ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ ಬಿಡುಗಡೆ!..ಆಕರ್ಷಕ ಫೀಚರ್ಸ್‌!

05-05-21 05:02 pm       Source: GIZBOT Mutthuraju H M   ಡಿಜಿಟಲ್ ಟೆಕ್

ರಿಯಲ್‌ಮಿ ಸಂಸ್ಥೆ ಹೊಸ ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ.

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ರಿಯಲ್‌ಮಿ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಕಳೆದ ವರ್ಷ ಬಿಡುಗಡೆಯಾಗಿದ್ದ ರಿಯಲ್‌ಮಿ C11 ಸ್ಮಾರ್ಟ್‌ಫೋನ್‌ನ ತಿರುಚಿದ ರೂಪಾಂತರವಾಗಿದೆ.

ಹೌದು, ರಿಯಲ್‌ಮಿ ಸಂಸ್ಥೆ ಹೊಸ ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ರಷ್ಯಾ ಮತ್ತು ಫಿಲಿಪೈನ್ಸ್‌ನಲ್ಲಿ ಇ-ಕಾಮರ್ಸ್ ಸೈಟ್‌ಗಳಲ್ಲಿ ಪಟ್ಟಿ ಮಾಡಲಾಗಿದೆ. ಇನ್ನು ಈ ಫೋನ್‌ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದು ಯುನಿಸಾಕ್ SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.



ಡಿಸ್‌ಪ್ಲೇ

ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ವಾಟರ್‌ಡ್ರಾಪ್-ಸ್ಟೈಲ್ ನಾಚ್ ವಿನ್ಯಾಸವನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 60Hz ಸ್ಕ್ರೀನ್ ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ.



ಪ್ರೊಸೆಸರ್‌

ಇದು ಮೈಸ್ಮಾರ್ಟ್ ಪ್ರೈಸ್ ಯುನಿಸಾಕ್ ಎಸ್ಸಿ 9863 SoC ಹೊಂದಿದೆ ಎಂದು ಹೇಳಲಾಗಿದ್ದು, ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.



ಕ್ಯಾಮೆರಾ ವಿಶೇಷ

ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.



ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಜಿಪಿಎಸ್, ಮೈಕ್ರೋ ಯುಎಸ್‌ಬಿ ಪೋರ್ಟ್, ಯುಎಸ್‌ಬಿ ಒಟಿಜಿ, 4 ಜಿ, ಬ್ಲೂಟೂತ್, ವೈ-ಫೈ, ಯನ್ನು ಬೆಂಬಲಿಸಲಿದೆ



ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ C11 (2021) ಸ್ಮಾರ್ಟ್‌ಫೋನ್‌ ರಷ್ಯಾ ಮತ್ತು ಫಿಲಿಪೈನ್ಸ್‌ನ ಅಧಿಕೃತ ಕಂಪನಿ ವೆಬ್‌ಸೈಟ್‌ಗಳಲ್ಲಿ ಇನ್ನೂ ಪಟ್ಟಿ ಮಾಡಲಾಗಿಲ್ಲ, ಆದರೆ ಫೋನ್ ಈಗ ರಷ್ಯಾದ ಅಲಿಎಕ್ಸ್‌ಪ್ರೆಸ್ ಮತ್ತು ಫಿಲಿಪೈನ್ಸ್‌ನ ಲಾಜಾಡಾದಲ್ಲಿ ಲಭ್ಯವಿದೆ. ಫಿಲಿಪೈನ್ಸ್‌ನಲ್ಲಿ, ಈ ಫೋನ್‌ನ ಬೆಲೆ ಪಿಎಚ್‌ಪಿ 4990 (ಸರಿಸುಮಾರು 7,600 ರೂ.) ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಐರನ್ ಗ್ರೇ ಮತ್ತು ಲೇಕ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಫೋನ್ ಲಭ್ಯವಾಗಲಿದೆ.

This News Article Is A Copy Of GIZBOT