ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಫಿಕ್ಸ್‌! ವಿಶೇಷತೆ ಏನು?

10-05-21 05:18 pm       GIZBOT Mutthuraju H M   ಡಿಜಿಟಲ್ ಟೆಕ್

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಈಗ ದೃಡಪಡಿಸಲಾಗಿದ್ದು, ಇದು ಇದೇ ಮೇ 18 ರಂದು ಮಲೇಷ್ಯಾದಲ್ಲಿ ಲಾಂಚ್‌ ಆಗಲಿದೆ.

ಜನಪ್ರಿಯ ರಿಯಲ್‌ಮಿ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ರಿಯಲ್‌ಮಿ ನಾರ್ಜೊ 30 ಸರಣಿಯ ವೆನಿಲ್ಲಾ ಮಾದರಿಯಾದ ನಾರ್ಜೊ 30 ಅನ್ನು ಬಿಡುಗಡೆ ಮಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕವನ್ನು ಈಗ ದೃಡಪಡಿಸಲಾಗಿದ್ದು, ಇದು ಇದೇ ಮೇ 18 ರಂದು ಮಲೇಷ್ಯಾದಲ್ಲಿ ಲಾಂಚ್‌ ಆಗಲಿದೆ.

ಹೌದು, ರಿಯಲ್‌ಮಿ ಸಂಸ್ಥೆ ಹೊಸ ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಡೇಟ್‌ ಫಿಕ್ಸ್‌ ಮಾಡಿದೆ. ಈಗಾಗಲೇ ಭಾರತದಲ್ಲಿ ರಿಯಲ್‌ಮಿ ನಾರ್ಜೊ 30 ಸರಣಿಯಲ್ಲಿ ರಿಯಲ್‌ಮಿ 30ಎ ಮತ್ತು ರಿಯಲ್‌ಮಿ 30 ಪ್ರೊ ಬಿಡುಗಡೆ ಆಗಿರುವುದನ್ನು ಸಹ ಗಮನಿಸಬಹುದಾಗಿದೆ. ಇನ್ನು ಈ ಹೊಸ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ.



ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 580 ನಿಟ್ಸ್ ಬ್ರೈಟ್‌ನೆಸ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ.



ಪ್ರೊಸೆಸರ್‌

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್‌ ಹೊಂದಿರುವ ಸಾಧ್ಯತೆ ಇದೆ. ಜೊತೆಗೆ ಇದು ಆಂಡ್ರಾಯ್ಡ್‌ 11 ಆಧಾರಿತ ರಿಯಲ್ಮೆ ಯುಐ 2.0 ಬೆಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯೊಂದಿಗೆ ಬರಬಹುದು ಎಂದು ತಿಳಿದುಬಂದಿದೆ.



ಕ್ಯಾಮೆರಾ ವಿಶೇಷ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಬಿ & ಡಬ್ಲ್ಯೂ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ ಎನ್ನಲಾಗಿದೆ.



ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಬೆಂಬಲಿಸಬಹುದು ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದು ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಬೆಲೆಯ ಬಗ್ಗೆ ಯಾವುದೆ ಅಧಿಕೃತ ಮಾಹಿತಿ ಲಬ್ಯವಿಲ್ಲ. ಆದರೆ ಇದು ಈಗಿರುವ ನಾರ್ಜೊ 30 ಸರಣಿ ಸ್ಮಾರ್ಟ್‌ಫೋನ್‌ಗಳಂತೆಯೇ ಬಜೆಟ್ ಸ್ಮಾರ್ಟ್‌ಫೋನ್ ಆಗುವ ನಿರೀಕ್ಷೆಯಿದೆ. ಇದು ಭಾರತದಲ್ಲಿ ಯಾವಾಗ ಬಿಡುಗಡೆ ಆಗಲಿದೆ ಎಂಬ ಮಾಹಿತಿ ಇಲ್ಲ ಆದರೆ ಶೀಘ್ರದಲ್ಲೇ ಭಾರತದಲ್ಲಿ ಕೂಡ ಇದು 5G ಬೆಂಬಲದೊಂದಿಗೆ ಬಿಡುಗಡೆ ಆಗುವ ಸಾಧ್ಯತೆಗಳಿವೆ.

(Kannada Copy of  Gizbot Kannada)