ಸ್ಯಾಮ್‌ಸಂಗ್‌ ಗ್ಯಾಲಕ್ಸಿ m02 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಬಹಿರಂಗ!

28-01-21 02:11 pm       Source: GIZBOT Mutthuraju H M   ಡಿಜಿಟಲ್ ಟೆಕ್

ಸ್ಯಾಮ್‌ಸಂಗ್‌ ಸಂಸ್ಥೆ ತನ್ನ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್‌ ಅನ್ನು ಇದೇ ಫೆಬ್ರವರಿ 2 ರಂದು ಬಿಡುಗಡೆ ಮಾಡುವುದಾಗಿ ಹೇಳಿದೆ.

ಹೌದು, ಸ್ಯಾಮ್‌ಸಂಗ್‌ ಸಂಸ್ಥೆ ತನ್ನ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್‌ ಅನ್ನು ಇದೇ ಫೆಬ್ರವರಿ 2 ರಂದು ಬಿಡುಗಡೆ ಮಾಡುವುದಾಗಿ ಹೇಳಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್‌ ಫೆಬ್ರವರಿ 2 ರಂದು ಭಾರತದಲ್ಲಿ ಬಿಡುಗಡೆಯಾಗುತ್ತಿದೆ ಎಂದು ಅಮೆಜಾನ್ ತನ್ನ ವೆಬ್‌ಸೈಟ್‌ನಲ್ಲಿ ಬಹಿರಂಗಪಡಿಸಿದೆ. ಕಳೆದ ವರ್ಷ ಜೂನ್‌ನಲ್ಲಿ ಪ್ರಾರಂಭವಾದ ಗ್ಯಾಲಕ್ಸಿ ಎಂ 01 ಗೆ ಉತ್ತರಾಧಿಕಾರಿಯಾಗಿ ಬರಲಿರುವ ಈ ಸ್ಮಾರ್ಟ್‌ಫೋನ್‌ ಎಂ ಸರಣಿಯಲ್ಲಿ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸುವುದರ ಜೊತೆಗೆ, ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಬಹಿರಂಗಪಡಿಸಿದೆ.

ಡಿಸ್‌ಪ್ಲೇ ವಿಶೇಷ

ಸ್ಯಾಮ್‌ಸಂಗ್ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್ ಗ್ಯಾಲಕ್ಸಿ M02 720x1520 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD + ಡಿಸ್‌ಪ್ಲೇ ಹೊಂದಿರಲಿದೆ ಎನ್ನಲಾಗಿದೆ. ಇದು Infinity-V ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರಲಿದೆ.

ಪ್ರೊಸೆಸರ್‌

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 450 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ

ಗ್ಯಾಲಕ್ಸಿ m02 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಹೊಂದಿರಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M02 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಚಾರ್ಜಿಂಗ್‌, 4G ನೆಟ್‌ವರ್ಕ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ m02 ಬೆಲೆ 7,000,ರೂ. ಇರಲಿದೆ ಎಂದು ಅಮೆಜಾನ್‌ ಲ್ಯಾಂಡಿಂಗ್ ಪೇಜ್ ಬಹಿರಂಗಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಫೆಬ್ರವರಿ 2 ರಂದು ಬಿಡುಗಡೆ ಆಗಲಿದೆ.

This News Article is a Copy of GIZBOT