ಭಾರತಕ್ಕೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟ ರಿಯಲ್‌ಮಿ C53! ವಾವ್ಹ್‌ ಎನಿಸುವ ಫೀಚರ್ಸ್‌!

19-07-23 09:48 pm       Source: Gizbot   ಡಿಜಿಟಲ್ ಟೆಕ್

ಭಾರತದ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಮೂಲಕ ತನ್ನ C ಸರಣಿಯಲ್ಲಿ ಹೊಸ ಬಜೆಟ್‌ ಸ್ಮಾರ್ಟ್‌ಫೋನ್‌ ಅನಾವರಣಗೊಳಿಸಿದೆ.

ಭಾರತದ ಮಾರುಕಟ್ಟೆಯಲ್ಲಿ ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಮೂಲಕ ತನ್ನ C ಸರಣಿಯಲ್ಲಿ ಹೊಸ ಬಜೆಟ್‌ ಸ್ಮಾರ್ಟ್‌ಫೋನ್‌ ಅನಾವರಣಗೊಳಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌ ಪಡೆದುಕೊಂಡಿದೆ.

ಹೌದು, ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಭಾರತಕ್ಕೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ ಯುನಿಸೋಕ್‌ T612 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Realme C53 With 108-Megapixel Rear Camera, 5,000mAh Battery Launched in  India: Price, Specifications | Technology News

ರಿಯಲ್‌ಮಿ C53 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ:

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ 6.74 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1600 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಬೆಂಬಲಿಸಲಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಜೊತೆಗೆ ಡಿಸ್‌ಪ್ಲೇ 90.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಅಲ್ಲದೆ 560 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ.

Realme C53 with 108MP camera launched in India for just ₹9,999 - Gizmochina

ರಿಯಲ್‌ಮಿ C53 ಪ್ರೊಸೆಸರ್‌ ಯಾವುದು?:

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಯುನಿಸೋಕ್‌ T612 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ Realme UI T ಆವೃತ್ತಿಯನ್ನು ಬೆಂಬಲಿಸಲಿದೆ. ಹಾಗೆಯೇ 4GB RAM + 128GB ಮತ್ತು 6GB RAM + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಬರಲಿದೆ. ಇದಲ್ಲದೆ RAM ಅನ್ನು ವಾಸ್ತವಿಕವಾಗಿ 12GB ವರೆಗೆ ವಿಸ್ತರಿಸಬಹುದಾಗಿದೆ. ಜೊತೆಗೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

Realme C53 Specs: Realme C53 with 108MP main camera launched in India: Price,  specs and more - Times of India

ರಿಯಲ್‌ಮಿ C53 ಕ್ಯಾಮೆರಾ ಸೆಟ್‌ಅಪ್‌:

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾಗಳಿಗಾಗಿ ಹಿಂಭಾಗದಲ್ಲಿ ಮೂರು ಪ್ರತ್ಯೇಕ ವೃತ್ತಾಕಾರದ ದ್ವೀಪಗಳು ಮತ್ತು ಎಲ್ಇಡಿ ಫ್ಲ್ಯಾಷ್‌ಲೈಟ್ ಅನ್ನು ಹೊಂದಿದೆ.

Realme C53:ಬಹು ನಿರೀಕ್ಷಿತ ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!  ಹೇಗಿರಲಿದೆ ಡಿಸೈನ್‌!|Realme:ಬಹು ನಿರೀಕ್ಷಿತ ರಿಯಲ್‌ಮಿ C53 ಸ್ಮಾರ್ಟ್‌ಫೋನ್‌  ಫೀಚರ್ಸ್‌ ...

ರಿಯಲ್‌ಮಿ C53 ಬ್ಯಾಟರಿ ಮತ್ತು ಇತರೆ ಸೌಲಭ್ಯ:

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯ ಬ್ಯಾಟರಿಯನ್ನು ಒಳಗೊಂಡಿದೆ. ಇದು 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, GPS/AGPS, Wi-Fi, ಬ್ಲೂಟೂತ್ 5, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಮ್ಯಾಗ್ನೆಟಿಕ್ ಸೆನ್ಸರ್, ಲೈಟ್ ಸೆನ್ಸಾರ್, ಗೈರೊ ಮೀಟರ್ ಸೆನ್ಸಾರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

Realme C53 launched with 5000mAh battery and Dynamic Island

ರಿಯಲ್‌ಮಿ C53 ಬೆಲೆ ಮತ್ತು ಲಭ್ಯತೆ:

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಭಾರತದಲ್ಲಿ ತನ್ನ ಬೇಸ್ ಮಾಡೆಲ್‌ 4GB RAM + 128GB ಸ್ಟೋರೇಜ್ ಆಯ್ಕೆಗೆ 9,999ರೂ.ಬೆಲೆಯನ್ನು ಹೊಂದಿದೆ. ಇದರ 6GB RAM + 64GB ಸ್ಟೋರೇಜ್ ಆಯ್ಕೆಗೆ 10,999ರೂ.ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ ಚಾಂಪಿಯನ್ ಗೋಲ್ಡನ್ ಮತ್ತು ಚಾಂಪಿಯನ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದು ಇದೇ ಜುಲೈ 26 ರಂದು ರಿಯಲ್‌ಮಿ.ಕಾಮ್‌ ಮತ್ತು ಫ್ಲಿಪ್‌ಕಾರ್ಟ್‌ ಮೂಲಕ ಮಾರಾಟವಾಗಲಿದೆ.

Realme C53:ಬಹು ನಿರೀಕ್ಷಿತ ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!  ಹೇಗಿರಲಿದೆ ಡಿಸೈನ್‌!|Realme:ಬಹು ನಿರೀಕ್ಷಿತ ರಿಯಲ್‌ಮಿ C53 ಸ್ಮಾರ್ಟ್‌ಫೋನ್‌  ಫೀಚರ್ಸ್‌ ...

ಲಾಂಚ್‌ ಆಫರ್‌ ಏನಿದೆ?:

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಇಂದು ಸಂಜೆ 6:00 ರಿಂದ 8:00 ಗಂಟೆಯ ತನಕ ಅರ್ಲಿ ಬರ್ಡ್‌ ಸೇಲ್‌ ನಡೆಸುತ್ತಿದೆ. ಈ ಸೇಲ್‌ ಪ್ರಯುಕ್ತ ICICI, SBI ಮತ್ತು HDFC ಕ್ರೆಡಿಟ್ ಕಾರ್ಡ್‌ಗಳನ್ನು ಬಳಸಿಕೊಂಡು ಮೊಬೈಲ್‌ ಖರೀದಿಸುವ ಗ್ರಾಹಕರಿಗೆ 500ರೂ. ರಿಯಾಯಿತಿ ಸಿಗಲಿದೆ.

Realme c53 with 5000mah battery launched in India price and specifications details in Kannada.