ಸ್ಯಾಮ್‌ಸಂಗ್ ಗ್ಯಾಲಕ್ಸಿ F62 ಫೋನ್ ಲಾಂಚ್!..7,000mAh ಬ್ಯಾಟರಿ ಲೈಫ್‌!

15-02-21 04:49 pm       Source: GIZBOT Manthesh   ಡಿಜಿಟಲ್ ಟೆಕ್

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಇಂದು ಬಿಡುಗಡೆ ಮಾಡಿದೆ.

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಇಂದು (ಫೆ.15) ಬಿಡುಗಡೆ ಮಾಡಿದೆ. ಗ್ಯಾಲಕ್ಸಿ F ಸರಣಿಯಲ್ಲಿ ಲಾಂಚ್ ಆಗಿರುವ ಈ ಸ್ಮಾರ್ಟ್‌ಫೋನ್ ಹಿಂದಿನ ಗ್ಯಾಲಕ್ಸಿ F41 ಫೋನ್‌ಗಿಂತ ಸಾಕಷ್ಟು ಅಪ್‌ಡೇಟ್‌ ಫೀಚರ್ಸ್‌ಗಳನ್ನು ಒಳಗೊಂಡಿದೆ. ಮುಖ್ಯವಾಗಿ ಕ್ವಾಡ್‌ ಕ್ಯಾಮೆರಾ, ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿರುವುದು ಈ ಫೋನಿನ ಪ್ರಮುಖ ಅಟ್ರ್ಯಾಕ್ಷನ್ ಆಗಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಹೊಸದಾಗಿ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಇಂದು ಅನಾವರಣ ಮಾಡಿದೆ. ನಿರೀಕ್ಷೆಯಂತೆ ಇದೊಂದು ಮೀಡ್‌ರೇಂಜ್‌ ಸ್ಮಾರ್ಟ್‌ಫೋನ್ ಆಗಿದ್ದು, 7,000mAh ಬ್ಯಾಟರಿ ಬ್ಯಾಕ್‌ಅಪ್‌ನಿಂದ ಗಮನ ಸೆಳೆದಿದೆ. ಹಾಗೆಯೇ ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್‌ ಪಡೆದಿದ್ದು, 6GB RAM ಸಾಮರ್ಥ್ಯದ ವೇರಿಯಂಟ್‌ ಆಯ್ಕೆ ಹೊಂದಿದೆ. ಹಾಗೆಯೇ ಬ್ಲೂ, ಗ್ರೀನ್ ಹಾಗೂ ಗ್ರೇ ಬಣ್ಣಗಳ ಆಯ್ಕೆ ಪಡೆದಿದೆ.


ಡಿಸ್‌ಪ್ಲೇ ವಿನ್ಯಾಸ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌ 1,080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಮಲ್ಟಿ ಟಚ್‌ ಸ್ಕ್ರೀನ್‌ ವ್ಯವಸ್ಥೆಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 405PPI ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ.



ಯಾವ ಪ್ರೊಸೆಸರ್‌ ಇದೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ exynos 9825 SoC ಪ್ರೊಸೆಸರ್‌ ಹೊಂದಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 6GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.



ಕ್ವಾಡ್‌ ಕ್ಯಾಮೆರಾ ಸೆನ್ಸಾರ್

ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳಿವೆ.



ಬ್ಯಾಟರಿ ಮತ್ತು ಇತರೆ ಫೀಚರ್ಸ್

‌ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌ 7,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಸೈಡ್‌ ಮೌಂಟ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಆಂಡ್ರಾಯ್ಡ್‌ 11 ಓಎಸ್‌, 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.



ಬೆಲೆ ಎಷ್ಟು ಮತ್ತು ಲಭ್ಯತೆ

ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಗ್ಯಾಲಕ್ಸಿ F62 ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. 6GB RAM ಮತ್ತು 128GB ಸ್ಟೋರೇಜ್‌ನ ಬೇಸ್ ವೇರಿಯಂಟ್ ಬೆಲೆಯು 23,999ರೂ. ಆಗಿದೆ. ಹಾಗೆಯೇ 8GB RAM ಮತ್ತು 128GB ವೇರಿಯಂಟ್ ಬೆಲೆಯು 25,999ರೂ.ಗಳು ಆಗಿದೆ. ಇನ್ನು ಇದೇ ಫೆ. 22 ರಂದು ಫಸ್ಟ್‌ ಸೇಲ್ ಶುರುವಾಗಲಿದ್ದು, ಪ್ರಮುಖ ಆನ್‌ಲೈನ್ ತಾಣಗಳಲ್ಲಿ ಖರೀದಿಗೆ ಸಿಗಲಿದೆ.

This News Article is a Copy of GIZBOT