ಬ್ರೇಕಿಂಗ್ ನ್ಯೂಸ್
23-08-23 07:39 pm Source: Gizbot Kannada ಡಿಜಿಟಲ್ ಟೆಕ್
ಭಾರೀ ನಿರೀಕ್ಷೆ ಹುಟ್ಟುಹಾಕಿದ್ದ ರಿಯಲ್‌ಮಿ 11 ಸರಣಿ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಮೂಲಕ ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದೆ. ಇನ್ನು ರಿಯಲ್‌ಮಿ 11 ಸರಣಿಯಲ್ಲಿ ರಿಯಲ್‌ಮಿ 11 5G ಮತ್ತು ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿದೆ. ಈ ಎರಡು ಫೋನ್‌ಗಳು ಅತ್ಯಾಕರ್ಷಕ ಫೀಚರ್ಸ್ ಒಳಗೊಂಡಿವೆ.
ಹೌದು, ಭಾರತದಲ್ಲಿ ರಿಯಲ್‌ಮಿ 11 5G ಮತ್ತು ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಿವೆ. ಈ ಸ್ಮಾರ್ಟ್‌ಫೋನ್‌ಗಳು ಮೀಡಿಯಾಟೆಕ್ 6100+ 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ. ಜೊತೆಗೆ ವರ್ಚುವಲ್ RAM ವಿಸ್ತರಣೆಯನ್ನು 16GB ವರೆಗೆ ಬೆಂಬಲಿಸಲಿವೆ. ಇನ್ನುಳಿದಂತೆ ಈ ಎರಡೂ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ರಿಯಲ್‌ಮಿ 11 5G ಫೀಚರ್ಸ್ ಹೇಗಿದೆ?
ರಿಯಲ್‌ಮಿ 11 5G ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ವರ್ಚುವಲ್ RAM ವಿಸ್ತರಣೆಯನ್ನು 16GB ವರೆಗೆ ಬೆಂಬಲಿಸುತ್ತದೆ ಎಂದು ರಿಯಲ್‌ಮಿ ಕಂಪೆನಿ ಹೇಳಿದೆ.
ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಮೇನ್ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್ ಪಡೆದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಕ್ಯಾಮೆರಾವನ್ನು ಕಾಣಬಹುದಾಗಿದೆ. ಇದು 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇದಲ್ಲದೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 67W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರಿಯಲ್‌ಮಿ 11X 5G ಫೀಚರ್ಸ್ ಹೇಗಿದೆ?
ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್ ಸಹ 6.72 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ 5G ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 6GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಇದರ ಮುಖ್ಯ ಕ್ಯಾಮೆರಾ 64MP ಸೆನ್ಸಾರ್, ಎರಡನೇ ಕ್ಯಾಮೆರಾ 2MP ಪೋರ್ಟ್ರೇಟ್ ಲೆನ್ಸ್ ಪಡೆದುಕೊಂಡಿದೆ. ಜೊತೆಗೆ 8MP ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದರೊಂದಿಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರಿಯಲ್‌ಮಿ 11 ಸರಣಿ ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ 11 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB + 128GB ರೂಪಾಂತರದ ಆಯ್ಕೆಗೆ 18,999ರೂ ಬೆಲೆ ಹೊಂದಿದೆ. ಇದರ 8GB + 256GB ರೂಪಾಂತರದ ಆಯ್ಕೆಯು 19,999ರೂ ಬೆಲೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ Glory Gold ಮತ್ತು Glory Black ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
ಇನ್ನು ರಿಯಲ್‌ಮಿ 11X 5G ಸ್ಮಾರ್ಟ್‌ಫೋನ್ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯು 14,999ರೂ. ಬೆಲೆ ಹೊಂದಿದೆ. ಇದರ 6GB RAM ಮತ್ತು 256GB ಸ್ಟೋರೇಜ್ ಹೊಂದಿರುವ ಟಾಪ್-ಎಂಡ್ ರೂಪಾಂತರದ ಆಯ್ಕೆಯು 15,999ರೂ. ಬೆಲೆಯನ್ನು ಪಡೆದುಕೊಂಡಿದೆ.
ಇನ್ನು ಸ್ಮಾರ್ಟ್‌ಫೋನ್ ಅನ್ನು ಫ್ಲಿಪ್‌ಕಾರ್ಟ್, ರಿಯಲ್‌ಮಿಯ ಇಸ್ಟೋರ್ ಮತ್ತು ಪ್ರಮುಖ ಚಿಲ್ಲರೆ ಅಂಗಡಿಗಳ ಮೂಲಕ ಮಾರಾಟ ಮಾಡಲಾಗುತ್ತದೆ. ಗ್ರಾಹಕರು ಎಸ್‌ಬಿಐ ಮತ್ತು ಎಚ್‌ಡಿಎಫ್‌ಸಿ ಕಾರ್ಡ್‌ಗಳನ್ನು ಬಳಸಿಕೊಂಡು 1,500ರೂ ತ್ವರಿತ ರಿಯಾಯಿತಿಯನ್ನು ಸಹ ಪಡೆದುಕೊಳ್ಳಬಹುದಾಗಿದೆ.
Realme11 5G and Realme11x 5G Launched in India Price and Specifications Details.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm