ಬ್ರೇಕಿಂಗ್ ನ್ಯೂಸ್
19-12-20 05:23 pm Source: GIZBOT Mutthuraju H M ಡಿಜಿಟಲ್ ಟೆಕ್
ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ಬ್ರಾಂಡ್‌ಗಳು ಕೂಡ ತಮ್ಮ ಗ್ರಾಹಕರಿಗೆ ವಿಶೇಷ ರಿಯಾಯಿತಿ ಸೇಲ್ ಅನ್ನು ಆಯೋಜಿಸುತ್ತಿವೆ. ತಮ್ಮ ಸೇಲ್‌ಗಳಲ್ಲಿ ಸ್ಮಾರ್ಟ್‌ಫೋನ್ ಸೇರಿದಂತೆ ಹಲವು ಪ್ರಾಡಕ್ಟ್‌ಗಳ ಮೇಲೆ ಭರ್ಜರಿ ಆಫರ್‌ಗಳನ್ನ ನೀಡುತ್ತಿವೆ. ಸದ್ಯ ಇದೀಗ ರಿಯಲ್‌ಮಿ ಡೇಸ್ ಸೇಲ್ ಅನ್ನು ಆಯೋಜಿಸಿದ್ದು, ಈ ಸೇಲ್‌ನಲ್ಲಿ ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ರಿಯಾಯಿತಿಯನ್ನು ನೀಡುತ್ತಿದೆ.
ಹೌದು, ರಿಯಲ್‌ಮಿ ಕಂಪೆನಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ಡೇಸ್ ಸೇಲ್ ಅನ್ನು ಆಯೋಜಿಸಿದೆ. ಸಾಮಾನ್ಯವಾಗಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳೊಂದಿಗೆ ತಮ್ಮ ಸಾಧನಗಳು ಮತ್ತು ಪರಿಕರಗಳನ್ನು ವಿಶೇಷ ರಿಯಾಯಿತಿಗಳನ್ನು ಸ್ಮಾರ್ಟ್‌ಫೋನ್ ಬ್ರಾಂಡ್‌ಗಳು ನೀಡುತ್ತವೆ. ಆದಾಗ್ಯೂ, ಹೆಚ್ಚಿನ ಕಂಪನಿಗಳು ಗ್ರಾಹಕರ ಮೂಲವನ್ನು ಆಕರ್ಷಿಸಲು ತಮ್ಮ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಇಂತಹ ಮಾರಾಟಗಳನ್ನು ನೀಡಲು ಪ್ರಾರಂಭಿಸಿವೆ.

ರಿಯಲ್‌ಮಿ C15
ರಿಯಲ್‌ಮಿ C15 ಸ್ಮಾರ್ಟ್‌ಫೋನ್ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿದ್ದು, 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3+ ಪ್ರೊಟೆಕ್ಷನ್‌ಹೊಂದಿದ್ದು, ಮಿನಿ-ಡ್ರಾಪ್ ಡಿಸ್‌ಪ್ಲೇ ಆಗಿದೆ. ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 460 NM ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 32GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಪ್ರೈಮರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಎಂಪಿ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಜೊತೆಗೆ 6000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ 9,499 ರೂ ಆಗಿದ್ದು, 500 ರೂಗಳ ರಿಯಾಯಿತಿಯನ್ನು ನೀಡಲಾಗಿದೆ.

ರಿಯಲ್‌ಮಿ 6
ರಿಯಲ್‌ಮಿ 6 ಸ್ಮಾರ್ಟ್‌ಫೋನ್ 6.5-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 480 ನಿಟ್ಸ್ ಬ್ರೈಟ್‌ನೆಶ್ ಅನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G90T 12 nm ಪ್ರೊಸೆಸರ್ ಅನ್ನು ಹೊಂದಿದೆ. ಹಾಗೇಯೆ 64GB ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದರ ಬೆಲೆ 11,999 ರೂ ಆಗಿದ್ದು, ಇದರ ಮೇಲೆ 2,000 ರೂ ವರೆಗೆ ರಿಯಾಯಿತಿ ನೀಡಲಾಗಿದೆ.

ರಿಯಲ್‌ಮಿ ಸ್ಮಾರ್ಟ್ ಟಿವಿ 32inch
ರಿಯಲ್‌ಮಿ ಸಂಸ್ಥೆಯ 32-ಇಂಚಿನ ಸ್ಮಾರ್ಟ್‌ಟಿವಿ 32 ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1.1GHz ಕ್ವಾಡ್-ಕೋರ್ ಕಾರ್ಟೆಕ್ಸ್ ಎ 53 ಮೀಡಿಯಾ ಟೆಕ್ ಪ್ರೊಸೆಸರ್ ಅನ್ನು ಹೊಂದಿದೆ. ಹಾಗೇಯೆ 1GB RAM ಮತ್ತು 8GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಅಲ್ಲದೆ ಆಂಡ್ರಾಯ್ಡ್ ಟಿವಿ 9.0 ನಲ್ಲಿ ಕಾರ್ಯನಿರ್ವಹಿಸಲಿದೆ. ಇದು Chromecast ಇಂಟರ್‌ಬಿಲ್ಟ್ ನೆಟ್‌ಫ್ಲಿಕ್ಸ್, ಯೂಟ್ಯೂಬ್, ಪ್ರೈಮ್ ವಿಡಿಯೋ, ಲೈವ್ ಚಾನೆಲ್ , ಬ್ಲೂಟೂತ್ 5.0, 2 x ಯುಎಸ್‌ಬಿ, ಅನ್ನು ಬೆಂಬಲಿಸಲಿದೆ. ಇದರ ಬೆಲೆಯಲ್ಲಿ 1,000 ರೂ ಗಳ ತನಕ ರಿಯಾಯಿತಿ ದೊರೆಯಲಿದೆ.
This News Article is a Copy of GIZBOT
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm