ಬಿಡುಗಡೆಗೆ ಸಿದ್ಧವಾಗಿದೆ ಟೆಕ್ನೋ ಸ್ಪಾರ್ಕ್‌20 ಫೋನ್‌; ಏನೆಲ್ಲಾ ನಿರೀಕ್ಷೆ?

16-08-23 08:43 pm       Source: Gizbot Kannada   ಡಿಜಿಟಲ್ ಟೆಕ್

ಟೆಕ್ನೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನಸೆಳೆದಿದೆ. ಇದೀಗ ತನ್ನ ಹೊಸ ಟೆಕ್ನೋ ಸ್ಪಾರ್ಕ್‌ 20 ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ.

ಟೆಕ್ನೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗಮನಸೆಳೆದಿದೆ. ಇದೀಗ ತನ್ನ ಹೊಸ ಟೆಕ್ನೋ ಸ್ಪಾರ್ಕ್‌ 20 ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ಅಂದಾಜಿಸಲಾಗಿದೆ. ಇದು ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಬರಲಿದೆ.

ಹೌದು, ಟೆಕ್ನೋ ಸ್ಪಾರ್ಕ್‌20 ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ಲಾಂಚ್‌ ಆಗಲಿದೆ. ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬರಲಿದೆ ಎನ್ನಲಾಗಿದೆ. ಇದು ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Tecno Spark 20 Launch Details & Timeline Leak, All Details | Cashify News

ಟೆಕ್ನೋ ಸ್ಪಾರ್ಕ್ 20 ಡಿಸ್‌ಪ್ಲೇ ರಚನೆ

ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720×1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿರಲಿದೆ. ಇನ್ನು ಡಿಸ್‌ಪ್ಲೇ ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದ್ದು, ಪಂಚ್‌ ಹೋಲ್‌ ಡಿಸ್‌ಪ್ಲೇ ವಿನ್ಯಾಸದಲ್ಲಿ ಬರಲಿದೆ.

ಟೆಕ್ನೋ ಸ್ಪಾರ್ಕ್ 20 ಪ್ರೊಸೆಸರ್‌ ಸಾಮರ್ಥ್ಯ

ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ನೊಂದಿಗೆ ಬರಲಿದೆ. ಇದು ಆಂಡ್ರಾಯ್ಡ್ 13 ನಲ್ಲಿ HIOS 13 ಜೊತೆಗೆ ರನ್ ಆಗಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ವರ್ಚುವಲ್ RAM ಫೀಚರ್ಸ್‌ ಮೂಲಕ 8GB ವರೆಗೆ ವಿಸ್ತರಿಸಬಹುದು ಎಂದು ನಿರೀಕ್ಷಿಸಲಾಗಿದೆ.

TECNO Spark 10 Series arrives in the Philippines » YugaTech

ಟೆಕ್ನೋ ಸ್ಪಾರ್ಕ್ 20 ಕ್ಯಾಮೆರಾ ಸೆಟ್‌ಅಪ್‌

ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು AI ಲೆನ್ಸ್ ಅನ್ನು ಒಳಗೊಂಡಿರುತ್ತದೆ ಎಂದು ವರದಿಯಾಗಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಟೆಕ್ನೋ ಸ್ಪಾರ್ಕ್ 20 ಬ್ಯಾಟರಿ ಮತ್ತು ಇತರೆ

ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇದು 18W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಬ್ಲೂಟೂತ್, Wi-Fi, GPS ಒಳಗೊಂಡಂತೆ ಹಲವು ಸಂಪರ್ಕ ಆಯ್ಕೆಗಳನ್ನು ಹೊಂದಿರುವ ಸಾಧ್ಯತೆಯಿದೆ.

ಟೆಕ್ನೋ ಸ್ಪಾರ್ಕ್ 20 ಬೆಲೆ ಮತ್ತು ಲಭ್ಯತೆ

ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಜೊತೆಗೆ ಇದರ ಲಾಂಚ್‌ ಟೈಮ್‌ಲೈನ್‌ ಕೂಡ ಸದ್ಯದಲ್ಲೇ ಬಹಿರಂಗವಾಗುವ ನಿರೀಕ್ಷೆಯಿದೆ. ಇನ್ನು ಇತ್ತೀಚಿಗೆ ಟೆಕ್ನೋ ಕಂಪೆನಿ ತನ್ನ ಟೆಕ್ನೋ ಕ್ಯಾಮನ್‌ 20 ಪ್ರೀಮಿಯರ್ 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಪರಿಚಯಿಸಿತ್ತು. ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ.

ಇದು ಮೀಡಿಯಾ ಟೆಕ್‌ ಡೈಮೆನ್ಸಿಟಿ 8050SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಒಳಗೊಂಡಿದೆ. ಹಾಗೆಯೇ 8GB RAM ಮತ್ತು 512GB ಆಂತರೀಕ ಸ್ಟೋರೇಜ್‌ ಪಡೆದಿದೆ. ಇದಲ್ಲದೆ 8GB ವರ್ಚುವಲ್ RAM ಅನ್ನು ಕೂಡ ಒಳಗೊಂಡಿದೆ.

Tecno Spark 20 Smartphone India Launch Timeline Tipped.