ರೆಡ್ಮಿಯಿಂದ 24GB RAM ಸಾಮರ್ಥ್ಯದ ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ; ಕ್ಯಾಮೆರಾ ಹೇಗಿದೆ?

15-08-23 07:31 pm       Source: Gizbot Kannada   ಡಿಜಿಟಲ್ ಟೆಕ್

ಮೊಬೈಲ್‌ ಮಾರುಕಟ್ಟೆಯಲ್ಲಿ ರೆಡ್ಮಿ ಬ್ರ್ಯಾಂಡ್‌ನ ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ವಿಭಿನ್ನ ಡಿಸೈನ್‌ ಹಾಗೂ ನವೀನ ಮಾದರಿಯ ವಿನ್ಯಾಸಕ್ಕೆ ರೆಡ್ಮಿ ಸ್ಮಾರ್ಟ್‌ಫೋನ್‌ಗಳು ಪ್ರಸಿದ್ಧಿ ಪಡೆದುಕೊಂಡಿವೆ.

ಮೊಬೈಲ್‌ ಮಾರುಕಟ್ಟೆಯಲ್ಲಿ ರೆಡ್ಮಿ ಬ್ರ್ಯಾಂಡ್‌ನ ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ವಿಭಿನ್ನ ಡಿಸೈನ್‌ ಹಾಗೂ ನವೀನ ಮಾದರಿಯ ವಿನ್ಯಾಸಕ್ಕೆ ರೆಡ್ಮಿ ಸ್ಮಾರ್ಟ್‌ಫೋನ್‌ಗಳು ಪ್ರಸಿದ್ಧಿ ಪಡೆದುಕೊಂಡಿವೆ. ಅದರ ಮುಂದುವರೆದ ಭಾಗವಾಗಿ ಇದೀಗ ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾದೊಂದಿಗೆ ಬರಲಿದೆ.

ಹೌದು, ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿ೯ದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 9200+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 120W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Redmi K60 Ultra with 6.67″ 144Hz 1.5K OLED display, Dimensity 9200+, up to  24GB RAM, IP68 ratings announced

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ರಚನೆ

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2272 x 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದೆ.

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9200+ SoC ಪ್ರೊಸೆಸರ್‌ ವೇಗದೊಂದಿಗೆ ಬರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 24GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಸಹ ಲಭ್ಯವಾಗಲಿದೆ. ಜೊತೆಗೆ ಈ ಡಿವೈಸ್‌ ವೈಲ್ಡ್‌ಬೂಸ್ಟ್ 2.0 ಟೆಕ್ನಾಲಜಿಯೊಂದಿಗೆ ಬರಲಿದ್ದು, ಸ್ಮಾರ್ಟ್‌ಫೋನ್ ಅನ್ನು 3 ಡಿಗ್ರಿ ಸೆಲ್ಸಿಯಸ್‌ನಿಂದ ತಂಪಾಗಿರಿಸುತ್ತದೆ ಎಂದು ಹೇಳಲಾಗಿದೆ.

Redmi K60 Ultra Price: Powerful Phone With Dimensity 9200+, Up To 24GB RAM,  1TB Storage Announced | Will It Launch In India?

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ IMX800 ಸೋನಿ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಲೆನ್ಸ್‌ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಬ್ಯಾಟರಿ ಮತ್ತು ಇತರೆ

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 120W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈಫೈ, ಬ್ಲೂಟೂತ್ 5.3 ಮತ್ತು USB ಟೈಪ್-ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ನಲ್ಲಿ ಹೆಡ್‌ಫೋನ್‌ ಜ್ಯಾಕ್‌ಗೆ ಅವಕಾಶ ನೀಡಿಲ್ಲ ಅನ್ನೋದು ಗಮನಿಸಬೇಕಾದ ವಿಚಾರವಾಗಿದೆ.

Redmi K60 Ultra Goes Official With 24 GB RAM

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ

ರೆಡ್ಮಿ K60 ಅಲ್ಟ್ರಾ ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ ಚೀನಾದಲ್ಲಿ 12GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ CNY 2,599 (ಅಂದಾಜು 30,000ರೂ)ಬೆಲೆಯನ್ನು ಪಡೆದುಕೊಂಡಿದೆ. ಇದಲ್ಲದೆ ಈ ಫೋನ್‌ನ 16GB RAM + 256GB ಸ್ಟೋರೇಜ್ ಮಾದರಿಯ ಆಯ್ಕೆಯ ಬೆಲೆ CNY 2,799 (ಸುಮಾರು 32,000ರೂ)ಆಗಿದೆ. ಇನ್ನು ಇದರ ಟಾಪ್‌ ವೇರಿಯೆಂಟ್‌ 24GB RAM + 1TB ಸ್ಟೋರೇಜ್ ಮಾದರಿಯ ಬೆಲೆ CNY 3,599 (ಸುಮಾರು 41,200ರೂ)ಆಗಿದೆ. ಈ ಸ್ಮಾರ್ಟ್‌ಫೋನ್‌ ಭಾರತಕ್ಕೆ ಬರುವ ವಿಚಾರದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Redmi K60 Ultra with 6 67 Inch Display Launched Details.