ಭಾರತದಲ್ಲಿ ವಿವೋ Y73 ಸ್ಮಾರ್ಟ್‌ಫೋನ್‌ ಬಿಡುಗಡೆ! ಬೆಲೆ ಎಷ್ಟು?

11-06-21 02:47 pm       GIZBOT Mutthuraju H M   ಡಿಜಿಟಲ್ ಟೆಕ್

ವಿವೋ Y73 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ.

ಜನಪ್ರಿಯ ವಿವೋ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸದ್ಯ ಇದೀಗ ಹೊಸ ವಿವೋ Y73 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಹೌದು, ವಿವೋ ಕಂಪೆನಿ ಹೊಸ ವಿವೋ Y73 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.44-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ G95SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನು ವಿವೋ Y73 ಡೈಮಂಡ್ ಫ್ಲೇರ್ ಮತ್ತು ರೋಮನ್ ಬ್ಲ್ಯಾಕ್‌ನ ಎರಡು ಬಣ್ಣ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.



ಡಿಸ್‌ಪ್ಲೇ

ವಿವೋ Y73 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 408 ಪಿಪಿ ಪಿಕ್ಸೆಲ್ ಸಾಂದ್ರತೆ, 90.3% ಸ್ಕ್ರೀನ್-ಟು -ಬಾಡಿ ಅನುಪಾತ, ಮತ್ತು ಎಚ್‌ಡಿಆರ್ 10 ಬೆಂಬಲವನ್ನು ಪಡೆದುಕೊಂಡಿದೆ.



ಪ್ರೊಸೆಸರ್‌ ಸಾಮರ್ಥ್ಯ

ಇದು ಮೀಡಿಯಾ ಟೆಕ್ ಹಿಲಿಯೊ G95SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫೋನ್ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಬಳಸಿ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿಶೇಷ

ವಿವೋ Y73 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್ ಮೋಡ್, ಪೋರ್ಟ್ರೇಟ್ ಲೈಟ್ ಎಫೆಕ್ಟ್, ವಿಡಿಯೋ ಫೇಸ್ ಬ್ಯೂಟಿ, ಡ್ಯುಯಲ್-ವ್ಯೂ ವಿಡಿಯೋ, 4 ಕೆ ವಿಡಿಯೋ ರೆಕಾರ್ಡಿಂಗ್ ಮತ್ತು ಐ ಆಟೋಫೋಕಸ್ ಫೀಚರ್ಸ್‌ ಒಳಗೊಂಡಿದೆ.


ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.0, 4ಜಿ ಎಲ್ ಟಿಇ, ವೈ-ಫೈ, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ವಿವೊ Y73 ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ 20,990 ರೂ, ಬೆಲೆಯನ್ನು ಹೊಂದಿದೆ. ಇದು ವಿವೋ ಇಂಡಿಯಾದ ಇ-ಸ್ಟೋರ್, ಅಮೆಜಾನ್, ಫ್ಲಿಪ್‌ಕಾರ್ಟ್, ಪೇಟಿಎಂ, ಟಾಟಾಕ್ಲಿಕ್, ಬಜಾಜ್ ಇಎಂಐ ಸ್ಟೋರ್ ಮತ್ತು ಕಂಪನಿಯ ಪಾಲುದಾರ ಚಿಲ್ಲರೆ ಅಂಗಡಿಗಳಿಂದ ಖರೀದಿಸಲು ಲಭ್ಯವಿರುತ್ತದೆ. ಕೋಟಕ್ ಮಹೀಂದ್ರಾ ಗ್ರಾಹಕರು ಮತ್ತು ಹೆಚ್‌ಡಿಎಫ್‌ಸಿ ಬ್ಯಾಂಕ್ ಗ್ರಾಹಕರಿಗೆ ವಿವೋ 1,000ರೂ, ಕ್ಯಾಶ್‌ಬ್ಯಾಕ್ ದೊರೆಯಲಿದೆ.

(Kannada Copy of  Gizbot Kannada)