ಜಿಯೋ, ಏರ್‌ಟೆಲ್‌, ವೊಡಾಫೋನ್ 599ರೂ. ಪ್ಲ್ಯಾನ್: ರೀಚಾರ್ಜ್‌ಗೆ ಯಾವುದು ಬೆಸ್ಟ್‌?

06-12-20 11:51 am       Manthesh: Gizbot Kannada   ಡಿಜಿಟಲ್ ಟೆಕ್

ದೇಶದಲ್ಲಿ ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ.

ದೇಶದಲ್ಲಿ ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಸಂಸ್ಥೆಗಳು ತಮ್ಮ ಚಂದಾದಾರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತಾ ಸಾಗಿವೆ. ಅವುಗಳಲ್ಲಿ ಪ್ರೀಪೇಯ್ಡ್‌ ಯೋಜನೆಗಳು ಹಾಗೂ ಪೋಸ್ಟ್‌ಪೇಯ್ಡ್‌ ಯೋಜನೆಗಳು ಸೇರಿವೆ. ಆದರೆ ಗ್ರಾಹಕ ಸ್ನೇಹಿ ಬೆಲೆಯಲ್ಲಿ ಕೆಲವು ಪ್ರೀಪೇಯ್ಡ್‌ ಯೋಜನೆಗಳು ಅಧಿಕ ಪ್ರಯೋಜನಗಳೊಂದಿಗೆ ಗಮನ ಸೆಳೆದಿವೆ. ಆ ಪೈಕಿ ಬಹುತೇಕ ಬಳಕೆದಾರರು 599ರೂ. ಬೆಲೆಯ ಪ್ಲ್ಯಾನ್‌ ರೀಚಾರ್ಜ್‌ಗೆ ಮುಂದಾಗುತ್ತಾರೆ.

ಹೌದು, ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಸಂಸ್ಥೆಗಳು 599ರೂ. ಬೆಲೆಯ ಪ್ರೀಪೇಯ್ಡ್‌ ಪ್ಲ್ಯಾನ್‌ ಆಯ್ಕೆ ಹೊಂದಿವೆ. ಈ ಮೂರು ಟೆಲಿಕಾಂಗಳ ಈ ಮೊತ್ತದ ರೀಚಾರ್ಜ್‌ ಪ್ಲ್ಯಾನಿನಲ್ಲಿ ಅಧಿಕ ಡೈಲಿ ಡೇಟಾ, ಬಿಗ್ ವ್ಯಾಲಿಡಿಟಿ, ಅನಿಯಮಿತ ಉಚಿತ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಪ್ರಯೋಜನಗಳು ಸೇರಿವೆ. ಹಾಗೆಯೇ ಹೆಚ್ಚುವರಿಯಾಗಿ ಓಟಿಟಿ ಸೌಲಭ್ಯಗಳು ಸಿಗಲಿವೆ. ಆದರೂ ಕೆಲವು ಭಿನ್ನತೆಗಳು ಕಾಣಬಹುದಾಗಿದೆ. ಹಾಗಾದರೇ ಜಿಯೋ, ಏರ್‌ಟೆಲ್‌ ಮತ್ತು ವೊಡಾಫೋನ್ 599ರೂ. ಪ್ಲ್ಯಾನಿನಲ್ಲಿ ಯಾವುದು ಯೋಗ್ಯ? ಒಟ್ಟಾರೇ ಪ್ರಯೋಜನಗಳೆನು ಮುಂದೆ ನೋಡೋಣ ಬನ್ನಿರಿ.

ಜಿಯೋ 599ರೂ. ಪ್ಲ್ಯಾನ್:

ಜಿಯೋ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ.

ಏರ್‌ಟೆಲ್-599ರೂ. ಪ್ಲ್ಯಾನ್‌:

ಏರ್‌ಟೆಲ್‌ನ 599ರೂ. ಪ್ರೀಪೇಡ್‌ ಪ್ಲ್ಯಾನ್‌ ಸಹ ದೀರ್ಘಾವಧಿಯ ವ್ಯಾಲಿಡಿಟಿ ಪಡೆದಿದೆ. ಈ ಪ್ಲ್ಯಾನಿನಲ್ಲಿ ಒಟ್ಟು 56 ದಿನಗಳ ವ್ಯಾಲಿಡಿಟಿ ಲಭ್ಯವಾಗಲಿದ್ದು, ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್‌ ಕರೆಯ ಸೌಲಭ್ಯ ಹಾಗೂ ಹೆಚ್ಚುವರಿಯಾಗಿ ಡಿಸ್ನಿ ಹಾಟ್‌ಸ್ಟಾರ್ ಚಂದಾದಾರಿಕೆ ಪ್ರಯೋಜನ ಸಹ ಲಭ್ಯವಾಗಲಿದೆ.



ವೊಡಾಫೋನ್-ಐಡಿಯಾ (ವಿ) 599ರೂ.ಪ್ಲ್ಯಾನ್ :

ವೊಡಾಫೋನಿನ 599ರೂ. ಪ್ಲ್ಯಾನ್ ದೀರ್ಘಾವಧಿಯ ಪ್ಲ್ಯಾನ್‌ ಆಗಿದ್ದು, ಒಟ್ಟು 84 ದಿನಗಳ ವ್ಯಾಲಿಡಿಟಿ ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಉಚಿತ ಕರೆಗಳ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 1.5GB ಡೇಟಾ ಮತ್ತು ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ಗಳ ಪ್ರಯೋಜನ ದೊರೆಯಲಿದೆ. ಇದರೊಂದಿಗೆ ವಾಯಿಸ್‌ ಕರೆಯ ಸೌಲಭ್ಯ ಸಿಗಲಿದೆ.

This News Article is a Copy of GIZBOT