ಬಜೆಟ್‌ ದರದಲ್ಲಿ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಲಾಂಚ್ !

08-06-21 05:42 pm       GIZBOT Mantesh   ಡಿಜಿಟಲ್ ಟೆಕ್

ಪೊಕೊ ಮೊಬೈಲ್ ಕಂಪನಿಯು ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಇಂದು ವರ್ಚುವಲ್ ಇವೆಂಟ್‌ ಮೂಲಕ ಭಾರತದಲ್ಲಿ ಬಿಡುಗಡೆ ಮಾಡಿದೆ.

ಪೊಕೊ ಮೊಬೈಲ್ ಕಂಪನಿಯು ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಇಂದು ವರ್ಚುವಲ್ ಇವೆಂಟ್‌ ಮೂಲಕ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ Dimensity 700 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಹಾಗೆಯೇ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇದರೊಂದಿಗೆ ಬಜೆಟ್‌ ಪ್ರೈಸ್‌ಟ್ಯಾಗ್‌ ಹೊಂದಿರುವುದು ಪ್ಲಸ್‌ ಪಾಯಿಂಟ್ ಆಗಿದೆ.

ಹೌದು, ಪೊಕೊ ಕಂಪೆನಿ ತನ್ನ ಹೊಸ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಅನ್ನು ಇಂದು (ಜೂ.8) ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಈ ಫೋನ್ ಭಾರತದಲ್ಲಿ 4GB + 64GB ಮತ್ತು 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಇನ್ನು ಈ ಫೋನ್ ಇದೇ ಜೂನ್.14 ರಂದು ಫ್ಲಿಪ್‌ಕಾರ್ಟ್‌ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಸೇಲ್ ಶುರು ಮಾಡಲಿದೆ. ಬ್ಲೂ, ಬ್ಲ್ಯಾಕ್ ಹಾಗೂ ಯೆಲ್ಲೊ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಹಾಗಾದರೇ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.



ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿರಲಿದೆ ಎನ್ನಲಾಗಿದೆ. ಇದು 405 ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ



ಪ್ರೊಸೆಸರ್‌ ಯಾವುದು?

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB + 64GB ಮತ್ತು 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.



ಟ್ರಿಪಲ್ ಕ್ಯಾಮೆರಾ ವಿಶೇಷತೆ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಹೊಂದಿದೆ.ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.



ಬ್ಯಾಟರಿ ಮತ್ತು ಇತರೆ

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಡ್ಯುಯಲ್-ಬ್ಯಾಂಡ್ 4G, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, ಮತ್ತು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಯುಎಸ್ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.



ಬೆಲೆ ಎಷ್ಟು?

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 4GB + 64GB ವೇರಿಯಂಟ್ 13,999ರೂ.ಗಳಾಗಿದೆ. ಹಾಗೂ 6GB + 128GB ವೇರಿಯಂಟ್ 15,999ರೂ.ಗಳ ಪ್ರೈಸ್‌ಟ್ಯಾಗ್‌ ಹೊಂದಿದೆ. ಇದೇ ಜೂನ್.14 ರಂದು ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸೇಲ್ ಪ್ರಾರಂಭಿಸಲಿದೆ.

(Kannada Copy of  Gizbot Kannada)