ಇಂದು ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ ಓಪನ್‌ ಸೇಲ್‌!

16-06-21 11:24 am       GIZBOT Mutthuraju H M   ಡಿಜಿಟಲ್ ಟೆಕ್

ಒನ್‌ಪ್ಲಸ್‌ ಮೊಬೈಲ್‌ ಕಂಪೆನಿ ಇತ್ತೀಚಿಗಷ್ಟೇ ಬಿಡುಗಡೆ ಮಾಡಿರುವ ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್‌ಫೋನ್‌ ಆಕ‍ರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ.

ಒನ್‌ಪ್ಲಸ್‌ ಮೊಬೈಲ್‌ ಕಂಪೆನಿ ಇತ್ತೀಚಿಗಷ್ಟೇ ಬಿಡುಗಡೆ ಮಾಡಿರುವ ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್‌ಫೋನ್‌ ಆಕ‍ರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇಂದು (ಜೂನ್‌.16) ಮಧ್ಯಾಹ್ನ 12 ರಿಂದ ಭಾರತದಲ್ಲಿ ಮುಕ್ತ ಮಾರಾಟಕ್ಕೆ ಬರಲಿದೆ. ಇದು ಒನ್‌ಪ್ಲಸ್ ಇಂಡಿಯಾ ವೆಬ್‌ಸೈಟ್ ಮತ್ತು ಅಮೆಜಾನ್ ಮೂಲಕ ಖರೀದಿಗೆ ಲಭ್ಯವಿರುತ್ತದೆ. ಇನ್ನು ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ 22,999 ರೂ. ಆಗಿದ್ದು, ಹೆಚ್‌ಡಿಎಫ್‌ಸಿ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಮೂಲಕ ವಹಿವಾಟು ನಡೆಸುವವರಿಗೆ 1,000 ರಿಯಾಯಿತಿ ರಿಯಾಯಿತಿ ಕೂಡ ಸಿಗಲಿದೆ.

ಹೌದು, ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನಿನ ಫಸ್ಟ್‌ ಸೇಲ್‌ ಇಂದು ನಡೆಯಲಿದೆ. ಈ ಫೋನ್‌ ಹಿಂಭಾಗದಲ್ಲಿ ಟ್ರಿಪಲ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.



ಡಿಸ್‌ಪ್ಲೇ ವಿಶೇಷ

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. 408ppi ಪಿಕ್ಸೆಲ್‌ ಸಾಂದ್ತೆಯನ್ನು ಹೊಂದಿದ್ದು, ಇದು 90Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ.



ಪ್ರೊಸೆಸರ್‌

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ.



ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ- ವೈಡ್ ಲೆನ್ಸ್, ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೋನಿ ಐಎಂಎಕ್ಸ್ 471 ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಒನ್‌ಪ್ಲಸ್‌ ನಾರ್ಡ್‌ CE 5G ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇದರೊಂದಿಗೆ ಇನ್‌ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹಾಗೂ ಫೇಸ್‌ ಅನ್‌ಲಾಕ್‌ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 802.11 ಎ / ಬಿ / ಜಿ / ಎನ್ / ಎಸಿ, ಬ್ಲೂಟೂತ್ ಆವೃತ್ತಿ 5.1, ಜಿಪಿಎಸ್, ಎನ್‌ಎಫ್‌ಸಿ, ಗ್ಲೋನಾಸ್, ನಾವಿಕ್, ಯುಎಸ್‌ಬಿ ಟೈಪ್-ಸಿ ಪೋರ್ಟ್, ಡ್ಯುಯಲ್ ಸಿಮ್ ಬೆಂಬಲ ಮತ್ತು ಹೆಚ್ಚಿನವುಗಳು ಸೇರಿವೆ.



ಬೆಲೆ ಮತ್ತು ಲಭ್ಯತೆ

ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ರೂಪಾಂತರಕ್ಕೆ 22,999 ರೂ. 8GB RAM + 128GB ರೂಪಾಂತರಕ್ಕೆ 24,999 ರೂ. ಮತ್ತು 12GB RAM + 256GB RAM ಮಾದರಿಗೆ 27,999 ರೂ. ಬೆಲೆಯನ್ನು ಹೊಂದಿದೆ. ಇದು ಬ್ಲೂ ವಾಯ್ಡ್, ಚಾರ್ಕೋಲ್ ಇಂಕ್ ಮತ್ತು ಸಿಲ್ವರ್ ರೇ ಬಣ್ಣಗಳಲ್ಲಿ ಲಭ್ಯವಾಗಲಿದೆ. ಒನ್‌ಪ್ಲಸ್ ಇಂಡಿಯಾ ವೆಬ್‌ಸೈಟ್ ಮತ್ತು ಅಮೆಜಾನ್ ಮೂಲಕ ಮಧ್ಯಾಹ್ನ 12 ರಿಂದ (ಮಧ್ಯಾಹ್ನ) ಖರೀದಿಗೆ ಲಭ್ಯವಿರುತ್ತದೆ. ಇನ್ನು ಒನ್‌ಪ್ಲಸ್ ಇಂಡಿಯಾ ವೆಬ್‌ಸೈಟ್ ಮತ್ತು ಅಮೆಜಾನ್ ನಲ್ಲಿ ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳು ಮತ್ತು ಇಎಂಐ ವಹಿವಾಟುಳಿಗೆ 1,000 ರಿಯಾಯಿತಿ ದೊರೆಯಲಿದೆ. ಅಲ್ಲದೆ ಒನ್‌ಪ್ಲಸ್ ಸ್ಟೋರ್ ಆಪ್ ಬಳಸಿ ಮುಕ್ತ ಮಾರಾಟದ ಮೊದಲ 24 ಗಂಟೆಗಳಲ್ಲಿ ಶಾಪಿಂಗ್ ಮಾಡುವ ಗ್ರಾಹಕರು ಒನ್‌ಪ್ಲಸ್ ವಾಚ್ ಮತ್ತು ಇತರ ಉತ್ಪನ್ನಗಳನ್ನು ಗೆಲ್ಲುವ ಅವಕಾಶವನ್ನು ಹೊಂದಿದ್ದಾರೆ.

(Kannada Copy of  Gizbot Kannada)