ಬ್ರೇಕಿಂಗ್ ನ್ಯೂಸ್
09-04-21 06:37 pm Source: Gizbot Bureau ಡಿಜಿಟಲ್ ಟೆಕ್
ಐಪಿಎಲ್ 2021 ಸೀಸನ್ ಮ್ಯಾಚ್‌ಗಳು ಇಂದಿನಿಂದ (ಏಪ್ರಿಲ್ 9) ಶುರುವಾಗಲಿದೆ. ಮೊದಲ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆಯಲಿದೆ. ಈಗಾಗಲೇ ಕ್ರಿಕೆಟ್ ಪ್ರೇಮಿಗಳಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಐಪಿಎಲ್ 2021 ಸೀಸನ್ ಮ್ಯಾಚ್‌ಗಳನ್ನು ಕೆಲವರು ಟಿವಿಯಲ್ಲಿ ವೀಕ್ಷಿಸಲು ಇಚ್ಛಿಸಿದರೇ, ಮತ್ತೆ ಕೆಲವರು ಡಿಸ್ನಿ ಹಾಟ್‌ಸ್ಟಾರ್ ಆಪ್ ಮೂಲಕ ಮೊಬೈಲ್‌ನಲ್ಲಿಯೇ ಮ್ಯಾಚ್‌ಗಳನ್ನು ಎಂಜಾಯ್ ಮಾಡುತ್ತಾರೆ. ಈ ನಿಟ್ಟಿನಲ್ಲಿ ಜಿಯೋ ಕೆಲವು ಪ್ಲ್ಯಾನ್‌ಗಳಲ್ಲಿ ಹಾಟ್‌ಸ್ಟಾರ್ ಆಪ್ ಸೇವೆ ಒದಗಿಸಿದೆ.
ಹೌದು, ಜಿಯೋ ಟೆಲಿಕಾಂ ಜನಪ್ರಿಯ ಓಟಿಟಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವದ ಪ್ಲ್ಯಾನ್‌ಗಳನ್ನು ಹೊಂದಿವೆ. ಅವುಗಳು ಭಿನ್ನ ಪ್ರೈಸ್‌ಟ್ಯಾಗ್ ಅನ್ನು ಹೊಂದಿದ್ದು, ಡೇಟಾ ಹಾಗೂ ವಾಯಿಸ್ ಕರೆಗಳ ಪ್ರಯೋಜನ ಸಹ ಪಡೆದಿವೆ. ಹಾಗಾದರೇ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸೌಲಭ್ಯ ಹೊಂದಿರುವ ಜಿಯೋ ಟೆಲಿಕಾಂನ ಜನಪ್ರಿಯ ಪ್ರೀಪೇಯ್ಡ್ ಪ್ಲ್ಯಾನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಜಿಯೋ 401ರೂ. ಪ್ರೀಪೇಯ್ಡ್ ಯೋಜನೆ
ಜಿಯೋದ ಈ ಪ್ರೀಪೇಯ್ಡ್ ಪ್ಲಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ಪ್ರತಿದಿನ ಒಟ್ಟು 90GB ಡೇಟಾ ಪ್ರಯೋಜನವನ್ನು ಒಳಗೊಂಡಿದೆ. ಜಿಯೋ ಟು ಜಿಯೋ ಉಚಿತ ವಾಯಿಸ್ ಕರೆ ಹಾಗೂ ಜಿಯೋ ಟು ಇತರೆ ಟೆಲಿಕಾಂಗಳ ಕರೆಗಳು ಸಹ ಅನಿಯಮಿತ ಉಚಿತ. ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ಇದೆ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸೌಲಭ್ಯ ಮತ್ತು ಜಿಯೋ ಆಪ್ಸ್ ಸೇವೆ ಹೊಂದಿದೆ.
ಜಿಯೋ 598ರೂ. ಪ್ರೀಪೇಯ್ಡ್ ಯೋಜನೆ
ಜಿಯೋ 598ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸೌಲಭ್ಯ ಮತ್ತು ಜಿಯೋ ಆಪ್ಸ್ ಸೇವೆ ಹೊಂದಿದೆ.
ಜಿಯೋ 777ರೂ. ಪ್ರೀಪೇಯ್ಡ್ ಯೋಜನೆ
ಜಿಯೋ 777ರೂ. ಪ್ರೀಪೇಯ್ಡ್ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 1.5GB ಡೇಟಾ ಪ್ರಯೋಜನ ಲಭ್ಯವಾಗಲಿದೆ. ಹೆಚ್ಚುವರಿಯಾಗಿ 5GB ಡೇಟಾ ಪ್ರಯೋಜನ ಲಭ್ಯ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಸಹ ಒಳಗೊಂಡಿದೆ. ಇದರೊಂದಿಗೆ ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಹಾಗೆಯೇ ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸೌಲಭ್ಯ ಮತ್ತು ಜಿಯೋ ಆಪ್ಸ್ ಸೇವೆ ಹೊಂದಿದೆ.
ಜಿಯೋ 2599ರೂ. ಪ್ರೀಪೇಯ್ಡ್ ಯೋಜನೆ
ಜಿಯೋದ 2,599ರೂ. ಪ್ಲ್ಯಾನ್ ಒಂದು ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಪ್ರತಿದಿನ 2GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ಹೆಚ್ಚುವರಿಯಾಗಿ 10GB ಡೇಟಾ ಪ್ರಯೋಜನ ಲಭ್ಯ. ಜಿಯೋ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಹೆಚ್ಚುವರಿಯಾಗಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ VIP ಸದಸ್ಯತ್ವ ಸಹ ಲಭ್ಯವಾಗುತ್ತದೆ.
This News Article Is A Copy Of GIZBOT BUREAU
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am