ರೆಡ್ಮಿ ನೋಟ್ 10 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

27-05-21 12:16 pm       GIZBOT Mutthuraju H M   ಡಿಜಿಟಲ್ ಟೆಕ್

ಹೊಸ ರೆಡ್‌ಮಿ ನೋಟ್ 10 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1100 SoC ಪ್ರೊಸೆಸರ್‌ ಹೊಂದಿದೆ.

ಜನಪ್ರಿಯ ಶಿಯೋಮಿ ಕಂಪೆನಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ರೆಡ್‌ಮಿ ನೋಟ್ 10 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1100 SoC ಪ್ರೊಸೆಸರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡುತ್ತದೆ.

ಹೌದು, ಶಿಯೋಮಿ ಹೊಸ ರೆಡ್‌ಮಿ ನೋಟ್‌ 10 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.6-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದು 4G ಮಾದರಿಗಿಂತ ವಿಭಿನ್ನವಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.



ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರೆಡ್ಮಿ ನೋಟ್ 10 ಪ್ರೊ 5G ಸ್ಮಾರ್ಟ್‌ಫೋನ್‌ 2,400x1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌, 240ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 450 ನಿಟ್ಸ್ ಬ್ರೈಟ್‌ನೆಸ್, ಡಿಸಿಐ-ಪಿ 3 ಕಲರ್ ಗ್ಯಾಮಟ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್‌

ರೆಡ್‌ಮಿ ನೋಟ್ 10 ಪ್ರೊ 5ಜಿ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 1100 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಎಂಐಯುಐ 12.5 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ.



ಟ್ರಿಪಲ್‌ ರಿಯರ್‌ ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾವನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.



ಬ್ಯಾಟರಿ ಮತ್ತು ಇತರೆ

ರೆಡ್ಮಿ ನೋಟ್ 10 ಪ್ರೊ 5ಜಿ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 6, ಬ್ಲೂಟೂತ್ ವಿ 5.2, ಯುಎಸ್‌ಬಿ ಟೈಪ್-ಸಿ ಪೋರ್ಟ್, ಎನ್‌ಎಫ್‌ಸಿ, 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದು ಜೆಬಿಎಲ್ ಆಡಿಯೊ ಡ್ಯುಯಲ್ ಸ್ಪೀಕರ್‌ಗಳನ್ನು ಒಳಗೊಂಡಿದೆ.



ಬೆಲೆ ಮತ್ತು ಲಭ್ಯತೆ

ರೆಡ್‌ಮಿ ನೋಟ್ 10 ಪ್ರೊ 5 ಜಿ ಸ್ಮಾರ್ಟ್‌ಫೋನ್‌ 6GB RAM + 128GB ಶೇಖರಣಾ ಆಯ್ಕೆಗೆ CNY 1,599 (ಸರಿಸುಮಾರು ರೂ. 18,200) ಬೆಲೆ ಹೊಂದಿದೆ. 8GB RAM+ 128GB ಶೇಖರಣಾ ಆಯ್ಕೆಗೆ CNY 1,799 (ಸರಿಸುಮಾರು 20,500 ರೂ.) ಮತ್ತು 8GB RAM + 256GB ಶೇಖರಣಾ ಆಯ್ಕೆಗೆ CNY 1,999 (ಸರಿಸುಮಾರು ರೂ.22,800)ಬೆಲೆ ಹೊಂದಿದೆ. ಇದು ಮ್ಯಾಜಿಕ್ ಗ್ರೀನ್, ಸ್ಟಾರ್ ನೂಲು ಮತ್ತು ಮೂನ್ ಸೋಲ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಿದೆ. ಜೂನ್ 1 ರಿಂದ ಮಾರಾಟಕ್ಕೆ ಬರಲಿದೆ.

(Kannada Copy of  Gizbot Kannada)