ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಲಾಂಚ್‌ ಡೇಟ್‌ ಫಿಕ್ಸ್‌!

14-06-21 02:08 pm       GIZBOT Mantesh   ಡಿಜಿಟಲ್ ಟೆಕ್

ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ.

ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಸಂಸ್ಥೆ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿದೆ. ಇದೀಗ ತನ್ನ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ಸಿದ್ಧತೆ ನಡೆಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಜೂನ್ 21 ರಂದು ಮಧ್ಯಾಹ್ನ 12 ಗಂಟೆಗೆ ಬಿಡುಗಡೆ ಆಗುವುದು ಅಧಿಕೃತವಾಗಿದೆ.

ಹೌದು, ಸ್ಯಾಮ್‌ಸಂಗ್ ಈ ತಿಂಗಳ ಕೊನೆಯಲ್ಲಿ ಹೊಸ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಇದನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಹೆಸರಿಸಲಾಗಿದ್ದು, ಇದು ಜೂನ್‌ 21ಕ್ಕೆ ಬಿಡುಗಡೆ ಆಗುವುದು ಪಕ್ಕಾ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.



ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 32 ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90hz ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದು 800 ನಿಟ್ಸ್ ಗರಿಷ್ಠ ಹೊಳಪನ್ನು ಹೊಂದಿರುತ್ತದೆ. ಈ ಡಿಸ್‌ಪ್ಲೇಯನ್ನು "ಸೆಗ್ಮೆಂಟ್ ಬೆಸ್ಟ್" ಎಂದು ಕರೆಯಲಾಗುತ್ತದೆ.



ಪ್ರೊಸೆಸರ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 32 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್‌ ಅಥವಾ ಹಿಲಿಯೊ G85 ಪ್ರೊಸೆಸರ್ ಹೊಂದಿರಲಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM+ 64GB ಮತ್ತು 6GB RAM+ 128GB ಇಂಟರ್‌ ಸ್ಟೋರೇಜ್ ಆಯ್ಕೆಯ ಎರಡು ರೂಪಾಂತರಗಳಲ್ಲಿ ಇದು ಲಭ್ಯವಾಗಲಿದೆ.



ಕ್ಯಾಮೆರಾ

ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದ ಕ್ಯಾಮೆರಾಗಳ ಬಗ್ಗೆ ಮಾಹಿತಿ ಲಭ್ಯವಿಲ್ಲ. ಇನ್ನು ಇದು 20 ಮೆಗಾಪಿಕ್ಸೆಲ್ ಇಮೇಜ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿರಲಿದೆ.



ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಪೋರ್ಟ್‌ ಅನ್ನು ಬೆಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ.



ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 32 ಸ್ಮಾರ್ಟ್‌ಫೋನ್‌ ಬೆಲೆ 15,000 ರಿಂದ 20,000 ರೂಗಳವರೆಗೆ ಇರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಭಾರತದಲ್ಲಿ ಜೂನ್ 21 ರಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಲಿದೆ ಎನ್ನಲಾಗಿದೆ. ಗ್ಯಾಲಕ್ಸಿ ಎಂ 32 ಅಮೆಜಾನ್ ವೆಬ್‌ಸೈಟ್‌ನಲ್ಲಿ ಮಾರಾಟವಾಗಲಿದೆ.

(Kannada Copy of  Gizbot Kannada)