ವಿವೋ Y52 5G ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

19-05-21 05:36 pm       GIZBOT Mutthuraju H M   ಡಿಜಿಟಲ್ ಟೆಕ್

ವಿವೋ ಕಂಪೆನಿ ಹೊಸ ವಿವೋ Y52 5G ಸ್ಮಾರ್ಟ್‌ಫೋನ್‌ ಅನ್ನು ಯುರೋಪ್‌ ಮಾರುಕಟ್ಟೆಯಲ್ಲಿ ಲಾಂಚ್‌ ಮಾಡಿದೆ.

ಜನಪ್ರಿಯ ವಿವೋ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಹೊಸ ವಿವೋ Y52 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y52 5G ಸ್ಮಾರ್ಟ್‌ಫೋನ್‌ ಅನ್ನು ಯುರೋಪ್‌ ಮಾರುಕಟ್ಟೆಯಲ್ಲಿ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.58-ಇಂಚಿನ ಫುಲ್‌-ಹೆಚ್‌ಡಿ +ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.



ಡಿಸ್‌ಪ್ಲೇ ವಿಶೇಷ

ವಿವೋ Y52 5G ಸ್ಮಾರ್ಟ್‌ಫೋನ್‌ 1,080x2,408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 84.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದೆ.



ಪ್ರೊಸೆಸರ್‌

ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫಂಟೌಚ್ ಓಎಸ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಜೊತೆಗೆ 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.



ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.



ಬ್ಯಾಟರಿ ಮತ್ತು ಇತರೆ

ವಿವೋ Y52 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ವಿವೊ Y52 5G ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆಯನ್ನು ವಿವೋ ಇನ್ನೂ ಹಂಚಿಕೊಂಡಿಲ್ಲ. ಆದರೆ ಇದು ಯೂರೋ 299 (ಸುಮಾರು ರೂ. 26,700) ಬೆಲೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ. ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಯಾವಾಗ ಲಭ್ಯವಾಗಲಿದೆ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

(Kannada Copy of  Gizbot Kannada)