ಶಿಯೋಮಿ 13T ಸರಣಿ ಫೀಚರ್ಸ್‌ ಬಹಿರಂಗ! ಪ್ರೊಸೆಸರ್‌ ಯಾವುದು?

15-07-23 07:39 pm       Source: Gizbot Kannada   ಡಿಜಿಟಲ್ ಟೆಕ್

ಶಿಯೋಮಿ ಕಂಪೆನಿ ಹೊಸ ಶಿಯೋಮಿ 13T ಸರಣಿ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸರಣಿಯಲ್ಲಿ ಶಿಯೋಮಿ 13T ಮತ್ತು ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್‌ ಬರಲಿದೆ ಎಂದು ವರದಿಯಾಗಿದೆ.

ಶಿಯೋಮಿ ಕಂಪೆನಿ ಹೊಸ ಶಿಯೋಮಿ 13T ಸರಣಿ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸರಣಿಯಲ್ಲಿ ಶಿಯೋಮಿ 13T ಮತ್ತು ಶಿಯೋಮಿ 13T ಪ್ರೊ ಸ್ಮಾರ್ಟ್‌ಫೋನ್‌ ಬರಲಿದೆ ಎಂದು ವರದಿಯಾಗಿದೆ. ಇನ್ನು ಈ ಸರಣಿಯು ಡೈಮೆನ್ಸಿಟಿ 9200 ಪ್ಲಸ್ ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಹೌದು, ಶಿಯೋಮಿ 13T ಸರಣಿ ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಭಾರಿ ಕುತೂಹಲ ಕ್ರಿಯೆಟ್‌ ಮಾಡಿದೆ. ಇದಕ್ಕೆ ಇಂಬು ಕೊಡುವಂತೆ ಆನ್‌ಲೈನ್‌ನಲ್ಲಿ ಫೀಚರ್ಸ್‌ಗಳು ಬಹಿರಂಗವಾಗಿದೆ. ಇದರಲ್ಲಿ ಶಿಯೋಮಿ 13T ಸ್ಮಾರ್ಟ್‌ಫೋನ್‌ 6.7 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Xiaomi 13T Pro surfaces on IMDA ahead of launch - Gizmochina

ಶಿಯೋಮಿ 13T ಫೀಚರ್ಸ್‌ ಹೇಗಿದೆ?

ಶಿಯೋಮಿ 13T ಸ್ಮಾರ್ಟ್‌ಫೋನ್‌ 6.7 ಇಂಚಿನ ಪುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ, ಇದು 414 ppi ಪಿಕ್ಸೆಲ್‌ ಸಾಂದ್ರತೆಯನ್ನು ಪಡೆದುಕೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಶಿಯೋಮಿ 13T ಪ್ರೊಸೆಸರ್‌ ನಿರೀಕ್ಷೆ ಏನು?

ಶಿಯೋಮಿ 13T ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 9200 ಪ್ಲಸ್ ಅಥವಾ ಸ್ನಾಪ್‌ಡ್ರಾಗನ್ 7 ಪ್ಲಸ್ ಜನ್ 2 ಪ್ರೊಸೆಸರ್‌ ಹೊಂದಿರಬಹುದು ಎಂದು ಊಹಿಸಲಾಗಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿರಬಹುದು ಎಂದು ಹೇಳಲಾಗಿದೆ.

Xiaomi 13T und 13T Pro: Die spannendsten Gerüchte

ಶಿಯೋಮಿ 13T ಕ್ಯಾಮೆರಾ ನಿರೀಕ್ಷೆ?

ಶಿಯೋಮಿ 13T ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌ ಬಗ್ಗೆ ಅಧಿಕೃತ ವಿವರಗಳು ಬಹಿರಂಗವಾಗಿಲ್ಲ. ಆದರೆ ಒಂದು ಮೂಲದ ಪ್ರಕಾರ ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಕೂಡ ಹೊಂದಿರಬಹುದು ಎಂಬ ನಿರೀಕ್ಷೆಯಿದೆ.

ಶಿಯೋಮಿ 13T ಬ್ಯಾಟರಿ ಬ್ಯಾಕ್‌ಅಪ್‌ ಏನಿರಬಹುದು?

ಶಿಯೋಮಿ 13T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಮತ್ತು ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ.

Filtrado el precio de los Xiaomi 13T y 13T Pro y sus principales  características - Meristation

ಶಿಯೋಮಿ 13T ಬೆಲೆ ಮತ್ತು ಲಭ್ಯತೆ

ಶಿಯೋಮಿ 13T ಸ್ಮಾರ್ಟ್‌ಫೋನ್‌ ಬೆಲೆ £799 (ಅಂದಾಜು 85,850ರೂ)ಬೆಲೆಯಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸೆಪ್ಟೆಂಬರ್‌ 1ಕ್ಕೆ ಬಿಡುಗಡೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಇದು ಭಾರತದಲ್ಲಿ ಯಾವಾಗ ಬಿಡುಗಡೆ ಆಗುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಶಿಯೋಮಿ 13T FCC ಪ್ರಮಾಣೀಕರಣ

ಇನ್ನು ಈ ಸ್ಮಾರ್ಟ್‌ಫೋನ್‌ ಮಾದರಿ ಸಂಖ್ಯೆ 2306EPN60G, EEC ಪ್ರಮಾಣೀಕರಣವನ್ನು ಪಡೆದುಕೊಂಡಿದೆ. ಇದು IMEI ಡೇಟಾಬೇಸ್, ಸಿಂಗಾಪುರದ IMDA, TKDN ಪ್ರಮಾಣೀಕರಣ ಪ್ಲಾಟ್‌ಫಾರ್ಮ್‌ಗಳು ಮತ್ತು ಈಗ FCC ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಿಂದ ಪ್ರಮಾಣೀಕರಣವನ್ನು ಪಡೆದುಕೊಂಡಿದೆ ಎಂದು ಅಂದಾಜಿಸಲಾಗಿದೆ. ಇದು NFC, 5G, Wi-Fi 802.11ax, ಬ್ಲೂಟೂತ್ ಮತ್ತು GNSS ನಂತಹ ಕನೆಕ್ಟಿವಿಟಿ ಫೀಚರ್ಸ್‌ಗಳನ್ನು ನೀಡಲಿದೆ.

Xiaomi 13T Key Specs Revealed Details.