ಹಾನರ್ 50 ಪ್ರೊ, ಹಾನರ್ 50 ಮತ್ತು ಹಾನರ್ 50 SE ಲಾಂಚ್; ಬೆಲೆ ಎಷ್ಟು?

17-06-21 05:33 pm       GIZBOT Mantesh   ಡಿಜಿಟಲ್ ಟೆಕ್

ಹಾನರ್‌ 50 ಸ್ಮಾರ್ಟ್‌ಫೋನ್‌ ಸರಣಿಯನ್ನು ಬಿಡುಗಡೆ ಮಾಡಿದ್ದು, ಈ ಸರಣಿಯು ಹಾನರ್ 50 ಪ್ರೊ, ಹಾನರ್ 50 ಮತ್ತು ಹಾನರ್ 50 SE ಸ್ಮಾರ್ಟ್‌ಫೋನ್‌ ಮಾಡೆಲ್‌ಗಳನ್ನು ಒಳಗೊಂಡಿದೆ.

ಪ್ರಮುಖ ಮೊಬೈಲ್‌ ಸಂಸ್ಥೆ ಹಾನರ್ ಹಲವು ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್ ಪರಿಚಯಿಸಿದೆ ಸೈ ಎನಿಸಿಕೊಂಡಿದೆ. ಬಜೆಟ್‌ ದರದ ಫೋನ್‌ಗಳ ಜೊತೆಗೆ ಫ್ಲ್ಯಾಗ್‌ಶಿಪ್ ಮಾದರಿಯ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇದೀಗ ಸಂಸ್ಥೆಯು ಹಾನರ್‌ 50 ಸ್ಮಾರ್ಟ್‌ಫೋನ್‌ ಸರಣಿಯನ್ನು ಬಿಡುಗಡೆ ಮಾಡಿದ್ದು, ಈ ಸರಣಿಯು ಹಾನರ್ 50 ಪ್ರೊ, ಹಾನರ್ 50 ಮತ್ತು ಹಾನರ್ 50 SE ಸ್ಮಾರ್ಟ್‌ಫೋನ್‌ ಮಾಡೆಲ್‌ಗಳನ್ನು ಒಳಗೊಂಡಿದೆ.

ಹೌದು, ಹಾನರ್‌ ಸಂಸ್ಥೆಯು ನೂತನವಾಗಿ ಹಾನರ್ 50 ಪ್ರೊ, ಹಾನರ್ 50 ಮತ್ತು ಹಾನರ್ 50 SE ಸ್ಮಾರ್ಟ್‌ಫೋನ್‌ಗಳನ್ನು ಚೀನಾದಲ್ಲಿ ಲಾಂಚ್ ಮಾಡಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು 120Hz ಸ್ಕ್ರೀನ್‌ ರೀಫ್ರೇಶ್ ರೇಟ್ ಹಾಗೂ 108 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಅನ್ನು ಒಳಗೊಂಡಿರುವುದು ಪ್ರಮುಖ ಹೈಲೈಟ್ ಆಗಿದೆ. ಇದರೊಂದಿಗೆ ವೇಗದ ಪ್ರೊಸೆಸರ್ ಸಪೋರ್ಟ್‌ ಪಡೆದಿವೆ. ಹಾಗಾದರೇ ಹಾನರ್ 50 ಪ್ರೊ, ಹಾನರ್ 50 ಮತ್ತು ಹಾನರ್ 50 SE ಫೋನ್‌ಗಳ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.



ಹಾನರ್ 50 ಪ್ರೊ- ಫೀಚರ್ಸ್

ಹಾನರ್ 50 ಪ್ರೊ ಸ್ಮಾರ್ಟ್‌ಫೋನ್ 2,676x1,236 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡ 6.72 ಇಂಚಿನ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್ ರೇಟ್ 120Hz ಆಗಿದೆ. ಹಾಗೆಯೇ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಈ ಫೋನ್ ನಾಲ್ಕು ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಆಗಿದೆ. ಇದರೊಂದಿಗೆ 4,000mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.



ಹಾನರ್ 50 - ಫೀಚರ್ಸ್

ಹಾನರ್ 50 ಪ್ರೊ ಸ್ಮಾರ್ಟ್‌ಫೋನ್ 2,340x1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡ 6.57 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್ ರೇಟ್ 120Hz ಆಗಿದೆ. ಹಾಗೆಯೇ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಈ ಫೋನ್ ನಾಲ್ಕು ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಆಗಿದೆ. ಇದರೊಂದಿಗೆ 4,300mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, 66W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇದೆ.



ಹಾನರ್ 50 SE - ಫೀಚರ್ಸ್

ಹಾನರ್ 50 SE ಸ್ಮಾರ್ಟ್‌ಫೋನ್ 2,388x1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡ 6.78 ಇಂಚಿನ ಹೆಚ್‌ಡಿ ಪ್ಲಸ್‌ LCD ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್ ರೇಟ್ 120Hz ಆಗಿದೆ. ಹಾಗೆಯೇ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಈ ಫೋನ್ ನಾಲ್ಕು ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಆಗಿದೆ. ಸೆಲ್ಫಿ ಕ್ಯಾಮೆರಾವು 32 ಮೆಗಾ ಪಿಕ್ಸಲ್ ಆಗಿದೆ. ಇದರೊಂದಿಗೆ 4,000mAh ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, 66W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಇದೆ.

(Kannada Copy of Gizbot Kannada)