ಬಜೆಟ್‌ ಬೆಲೆಯಲ್ಲಿ ಭಾರತದಲ್ಲಿ ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌ ಬಿಡುಗಡೆ!

13-05-21 04:30 pm       GIZBOT Mutthuraju H M   ಡಿಜಿಟಲ್ ಟೆಕ್

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಬಜೆಟ್‌ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿದ್ದು, ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಶಿಯೋಮಿ ಸಂಸ್ಥೆಯ ರೆಡ್ಮಿ ನೋಟ್ ಸರಣಿಯ ಸ್ಮಾರ್ಟ್‌ಫೋನ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಸಖತ್ ಸೌಂಡ್ ಮಾಡಿವೆ. ಶಿಯೋಮಿ ಇತ್ತೀಚಿಗಷ್ಟೇ ರೆಡ್ಮಿ ನೋಟ್ 10 ಸರಣಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿ ಗ್ರಾಹಕರನ್ನು ಸೆಳೆದಿದೆ. ಕಂಪನಿಯು ಅದೇ ಸರಣಿಯಲ್ಲಿ ಈಗ ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಬಜೆಟ್‌ ಪ್ರೈಸ್‌ಟ್ಯಾಗ್‌ ಅನ್ನು ಹೊಂದಿದ್ದು, ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಹೌದು, ಶಿಯೋಮಿಯ ಕಂಪನಿಯು ನೂತನವಾಗಿ ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌ ಅನ್ನು ಇಂದು ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ.



ಡಿಸ್‌ಪ್ಲೇ ವಿನ್ಯಾಸ

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಅಲ್ಲದೆ 1100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌, ಸ್ಕ್ರೀನ್‌ ಟು ಬಾಡಿ 83.5% ಅನುಪಾತ ಹೊಂದಿರಲಿದ್ದು, ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಹೊಂದಿದೆ.



ಪ್ರೊಸೆಸರ್‌ ಯಾವುದು

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ.



ಕ್ಯಾಮೆರಾ ವಿಶೇಷತೆ

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್‌,2.2 ಅಪರ್ಚರ್ ಮತ್ತು 118 ಡಿಗ್ರಿ ಫೀಲ್ಡ್-ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.



ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರುತ್ತದೆ ಮತ್ತು ಎಐ ಫೇಸ್ ಅನ್ಲಾಕ್ ಅನ್ನು ಬೆಂಬಲಿಸುತ್ತದೆ.



ಬೆಲೆ ಮತ್ತು ಲಭ್ಯತೆ

ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 6GB + 64GB ಸ್ಟೋರೇಜ್ ವೇರಿಯಂಟ್ ಬೆಲೆಯು 14,999 ರೂ. ಆಗಿದೆ. ಹಾಗೆಯೇ 6GB + 128GB ಸ್ಟೋರೇಜ್ ವೇರಿಯಂಟ್ ದರದವು 15,999ರೂ.ಗಳಾಗಿದೆ. ಈ ಫೋನ್‌ ನೀಲಿ, ಡಾರ್ಕ್ ಗ್ರೇ ಮತ್ತು ವೈಟ್ ಎಂಬ ಮೂರು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಈ ಸ್ಮಾರ್ಟ್‌ಫೋನ್‌ ಇದೇ ಮೇ 25 ರಂದು ಸೇಲ್ ಆರಂಭಿಸಲಿದೆ.

(Kannada Copy of  Gizbot Kannada)