ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಟ್ಯಾಬ್‌ S7 FE 5G ಬಿಡುಗಡೆ! ವಿಶೇಷತೆ ಏನು?

26-05-21 12:09 pm       GIZBOT Mutthuraju H M   ಡಿಜಿಟಲ್ ಟೆಕ್

ಸ್ಯಾಮ್‌ಸಂಗ್‌ ಸಂಸ್ಥೆ ಹೊಸ ಗ್ಯಾಲಕ್ಸಿ ಟ್ಯಾಬ್ S7 FE 5Gಯನ್ನು ಬಿಡುಗಡೆ ಮಾಡಿದೆ. ಇದು ಗ್ಯಾಲಕ್ಸಿ ಟ್ಯಾಬ್ S7 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 + ಸರಣಿಯ ಮುಂದುವರೆದ ಭಾಗವಾಗಿದೆ.

ಸ್ಯಾಮ್‌ಸಂಗ್‌ ಸಂಸ್ಥೆ ಸ್ಮಾರ್ಟ್‌ಫೋನ್‌ ಮಾತ್ರವಲ್ಲದೆ ಇತರೆ ವಲಯದಲ್ಲಿಯೂ ಸಹ ಗುರುತಿಸಿಕೊಂಡಿದೆ. ತನ್ನ ಗುಣಮಟ್ಟದ ಪ್ರಾಡಕ್ಟ್‌ಗಳ ಕಾರಣದಿಂದಾಗಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಸ್ಯಾಮ್‌ಸಂಗ್‌ ಸಂಸ್ಥೆ ಹೊಸ ಗ್ಯಾಲಕ್ಸಿ ಟ್ಯಾಬ್ S7 FE 5Gಯನ್ನು ಬಿಡುಗಡೆ ಮಾಡಿದೆ. ಇದು ಗ್ಯಾಲಕ್ಸಿ ಟ್ಯಾಬ್ S7 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 + ಸರಣಿಯ ಮುಂದುವರೆದ ಭಾಗವಾಗಿದೆ. ಇನ್ನು ಈ ಟ್ಯಾಬ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಅನ್ನು ಪಡೆದುಕೊಂಡಿದೆ

ಹೌದು, ಸ್ಯಾಮ್‌ಸಂಗ್‌ ಸಂಸ್ಥೆ ಹೊಸ ಗ್ಯಾಲಕ್ಸಿ S7 FE 5G ಟ್ಯಾಬ್‌ ಅನ್ನು ಜರ್ಮನಿಯಲ್ಲಿ ಲಾಂಚ್‌ ಮಾಡಿದೆ. ಇದು 12.4-ಇಂಚಿನ ಎಲ್‌ಸೊಡಿ ಡಿಸ್‌ಪ್ಲೇ ಹೊಂದಿದೆ. ಜೊತೆಗೆ ಈ ಟ್ಯಾಬ್ಲೆಟ್ 10,090mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 45W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಈ ಟ್ಯಾಬ್‌ ಏನೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.



ಗ್ಯಾಲಕ್ಸಿ S7 FE 5G ಟ್ಯಾಬ್‌ ಡಿಸ್‌ಪ್ಲೇ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಗ್ಯಾಲಕ್ಸಿ S7 FE 5G 1,600x2,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 12.4-ಇಂಚಿನ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ.



ಪ್ರೊಸೆಸರ್‌ ಸಾಮರ್ಥ್ಯ

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G ಆಕ್ಟಾ-ಕೋರ್ SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಸ್ಯಾಮ್‌ಸಂಗ್ ಒನ್ ಯುಐನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಜೊತೆಗೆ ಮೈಕ್ರೊ ಎಸ್ಡಿ ಕಾರ್ಡ್ ಸ್ಲಾಟ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.



ಕ್ಯಾಮೆರಾ ವಿಶೇಷ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 FE 5G 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಈ ಕ್ಯಾಮೆರಾ 30fpsನಲ್ಲಿ 1080p ವಿಡಿಯೋ ರೆಕಾರ್ಡಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.



ಬ್ಯಾಟರಿ ಮತ್ತು ಇತರೆ

ಇದು 10,090mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 45W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಸೆಲ್ಯುಲಾರ್ ನೆಟ್‌ವರ್ಕ್ ಮೂಲಕ ಟ್ಯಾಬ್ಲೆಟ್ 12 ಗಂಟೆಗಳ ಸಕ್ರಿಯ ಬಳಕೆಯನ್ನು ಚಲಾಯಿಸಬಹುದು ಎಂದು ಕಂಪನಿ ಹೇಳಿಕೊಂಡಿದೆ. ಟ್ಯಾಬ್ಲೆಟ್ ಎಸ್ ಪೆನ್ ಬೆಂಬಲದೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ ವಿ 5, ಯುಎಸ್ಬಿ ಟೈಪ್-ಸಿ ಪೋರ್ಟ್, ಗಿಗಾಬಿಟ್ ವೈ-ಫೈಯನ್ನು ಬೆಂಬಲಿಸಲಿದೆ.