ಬ್ರೇಕಿಂಗ್ ನ್ಯೂಸ್
16-01-21 05:43 pm Source: GIZBOT Mutthuraju H M ಡಿಜಿಟಲ್ ಟೆಕ್
ದೇಶಿಯ ಮಾರುಕಟ್ಟೆಯಲ್ಲಿ ಬಜೆಟ್ ದರದ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ಬಹುತೇಕ ಕಂಪನಿಗಳು ನೂತನ ಫೋನ್‌ಗಳನ್ನು ಪರಿಚಯಿಸುತ್ತವೆ. ಅವುಗಳಲ್ಲಿ ಐಟೆಲ್ ಕಂಪನಿಯು ಸಹ ಅಗ್ಗದ ದರದಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿ ಸೈ ಅನಿಸಿಕೊಂಡಿದೆ. ಇದೀಗ ಐಟೆಲ್ ಕಂಪನಿಯು ಭಾರತದಲ್ಲಿ ಹೊಸದಾಗಿ ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.
ಹೌದು, ಐಟೆಲ್ ಕಂಪೆನಿ ತನ್ನ ಹೊಸ ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಅಗ್ಗದ ಪ್ರೈಸ್‌ಟ್ಯಾಗ್ ಹೊಂದಿರುವ ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 10 ಗೋ ಎಡಿಷನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4,000mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆಯನ್ನು ಹೊಂದಿದೆ.

ಡಿಸ್‌ಪ್ಲೇ ವಿನ್ಯಾಸ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್‌ಫೋನ್ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಹೊಂದಿರುವ ಡಿಸ್‌ಪ್ಲೇ ಹೊಂದಿದ್ದು, ಇದು 720x1600 ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5-ಇಂಚಿನ ಎಚ್‌ಡಿ ಪ್ಲಸ್ ಡಿಸ್‌ಪ್ಲೇ ಇದಾಗಿದೆ. ಈ ಡಿಸ್‌ಪ್ಲೇಯು IPS LCD ಪ್ಯಾನೆಲ್ ಡಿಸ್‌ಪ್ಲೇ ಆಗಿದ್ದು, 450 ನಿಟ್ಸ್ ಬ್ರೈಟ್‌ನೆಶ್ ಅನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 20:9 ಅನುಪಾತ ಹೊಂದಿದೆ.

ಪ್ರೊಸೆಸರ್ ಬಲ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, 10 ಗೋ ಎಡಿಷನ್ ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಗ್ಗದ ಬೆಲೆಯ ಈ ಸ್ಮಾರ್ಟ್‌ಫೋನ್ 2GB RAM ಮತ್ತು 32GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿದೆ.

ಕ್ಯಾಮೆರಾ ರಚನೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಿಯರ್ ಸೆಟ್‌ಆಪ್ ಹೊಂದಿದ್ದು, ಮೊದಲನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳೆರಡು VGA ಕ್ಯಾಮೆರಾ ಮಾದರಿಯನ್ನು ಹೊಂದಿವೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್‌ಫೋನ್ 4000mAh ಬ್ಯಾಟರಿ ಪ್ಯಾಕ್‌ಆಪ್ ಹೊಂದಿದೆ. 35 ಗಂಟೆಗಳ ಪ್ಲೇಬ್ಯಾಕ್ ಮ್ಯೂಸಿಕ್, 8 ಗಂಟೆಗಳ ವೀಡಿಯೊ ಮತ್ತು 7 ಗಂಟೆಗಳ ಗೇಮಿಂಗ್ ಅನ್ನು ಒದಗಿಸುತ್ತದೆ ಎಂದು ಐಟೆಲ್ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಡ್ಯುಯಲ್ ಆಕ್ಟಿವ್ 4G VOLTE, ವೈಫೈ, ಬ್ಲೂಟೂತ್ , ಹಾಟ್‌ಸ್ಪಾಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್‌ಫೋನ್ 2GB RAM ಮತ್ತು 32GB ವೇರಿಯಂಟ್ ಬೆಲೆಯು 6,599ರೂ.ಗಳಾಗಿದೆ. ಇನ್ನು ಈ ಫೋನ್ ಅರೋರಾ ಬ್ಲೂ ಹಾಗೂ ಓಶಿಯನ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.
This News Article is a Copy of GIZBOT
11-09-26 02:59 pm
HK News Staffer
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 03:51 pm
HK News Staffer
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
ಮಂಗಳೂರು- ಬೆಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ...
10-09-26 09:24 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್...
10-09-26 10:27 am
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
11-09-26 01:09 pm
HK News Staffer
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm