ಬ್ರೇಕಿಂಗ್ ನ್ಯೂಸ್
15-06-21 02:57 pm GIZBOT Mantesh ಡಿಜಿಟಲ್ ಟೆಕ್
ಪ್ರಮುಖ ಸ್ಮಾರ್ಟ್‌ಫೋನ್ ತಯಾರಕ ಸಂಸ್ಥೆಗಳಲ್ಲಿ ಒಂದಾಗಿರುವ ವಿವೋ ಕಂಪೆನಿ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಛಾಪು ಮೂಡಿಸಿದೆ. ಸಂಸ್ಥೆಯು V ಸರಣಿಯಲ್ಲಿ ಈಗಾಗಲೇ ಹಲವು ಫೋನ್‌ಗಳನ್ನು ಅನಾವರಣ ಮಾಡಿದೆ. ಆ ಪೈಕಿ ಇತ್ತೀಚಿಗೆ ಪರಿಚಯಿಸಿದ ವಿವೋ V21 5G ಸ್ಮಾರ್ಟ್‌ಫೋನ್ ಗಮನ ಸೆಳೆದಿತ್ತು. ಅದರ ಮುಂದುವರಿದ ಭಾಗವೆಂಬಂತೆ ಕಂಪನಿಯು ಈಗ V ಸರಣಿಯಲ್ಲಿ ಮತ್ತೆ ಹೊಸದೊಂದು 5G ಫೋನ್ ಬಿಡುಗಡೆ ಮಾಡಲು ಸಕಲ ತಯಾರಿ ನಡೆಸಿದೆ. ಅದುವೇ ವಿವೋ V21e 5G ಆಗಿದೆ.
ಹೌದು, ಜನಪ್ರಿಯ ವಿವೋ ಸಂಸ್ಥೆಯು ಭಾರತದಲ್ಲಿ ನೂತನವಾಗಿ ವಿವೋ V21e 5G ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ. ಆದರೆ ಇದೀಗ ಈ ಫೋನಿನ ಫೀಚರ್ಸ್‌ಗಳು ಲೀಕ್ ಆಗಿದ್ದು, ಗ್ರಾಹಕರಲ್ಲಿ ಕುತೂಹಲ ಮೂಡಿಸಿದೆ. ಈ ಫೋನ್ ಫುಲ್ ಹೆಚ್‌ಡಿ+ AMOLED ಡಿಸ್‌ಪ್ಲೇಯನ್ನು ಒಳಗೊಂಡಿರಲಿದೆ. ಹಾಗೆಯೇ 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಮಾಡೆಲ್ ಆಯ್ಕೆ ಹೊಂದಿರುವುದು ಬಹುತೇಕ ಖಚಿತವಾಗಿದೆ ಎನ್ನಲಾಗಿದೆ. ಇನ್ನುಳಿದಂತೆ ಲೀಕ್ ಮಾಹಿತಿಯಂತೆ ವಿವೋ V21e 5G ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿರಲಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ
ವಿವೋ V21e 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44-ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, ಹೆಚ್‌ಡಿಆರ್ 10 + ಮತ್ತು 90 Hz ರಿಫ್ರೆಶ್ ರೇಟ್ ಅನ್ನು ಹೊಂದಿರಲಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ ಎಂದು ಅಂದಾಜಿಸಲಾಗಿದೆ.
ಪ್ರೊಸೆಸರ್ ಯಾವುದು
ವಿವೋ V21e 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 ಚೀಪ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾದ ಅವಕಾಶ ಇರಲಿದೆ.
ಕ್ಯಾಮೆರಾ ಸೆನ್ಸಾರ್
ವಿವೋ V21e 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ವಿವೋ V21e 5G ಸ್ಮಾರ್ಟ್‌ಫೋನ್ 4,400 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ.
(Kannada Copy of Gizbot Kannada)
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm