ಇನ್ಫಿನಿಕ್ಸ್‌ ನೋಟ್‌ 10 ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

14-05-21 02:58 pm       GIZBOT Mutthuraju H M   ಡಿಜಿಟಲ್ ಟೆಕ್

ಇನ್ಫಿನಿಕ್ಸ್‌ ಕಂಪೆನಿ ಹೊಸ ಇನ್ಫಿನಿಕ್ಸ್‌ ನೋಟ್‌ 10 ಸ್ಮಾರ್ಟ್‌ಫೋನ್‌ ಸರಣಿಯನ್ನು ಬಿಡುಗಡೆ ಮಾಡಿದೆ.

ಟೆಕ್‌ ವಲಯದಲ್ಲಿ ಇನ್ಫಿನಿಕ್ಸ್‌ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಮೂರು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳನ್ನು ಇನ್ಫಿನಿಕ್ಸ್ ನೋಟ್ 10, ನೋಟ್ 10 ಪ್ರೊ ಮತ್ತು ನೋಟ್ 10 ಪ್ರೊ NFC ಎಂದು ಹೆಸರಿಸಲಾಗಿದೆ. ಇದರಲ್ಲಿ ನೋಟ್ 10 ಮೂಲ ಮಾದರಿಯಾಗಿದ್ದು, ನೋಟ್ 10 ಪ್ರೊ ಮತ್ತು ನೋಟ್ 10 ಪ್ರೊ ಎನ್‌ಎಫ್‌ಸಿ ಮೂಲಭೂತವಾಗಿ ಒಂದೇ ಮಾದರಿಯನ್ನು ಹೊಂದಿವೆ.

ಹೌದು, ಇನ್ಫಿನಿಕ್ಸ್‌ ಕಂಪೆನಿ ಹೊಸ ಇನ್ಫಿನಿಕ್ಸ್‌ ನೋಟ್‌ 10 ಸ್ಮಾರ್ಟ್‌ಫೋನ್‌ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಇನ್ಫಿನಿಕ್ಸ್ ನೋಟ್ 10 ಆಕರ್ಷಕ ಫೀಚರ್ಸ್‌ಗಳನ್ನು ಪಡೆದುಕೊಂಡಿದ್ದು, ಗ್ರಾಹಕರ ಗಮನ ಸೆಳೆದಿದೆ. ಇದು 6.95-ಇಂಚಿನ ಎಲ್ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಹಾಗಾದ್ರೆ ಇನ್ಫಿನಿಕ್ಸ್‌ ನೋಟ್‌ 10 ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.



ಡಿಸ್‌ಪ್ಲೇ

ಇನ್ಫಿನಿಕ್ಸ್‌ ನೋಟ್‌ 10 ಸ್ಮಾರ್ಟ್‌ಫೋನ್‌ 720 x 1640 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.95 ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 1500: 1 ಕಾಂಟ್ರಾಸ್ಟ್ ಅನುಪಾತವನ್ನು ಹೊಂದಿದೆ.



ಪ್ರೊಸೆಸರ್ ಯಾವುದು?

ಇದು ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB/6GB RAM ಜೊತೆಗೆ 64GB / 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.



ಕ್ಯಾಮೆರಾ ವಿಶೇಷ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.



ಬ್ಯಾಟರಿ ಮತ್ತು ಇತರೆ

ಇನ್ಫಿನಿಕ್ಸ್‌ ನೋಟ್‌ 10 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ , ಯುಎಸ್‌ಬಿ ಟೈಪ್‌ ಸಿ, 5G , 4G ಯನ್ನು ಬೆಂಬಲಿಸಲಿದೆ.



ಬೆಲೆ ಮತ್ತು ಲಭ್ಯತೆ

ಇನ್ಫಿನಿಕ್ಸ್ ನೋಟ್ 10 ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ $ 200 (ಅಂದಾಜು 14,713 ರೂ.) ಬೆಲೆಯನ್ನು ಹೊಂದಿದೆ. ಇನ್ಫಿನಿಕ್ಸ್ ನೋಟ್ 10 95-ಡಿರೆಸ್ ಬ್ಲ್ಯಾಕ್, 7-ಡಿಗ್ರಿ ಪರ್ಪಲ್ ಮತ್ತು ಎಮರಾಲ್ಡ್ ಗ್ರೀನ್ ಕಲರ್‌ ಆಯ್ಕೆಯಲ್ಲಿ ಲಭ್ಯವಿದೆ. ಇನ್ನು ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

(Kannada Copy of  Gizbot Kannada)