ಬ್ರೇಕಿಂಗ್ ನ್ಯೂಸ್
09-01-21 04:08 pm Source: GIZBOT ಡಿಜಿಟಲ್ ಟೆಕ್
ಪ್ರಸ್ತುತ ಎಲ್ಲಾ ಕೆಲಸಗಳಿಗೆ ಇಂದು ಆಧಾರ್ ಕಾರ್ಡ್ ಅಗತ್ಯವಿದೆ. ಇದೇ ಕಾರಣಕ್ಕೆ ಪ್ರತಿಯೊಬ್ಬರು ತಮ್ಮ ಆಧಾರ್ ಕಾರ್ಡ್‌ಗಳನ್ನ ಪಡೆದುಕೊಳ್ಳುತ್ತಿದ್ದಾರೆ. ಇನ್ನು ಕೆಲವು ಆಧಾರ್ ಕಾರ್ಡ್ ಅನ್ನು ಪಡೆದುಕೊಳ್ಳುವ ಸಂದರ್ಭಗಳಲ್ಲಿ ಹೆಸರು, ವಿಳಾಸ, ಇತರೆ ಮಾಹಿತಿ ತಪ್ಪಾಗಿ ಎಂಟ್ರಿ ಆಗಿರುವುದನ್ನು ಸಹ ನಾವು ನೋಡಿದ್ದೇವೆ. ಇದಲ್ಲದೆ ಕೆಲವು ಸಮಯದಲ್ಲಿ ಆಧಾರ್ ಕಾರ್ಡ್‌ನಲ್ಲಿರುವ ನಿಮ್ಮ ವಿಳಸಾವನ್ನು ನೀವು ಬದಲಾಯಿಸಬೇಕಾಗಬಹುದು. ಇಂತ ಸಂದರ್ಭಗಳಲ್ಲಿ ನೀವು ಆಧಾರ್ ಸೇವಾ ಕೇಂದ್ರಗಳಿಗೆ ಹೋಗಬೇಕಾಗುತ್ತದೆ. ಆದರೆ ಇನ್ಮುಂದೆ ನೀವು ನಿಮ್ಮ ಆಧಾರ್ ತಿದ್ದುಪಡಿಯನ್ನು ಆನ್‌ಲೈನ್‌ನಲ್ಲಿ ಕೂಡ ಮಾಡಬಹುದಾಗಿದೆ.
ಹೌದು, ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಆಧಾರ್ ದಾಖಲಾತಿ ಹೊಂದಿರುವವರಿಗೆ ತಮ್ಮ ಗುರುತಿನ ಚೀಟಿಯಲ್ಲಿರುವ ಮಾಹಿತಿಯನ್ನು ಎಡಿಟ್ ಮಾಡುವುದಕ್ಕೆ ಅವಕಾಶ ನೀಡಿದೆ. ಇದನ್ನು UIDAI ಯ ವೆಬ್‌ಸೈಟ್ - uidai.gov.in ಮೂಲಕ ಮಾಡಬಹುದು. ಯುಐಡಿಎಐ ಆಧಾರ್ ಬಯೋಮೆಟ್ರಿಕ್ ಐಡಿ ಪ್ರೋಗ್ರಾಂ ಅನ್ನು ನಿರ್ವಹಿಸುತ್ತದೆ ಮತ್ತು ಆನ್‌ಲೈನ್‌ನಲ್ಲಿ ಸಂಬಂಧಿತ ಸೇವೆಗಳನ್ನು ಒದಗಿಸುತ್ತದೆ. ಹಾಗಾದರೆ ಆನ್‌ಲೈನ್‌ನಲ್ಲಿ ನಿಮ್ಮ ಆಧಾರ್ ಕಾರ್ಡ್ ಅನ್ನು ಎಡಿಟ್ ಮಾಡುವುದು

ಕರೋನವೈರಸ್ ಸಾಂಕ್ರಾಮಿಕ ರೋಗದ ಹಾವಳಿಯ ನಂತರ, ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ (ಯುಐಡಿಎಐ) ಆಧಾರ್ ಅಪ್ಡೇಟ್ ಅನ್ನು ಪ್ರಕಟಿಸಿತ್ತು. ಇದರ ಮೂಲಕ ಜನರು ತಮ್ಮ ವಿವರಗಳನ್ನು ಮನೆಯಿಂದಲೇ ಕುಳಿತು ಆನ್‌ಲೈನ್ ಮೂಲಕ ಬದಲಾಯಿಸಲು ಅವಕಾಶ ನೀಡಿದೆ. ಯಾವುದೇ ಆಧಾರ್ ಕೇಂದ್ರಕ್ಕೆ ಭೇಟಿ ನೀಡದೆ ನಿಮ್ಮ ಹೆಸರು, ಹುಟ್ಟಿದ ದಿನಾಂಕ, ಲಿಂಗ, ವಿಳಾಸ ಮತ್ತು ಭಾಷೆಯನ್ನು ನೀವು ಈಗ ಆನ್‌ಲೈನ್‌ನಲ್ಲಿಯೇ ನವೀಕರಿಸಬಹುದಾಗಿದೆ. ಆದಾಗ್ಯೂ, ಕುಟುಂಬದ ಮುಖ್ಯಸ್ಥ / ಗಾರ್ಡಿಯನ್ ವಿವರಗಳು ಅಥವಾ ಬಯೋಮೆಟ್ರಿಕ್ ಅಪ್ಡೇಟ್‌ಗಳಿಗೆ ಒಬ್ಬರು ಆಧಾರ್ ಸೇವಾ ಕೇಂದ್ರಕ್ಕೆ ಬೇಟಿ ನೀಡಲೇಬೇಕಾಗುತ್ತದೆ.

ಆಧಾರ್ ಕಾರ್ಡ್‌ನಲ್ಲಿರುವ ನಿಮ್ಮ ಹೆಸರು, ಹುಟ್ಟಿದ ದಿನಾಂಕವನ್ನು ಆನ್‌ಲೈನ್‌ನಲ್ಲಿ ಆಪ್ಡೇಟ್ ಮಾಡುವುದು ಹೇಗೆ?
ಹಂತ 1: ಆಧಾರ್ ಕಾರ್ಡ್- uidai.gov.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಹಂತ 2: ಅಪ್ಡೇಟ್ ಡೆಮೊಗ್ರಾಫಿಕ್ ಡೇಟಾವನ್ನು ಕ್ಲಿಕ್ ಮಾಡಿ
ಹಂತ 3: ‘ಪ್ರೊಸಿಡ್ ಟು ಅಪ್ಡೇಟ್ ಬೇಸ್' ಆಯ್ಕೆಮಾಡಿ
ಹಂತ 4: ಪರಿಶೀಲಿಸಲು, ಒಬ್ಬನು ಅವನ / ಅವಳ ಆಧಾರ್ ಕಾರ್ಡ್ ಸಂಖ್ಯೆಯನ್ನು ಸಲ್ಲಿಸಬೇಕಾಗುತ್ತದೆ ಮತ್ತು ಅದನ್ನು ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ

ಹಂತ 5: ‘ಅಪ್‌ಡೇಟ್ ಡಾಮೋಗ್ರಾಫಿಕ್ ಡೇಟಾ' ಆಯ್ಕೆಯನ್ನು ಆರಿಸಿ
ಹಂತ 6: ಹೆಸರು, ವಿಳಾಸ, ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆ, ಭಾಷೆ, ಲಿಂಗ ಮತ್ತು ಇಮೇಲ್ ಮುಂತಾದ ಹಲವು ಆಯ್ಕೆಗಳು ಕಾಣಿಸಿಕೊಳ್ಳುತ್ತವೆ
ಹಂತ 7: ನೀವು ನವೀಕರಿಸಲು ಬಯಸುವ ಆಯ್ಕೆಯನ್ನು ಆರಿಸಿ, ಬದಲಾಯಿಸಿ.

ಹಂತ 8: ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ನಂತರ, ಐಡಿ ಅನ್ನು ವಿಳಾಸ ಪುರಾವೆಯಾಗಿ ಅಪ್‌ಲೋಡ್ ಮಾಡಬೇಕಾಗುತ್ತದೆ. ಇದನ್ನು ಯಾವುದೇ ಸ್ವರೂಪದಲ್ಲಿ ಪಿಡಿಎಫ್, ಜೆಪಿಇಜಿ ಅಥವಾ ಪಿಎನ್‌ಜಿಯಲ್ಲಿ ಅಪ್‌ಲೋಡ್ ಮಾಡಬಹುದು.
ಹಂತ 9: ಆನ್‌ಲೈನ್ ರೂ .50 ಪಾವತಿಸಲು ನಿಮ್ಮನ್ನು ಕೇಳಲಾಗುತ್ತದೆ, ಇದನ್ನು ಡೆಬಿಟ್ / ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಮಾಡಬಹುದು.
ಹಂತ 10: ಇದರ ನಂತರ, ಪಾವತಿ ಯಶಸ್ವಿಯಾದ ಕೂಡಲೇ ಯುಆರ್‌ಎನ್ ಕೋಡ್ ಅನ್ನು ದೃಡೀಕರಣದೊಂದಿಗೆ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಈ ಕೋಡ್ ಮೂಲಕ ನವೀಕರಣದ ಪ್ರಕ್ರಿಯೆಯನ್ನು ನಂತರ ಟ್ರ್ಯಾಕ್ ಮಾಡಲು ನಿಮಗೆ ಸಾಧ್ಯವಾಗುತ್ತದೆ.
This News Article is a Copy of GIZBOT
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm