ಹಾನರ್ V40 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾ ವಿಶೇಷ!

25-01-21 04:17 pm       Source: GIZBOT Mutthuraju H M   ಡಿಜಿಟಲ್ ಟೆಕ್

ಹಾನರ್‌ ಸಂಸ್ಥೆ ತನ್ನ ಹೊಸ ಹಾನರ್‌ V40 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಹಾನರ್‌ ಸಂಸ್ಥೆ ತನ್ನ ಹೊಸ ಹಾನರ್‌ V40 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಪ್ರೈಮರಿ ಕ್ಯಾಮೆರಾ 56 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇನ್ನು ಈ ಫೋನ್‌ ಆಯತಾಕಾರದ ಕ್ಯಾಮೆರಾ ಮಾಡ್ಯೂಲ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಹೌದು, ಹಾನರ್‌ ಸಂಸ್ಥೆ ಹಾನರ್ V40 5G ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಬಿಡುಗಡೆ ಮಾಡಿದೆ. ಇದು 6.72 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 1000+ SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.



ಡಿಸ್‌ಪ್ಲೇ

ಹಾನರ್‌ V40 5G ಸ್ಮಾರ್ಟ್‌ಫೋನ್‌ 1,236x2,676 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.72-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಒಎಲ್ಇಡಿ ಡಿಸ್‌ಪ್ಲೇ ಆಗಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಅಲ್ಲದೆ 300Hz ಟಚ್ ಸ್ಯಾಂಪ್ಲಿಂಗ್ ರೇಟ್‌, HDR10 ಬೆಂಬಲ ಮತ್ತು 80 ಡಿಗ್ರಿ ಬಾಗಿದ ಅಂಚುಗಳನ್ನು ಹೊಂದಿದೆ.



ಪ್ರೊಸೆಸರ್‌

ಇದು ಮೀಡಿಯಾಟೆಕ್ ಡೈಮೆನ್ಸಿಟಿ 1000+ SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ರ ಆಧಾರದ ಮೇಲೆ ಯುಐ 4.0 ನಲ್ಲಿ ಚಲಿಸುತ್ತದೆ. ಹಾಗೆಯೇ ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.



ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಲೇಸರ್ ಆಟೋಫೋಕಸ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ಎಲ್ಇಡಿ ಫ್ಲ್ಯಾಷ್ ಬೆಂಬಲದೊಂದಿಗೆ ಬರುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಟೈಮ್ ಆಫ್ ಫ್ಲೈಟ್ ಲೆನ್ಸ್‌ ಹೊಂದಿರುವ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.



ಬ್ಯಾಟರಿ ಮತ್ತು ಇತರೆ

ಹಾನರ್ V40 5G ಸ್ಮಾರ್ಟ್‌ಫೋನ್‌ 4,200mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಅಲ್ಲದೆ 50W ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವೂ ಇದೆ. ಇದು ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ.



ಬೆಲೆ ಮತ್ತು ಇತರೆ

ಹಾನರ್ V40 5G ಚೀನಾದಲ್ಲಿ ಬೇಸ್ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮಾದರಿಗೆ CNY 3,599 (ಅಂದಾಜು ರೂ .40,600) ಮತ್ತು 8GB RAM + 256GB ಶೇಖರಣಾ ರೂಪಾಂತರಕ್ಕೆ CNY 3,999 (ಸುಮಾರು ರೂ. 45,100) ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಮ್ಯಾಜಿಕ್ ನೈಟ್ ಬ್ಲ್ಯಾಕ್, ರೋಸ್ ಗೋಲ್ಡ್ ಮತ್ತು ಟೈಟಾನಿಯಂ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಬರುತ್ತದೆ.

This News Article is a Copy of GIZBOT