ಸದ್ಯದಲ್ಲೇ ಭಾರತಕ್ಕೆ ಮೊಟೊರೊಲಾ ಐಬಿಜಾ ಸ್ಮಾರ್ಟ್‌ಫೋನ್‌ ಎಂಟ್ರಿ!

08-02-21 04:37 pm       Source: GIZBOT Mutthuraju H M   ಡಿಜಿಟಲ್ ಟೆಕ್

ಮೊಟೊರೊಲಾ ತನ್ನ ಹೊಸ ಐಬಿಜಾ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಮೊಟೊರೊಲಾ ಕಂಪೆನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಪರಿಚಯಿಸಿರುವ ಮೊಟೊರೊಲಾ ಇದೀಗ ತನ್ನ ಮೊಟೊರೊಲಾ ಐಬಿಜಾ ಸ್ಮಾರ್ಟ್‌ಫೋನ್‌ ಅನ್ನು ಅನಾವರಣಗೊಳಿಸಲು ಮುಂದಾಗಿದೆ. ಮೊಟೊರೊಲಾ ಐಬಿಜಾ ಮಧ್ಯಮ ಶ್ರೇಣಿಯ ಡಿವೈಸ್‌ ಆಗಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಹೌದು, ಮೊಟೊರೊಲಾ ತನ್ನ ಹೊಸ ಐಬಿಜಾ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಇದು ಕ್ವಾಲ್ಕಾಮ್‌ನ ಎಂಟ್ರಿ-ಲೆವೆಲ್ 5 ಜಿ ರೆಡಿ ಚಿಪ್‌ಸೆಟ್‌ನಿಂದ ನಿಯಂತ್ರಿಸಲ್ಪಡುವ ಮೊದಲ ಮೊಟೊರೊಲಾ ಸಾಧನವಾಗಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.



ಡಿಸ್‌ಪ್ಲೇ 

ಮೊಟೊರೊಲಾ ಐಬಿಜಾ ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್‌ ರೇಟ್‌ ಹೊಂದಿದ್ದು, ಅಮೋಲೆಡ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.



ಪ್ರೊಸೆಸರ್‌

ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 480 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ v10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB + 128GB ಮತ್ತು 6GB + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ.



ಕ್ಯಾಮೆರಾ ವಿನ್ಯಾಸ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಒಮ್ಇಷನ್‌ ಡೆಪ್ತ್‌ ಸೆನ್ಸಾರ್‌ ಹೊಂದಿರುವ ಸಾಧ್ಯತೆ ಇದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿರಲಿದೆ ಎಂದು ಊಹಿಸಲಾಗಿದೆ.



ಬ್ಯಾಟರಿ ಮತ್ತು ಇತರೆ

ಮೊಟೊರೊಲಾ ಐಬಿಜಾ 5000mAh ಬ್ಯಾಟರಿಯನ್ನು ಹೊಂದಿದ್ದು, ಇದು ವೇಗದ ಚಾರ್ಜಿಂಗ್‌ಗೆ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 5G, ವೈಫೈ, ಬ್ಲೂಟೂತ್ 5.1, ಎನ್‌ಎಫ್‌ಸಿ, ಜಿಪಿಎಸ್, ಟೈಪ್ ಸಿ ಪೋರ್ಟ್, 3.5mm ಜ್ಯಾಕ್ ಅನ್ನು ಬೆಂಬಲಿಸುವ ನಿರೀಕ್ಷೆಯಿದೆ.

ಬೆಲೆ ಮತ್ತು ಲಭ್ಯತೆ

ಮೊಟೊರೊಲಾ ಐಬಿಜಾ ಸ್ಮಾರ್ಟ್‌ಫೋನ್‌ ವೆನಿಲ್ಲಾ ರೂಪಾಂತರಕ್ಕಾಗಿ 13,999 ಬೆಲೆಯಿರಬೇಕೆಂದು ಒಂದೆರಡು ವೆಬ್‌ಸೈಟ್‌ಗಳು ಸುಳಿವು ನೀಡಿವೆ. ಆದರೆ ಇದು ಯಾವಾಗ ಲಭ್ಯವಾಗಲಿದೆ ಎಂಬುದರ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

This News Article is a Copy of GIZBOT