ಶೀಘ್ರದಲ್ಲೇ ರಿಯಲ್‌ಮಿ V25 ಸ್ಮಾರ್ಟ್‌ಫೋನ್‌ ಬಿಡುಗಡೆ!

08-05-21 01:48 pm       GIZBOT Mutthuraju H M   ಡಿಜಿಟಲ್ ಟೆಕ್

ರಿಯಲ್‌ಮಿ ಸಂಸ್ಥೆ ಹೊಸ ರಿಯಲ್‌ಮಿ V25 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ.

ಜನಪ್ರಿಯ ರಿಯಲ್‌ಮಿ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ.; ಸದ್ಯ ಇದೀಗ ತನ್ನ ವಿ-ಸರಣಿ ಶ್ರೇಣಿಗೆ ಹೊಸ ಸ್ಮಾರ್ಟ್‌ಫೋನ್ ಸೇರಿಸಲು ಸಜ್ಜಾಗಿದೆ. ಚೀನಾದ ವೆಬ್‌ಸೈಟ್‌ ಟಿಪ್‌ಸ್ಟರ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಅನ್ನು ರಿಯಲ್‌ಮಿ ವಿ 25 ಎಂದು ಹೆಸರಿಸಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿರುವ ಸಾಧ್ಯತೆ ಇದೆ.

ಹೌದು, ರಿಯಲ್‌ಮಿ ಸಂಸ್ಥೆ ಹೊಸ ರಿಯಲ್‌ಮಿ V25 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿರಲಿದೆ ಎಂದು ಹೇಳಲಗಿದೆ. ಜೊತೆಗೆ 32ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆ ಇದೆ. 



ಡಿಸ್‌ಪ್ಲೇ

ರಿಯಲ್‌ಮಿ V25 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಪ್ರೆಶ್‌ ರೇಟ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ.



ಪ್ರೊಸೆಸರ್‌

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB, 8GB, 12GB RAM ಮತ್ತು 128GB ಹಾಗೂ 256GB ಇಂಟರ್‌ ಸ್ಟೋರೇಜ್ ಆಯ್ಕೆಗಳನ್ನು ಹೊಂದಿರುವ ಸಾದ್ಯತೆ ಇದೆ.



ಕ್ಯಾಮೆರಾ ವಿಶೇಷ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.



ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುವ ಸಾಧ್ಯತೆ ಇದೆ. ಇದು ಪೂರ್ತಿ ಬ್ಯಾಟರಿಯನ್ನು ಚಾರ್ಜ್ ಮಾಡಲು 35 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5, 5ಜಿ, ಬ್ಲೂಟೂತ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವಾಗ ಲಭ್ಯವಾಗಿದೆ. ಇದರ ಬೆಲೆ ಏನಿರಲಿದೆ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

(Kannada Copy of  Gizbot Kannada)