತ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಅಮೆಜಾನ್ ಇಂಡಿಯಾ ಅಥವಾ ಅಧಿಕೃತ ಮೊಟೊರೊಲಾ ಇಂಡಿಯಾ ವೆಬ್‌ಸೈಟ್ ಮೂಲಕ ಖರೀದಿಸಬಹುದಾಗಿದೆ. ಇದು ಇದೇ ಜುಲೈ 14 ರಂದು ಭಾರತದಲ್ಲಿ ಮಾರಾಟವಾಗಲಿದೆ.
Motorola Razr 40 Series Phones Launched in India price and Specification Details.
14-03-25 03:39 pm
HK News Desk
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm