ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಲಾಂಚ್‌ಗೆ ದಿನಾಂಕ ಫಿಕ್ಸ್‌; ಫೀಚರ್ಸ್ ಏನು?

12-05-21 05:00 pm       GIZBOT Mantesh   ಡಿಜಿಟಲ್ ಟೆಕ್

ರಿಯಲ್‌ಮಿ ನಾರ್ಜೋ 30 ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲು ಸಜ್ಜಾಗಿದೆ.

ಪ್ರಮುಖ ಮೊಬೈಲ್ ತಯಾರಿಕಾ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ರಿಯಲ್‌ಮಿ ಈಗಾಗಲೇ ಹಲವು ಭಿನ್ನ ಶ್ರೇಣಿಯ ಫೋನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸಂಸ್ಥೆಯ ನಾರ್ಜೋ ಸರಣಿಯ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಫೀಚರ್ಸ್‌ಗಳಿಂದ ಫೋನ್ ಪ್ರಿಯರನ್ನು ಅಟ್ರ್ಯಾಕ್ಟ್‌ ಮಾಡಿವೆ. ಇದೀಗ ಕಂಪನಿಯು ತನ್ನ ನಾರ್ಜೋ ಸರಣಿಯಲ್ಲಿಯೇ ರಿಯಲ್‌ಮಿ ನಾರ್ಜೋ 30 ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಲು ಸಜ್ಜಾಗಿದೆ.

ಹೌದು, ರಿಯಲ್‌ಮಿ ಕಂಪೆನಿ ತನ್ನ ಹೊಸ ರಿಯಲ್‌ಮಿ ನಾರ್ಜೊ 30 ಬಿಡುಗಡೆಗೆ ಸಿದ್ಧತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳು ಆನ್‌ಲೈನ್‌ನಲ್ಲಿ ಲೀಕ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಹಾಗೂ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇದರೊಂದಿಗೆ ಅತ್ಯುತ್ತಮ ಡಿಸ್‌ಪ್ಲೇ ರಚನೆ ಹಾಗೂ ಹೈ ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿರುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ. ಇನ್ನು ಈ ಫೋನ್ ಇದೇ ಮೇ 18ರಂದು ಲಾಂಚ್ ಆಗುವುದು ಎನ್ನಲಾಗಿದೆ. 



ಡಿಸ್‌ಪ್ಲೇ ರಚನೆ

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ. ಜೊತೆಗೆ ಈ ಡಿಸ್‌ಪ್ಲೇ 405 ppi ಪಿಕ್ಸೆಲ್‌ ಸಾಂದ್ರತೆಯನ್ನು ಹಾಗೂ 90Hz ಸ್ಕ್ರೀನ್ ರೀಫ್ರೇಶ್ ರೇಟ್ ಒಳಗೊಂಡಿರುವ ಸಾಧ್ಯತೆಗಳಿವೆ.



ಯಾವ ಪ್ರೊಸೆಸರ್‌

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G95 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಲಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು ಎನ್ನಲಾಗಿದೆ.



ಕ್ಯಾಮೆರಾ ಸೆನ್ಸಾರ್

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿರುವ ಸಾಧ್ಯತೆಗಳಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದಿರಲಿದೆ.



ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದರೊಂದಿಗೆ 30w ಡಾರ್ಟ್‌ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, 4G ನೆಟ್‌ವರ್ಕ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವಾಗ ಬಿಡುಗಡೆ ಆಗಲಿದೆ ಹಾಗೂ ಇದರ ಬೆಲೆ ಎಷ್ಟಿರಲಿದೆ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

(Kannada Copy of  Gizbot Kannada)