ಬ್ರೇಕಿಂಗ್ ನ್ಯೂಸ್
25-07-23 10:30 pm Source: Gizbot Kannada ಡಿಜಿಟಲ್ ಟೆಕ್
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಸಂಸ್ಥೆಯು ಭಾರತದಲ್ಲಿ ಹೊಸ ಗ್ಯಾಲಕ್ಸಿ F34 5G ಮೊಬೈಲ್ ಲಾಂಚ್ ಮಾಡಲು ಸಕಲ ರೀತಿ ಸಿದ್ಧತೆ ನಡೆಸಿದೆ. ಈಗಾಗಲೇ ಗ್ಯಾಲಕ್ಸಿ M ಮತ್ತು A ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ಸಂಸ್ಥೆಯು ಇದೀಗ F ಸರಣಿಯಲ್ಲಿ ಗ್ಯಾಲಕ್ಸಿ F34 5G ಫೋನ್ ಲಾಂಚ್‌ಗೆ ಮುನ್ನುಡಿ ಬರೆದಿದೆ.
ಸ್ಯಾಮ್‌ಸಂಗ್ ಸಂಸ್ಥೆಯು ಸದ್ಯದಲ್ಲೇ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಲಿದ್ದು, ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಮೂಲಕ ಖರೀದಿಗೆ ಲಭ್ಯ ಆಗಲಿದೆ. ಈ ಫೋನ್ 6,000mAh ಬ್ಯಾಟರಿ ಬ್ಯಾಕ್‌ಅಪ್ ಹೊಂದಿರಲಿದ್ದು, ಎರಡು ದಿನ ಜಬರ್ದಸ್ತ್ ಬ್ಯಾಕ್‌ಅಪ್ ಒದಗಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ ಇದು ಅತ್ಯುತ್ತಮ ಫೋಟೋಗ್ರಫಿಗಾಗಿ OIS ಸೌಲಭ್ಯ ಅನ್ನು ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ ಡಿಸ್‌ಪ್ಲೇಯು 120Hz ಡಿಸ್‌ಪ್ಲೇ ರಿಫ್ರೆಶ್ ರೇಟ್ ಅನ್ನು ಪಡೆದಿರಲಿದೆ. ಅಲ್ಲದೇ ಈ ಮೊಬೈಲ್ ಗ್ರಾಹಕರಿಗೆ ಬ್ಲ್ಯಾಕ್ ಹಾಗೂ ಗ್ರೀನ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಡಿಸ್‌ಪ್ಲೇ ರಚನೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ sAMOLED ಮಾದರಿಯ ಯಲ್ಲಿ ಇರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಲಿದೆ ಎಂದು ಹೇಳಲಾಗಿದ್ದು, ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದಿರಲಿದೆ. ಇನ್ನು ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ವಿನ್ಯಾಸ ಪಡೆದಿರಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಪ್ರೊಸೆಸರ್ ಯಾವುದು : ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ ಸ್ಯಾಮ್‌ಸಂಗ್ ಎಕ್ಸಿನೋಸ್ 1280 SoC ಪ್ರೊಸೆಸರ್ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ 6GB + 128GB ಆಂತರೀಕ ಸ್ಟೋರೇಜ್ ಮಾದರಿಯ ಆಯ್ಕೆಯಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಇರಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಕ್ಯಾಮೆರಾ ರಚನೆ ಹೇಗೆ : ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ ತ್ರಿವಳಿ ರಿಯರ್ ಕ್ಯಾಮೆರಾ ರಚನೆಯೊಂದಿಗೆ ಬರಬಹುದು. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಧ್ಯತೆ ಬಹುತೇಕ ಖಚಿತ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಬ್ಯಾಟರಿ ಮತ್ತು ಇತರೆ ಸೌಲಭ್ಯ : ಸ್ಯಾಮ್‌ಸಂಗ್ ಗ್ಯಾಲಕ್ಸಿ F34 5G ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಇರಲಿದ್ದು, ಇದಕ್ಕೆ ಪೂರಕವಾಗಿ 25W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಟೈಪ್ ಸಿ ಪೊರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಫೀಚರ್ಸ್:
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಅಮೊಲೆಡ್ ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಪಡೆದುಕೊಂಡಿದೆ, ಡಿಸ್‌ಪ್ಲೇಯು ಪಂಚ್ ಹೋಲ್ ಕಟ್‌ಔಟ್ ಮಾದರಿಯಲ್ಲಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಪಡೆದಿದೆ.
ಅಲ್ಲದೇ ಈ ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಮೊಬೈಲ್ ಆಕ್ಟಾ-ಕೋರ್ Exynos 1280 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಜೊತೆಗೆ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಬೆಂಬಲವನ್ನು ಪಡೆದಿದೆ. ಹಾಗೆಯೇ ಈ ಮೊಬೈಲ್ ಫೋನ್ 6GB + 128GB ಮತ್ತು 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಗಳಲ್ಲಿ ಗ್ರಾಹಕರಿಗೆ ಲಭ್ಯ ಆಗಲಿದೆ.
samsung galaxy f34 5g with 6000mah battery launching in india soon all details here.
29-03-25 09:19 pm
HK News Desk
Mysuru three drowned, Lake, Ugadi: ಮೈಸೂರು ; ಹ...
29-03-25 03:13 pm
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
30-03-25 11:02 pm
Mangaluru HK Staff
Mangalore, Ullal Netravati Bridge Repair, Tra...
30-03-25 03:07 pm
Kumapla, Mangalore, Crime: ಲಕೋಟೆಯಲ್ಲಿ ಸಂಸ್ಕರಿ...
30-03-25 02:39 pm
Mangalore CM Medal, Anupam Agrawal, Police Ma...
29-03-25 11:04 pm
MLC Ivan D'Souza, Mangalore: 7ನೇ ವೇತನ ಆಯೋಗ ;...
29-03-25 10:07 pm
30-03-25 08:59 am
Mangaluru Correspondent
ಆಂಧ್ರದಲ್ಲಿ ಪ್ಯಾಸ್ಟರ್ ಪ್ರವೀಣ್ ಕುಮಾರ್ ಸಂಶಯಾಸ್ಪದ...
29-03-25 10:33 pm
Bajrang Dal, Arrest, Cow Transport, Mangalore...
29-03-25 04:02 pm
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm