ಬ್ರೇಕಿಂಗ್ ನ್ಯೂಸ್
22-07-23 09:10 pm Source: Gizbot Kannada ಡಿಜಿಟಲ್ ಟೆಕ್
ಟೆಕ್ ಮಾರುಕಟ್ಟೆಯಲ್ಲಿ ಹೊಸ ಆವೃತ್ತಿಯ ಸ್ಮಾರ್ಟ್‌ಫೋನ್‌ಗಳು ಲಗ್ಗೆ ಇಡುತ್ತಲೇ ಸಾಗಿವೆ. ಇನ್ನು ಮಾರುಕಟ್ಟೆಗೆ ಲಾಂಚ್ ಆಗುವ ಫೋನ್‌ಗಳಲ್ಲಿ ಅಗ್ಗದ ಬೆಲೆ ಹಾಗೂ ದುಬಾರಿ ಬೆಲೆಯ ಫೋನ್‌ಗಳು ಸಹ ಸೇರಿವೆ. ಹಾಗಂತ ಬಿಡುಗಡೆಗೆ ಆಗುವ ಎಲ್ಲ ಮೊಬೈಲ್‌ಗಳು ಗ್ರಾಹಕರನ್ನು ಆಕರ್ಷಿಸುವುದಿಲ್ಲ. ಕೆಲವೇ ಕೆಲವು ಮೊಬೈಲ್‌ಗಳು ಟ್ರೆಂಡಿಂಗ್‌ನಲ್ಲಿ ಉಳಿಯುತ್ತವೆ.
ಹೌದು, ಮಾರುಕಟ್ಟೆಯಲ್ಲಿ ಲಾಂಚ್ ಆದ ಕೆಲವು ಫೋನ್‌ಗಳು ಡಿಸೈನ್, ಫೀಚರ್ಸ್ ನಿಂದ ಆಕರ್ಷಕ ಎನಿಸಿದೆರೆ, ಮತ್ತೆ ಕೆಲವು ಫೋನ್‌ಗಳು ಬೆಲೆಯಿಂದಾಗಿ ಭಾರೀ ಗಮನ ಸೆಳೆಯುತ್ತವೆ. ಸದ್ಯ ದೇಶಿಯ ಮೊಬೈಲ್ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದು ಲೀಡಿಂಗ್ ನಲ್ಲಿ ಕಾಣಿಸಿಕೊಂಡಿರುವ ಕೆಲವು ಮೊಬೈಲ್ ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.
ನಥಿಂಗ್ ಫೋನ್ 2 : ನಥಿಂಗ್ ಫೋನ್ 2 ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LTPO OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಒಳಗೊಂಡಿದೆ. ಅಲ್ಲದೇ ಇದು ಕ್ವಾಲ್ಕಾಮ್ 4nm ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಆಧಾರಿತ ನಥಿಂಗ್ ಓಎಸ್ 2.0 ಸಪೋರ್ಟ್ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಜೊತೆಗೆ 512GB ಸ್ಟೋರೇಜ್ ಆಯ್ಕೆ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ : ಸ್ಯಾಮ್‌ಸಂಗ್‌ನ ಈ ಫೋನ್ QHD+ ಡೈಮಂಡ್ ಅಮೋಲೆಡ್ ಜೊತೆಗೆ 6.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಅನ್ನು ಒಳಗೊಂಡಿದೆ. ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿದೆ. ಈ ಮೊಬೈಲ್ ಬ್ಯಾಟರಿಯು 5,000mAh ಸಾಮರ್ಥ್ಯದಲ್ಲಿ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 5G : ಈ ಮೊಬೈಲ್ 6.4 ಇಂಚಿನ ಅಮೋಲೆಡ್ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಪಡೆದಿದೆ. ಈ ಫೋನ್ ಎಕ್ಸಿನೋಸ್ 1380SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 13 ಆಧಾರಿತ ಒನ್ UI 5.1 ರನ್ ನಲ್ಲಿ ಕೆಲಸ ಮಾಡಲಿದೆ. ಈ ಫೋನ್ ಮೂರು ರಿಯರ್ ಕ್ಯಾಮೆರಾ ಆಯ್ಕೆ ಹೊಂದಿದ್ದು, ಇದರಲ್ಲಿ 50ಎಂಪಿ ಪ್ರಾಥಮಿಕ ಕ್ಯಾಮೆರಾ, 12ಎಂಪಿ ಅಲ್ಟ್ರಾ ವೈಡ್ ಲೆನ್ಸ್ ಆಯ್ಕೆ ಹೊಂದಿದೆ. ಈ ಮೊಬೈಲ್ 5,000mAh ಬ್ಯಾಟರಿ ಪಡೆದಿದೆ.
ರೆಡ್ಮಿ ನೋಟ್ 12 ಪ್ರೊ 5G : ಈ ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1080SoC ಪ್ರೊಸೆಸರ್ ಪಡೆದಿದೆ. ಹಾಗೆಯೇ 12GB RAM ಮತ್ತು 256GB ಆಂತರೀಕ ಸ್ಟೋರೇಜ್ ಪಡೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್ ಆಗಿದ್ದು, 5,000mAh ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, ಜೊತೆಗೆ 67W ವೇಗದ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ.
ಐಫೋನ್ 14 ಪ್ರೊ ಮ್ಯಾಕ್ಸ್ ಮೊಬೈಲ್ : ಆಪಲ್ ಸಂಸ್ಥೆಯ ಈ ಐಫೋನ್ 6.7 ಇಂಚಿನ ರೆಟಿನಾ XDR ಡಿಸ್‌ಪ್ಲೇ ಪಡೆದಿದ್ದು, ಇದು ಸಹ ಆಲ್ವೇಸ್ ಆನ್ ಕಾರ್ಯವನ್ನು ಒಳಗೊಂಡಿದೆ. ಹಾಗೆಯೇ ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯು 48 ಮೆಗಾ ಪಿಕ್ಸೆಲ್ ಕ್ವಾಡ್ ಪಿಕ್ಸೆಲ್ ಕ್ಯಾಮೆರಾವನ್ನು 65 ಪ್ರತಿಶತ ದೊಡ್ಡ ಸೆನ್ಸಾರ್ ಅನ್ನು ಸಹ ಪಡೆದಿದೆ. ಇದರೊಂದಿಗೆ ಈ ಐಫೋನ್ A16 ಬಯೋನಿಕ್ ಚಿಪ್ ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದೆ.
Few best trending smartphones of july 2023 here is the list.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm